ಹಿರಿಯ ಛಾಯಾಗ್ರಹಕ ಟಿ.ಎಲ್.ರಾಮಸ್ವಾಮಿ ನಿಧನ

ಬೆಂಗಳೂರು, ಎ.3: ಬೆಂಗಳೂರು ಪ್ರೆಸ್ ಕ್ಲಬ್ ನ ಸ್ಥಾಪಕ ಸದಸ್ಯರಾಗಿದ್ದ ಹಿರಿಯ ಛಾಯಾಗ್ರಾಹಕ ಟಿ.ಎಲ್. ರಾಮಸ್ವಾಮಿ(89) ಅವರು ಶುಕ್ರವಾರ ನಿಧನರಾಗಿದ್ದಾರೆ.
ಪ್ರಜಾವಾಣಿ ಪತ್ರಿಕೆಯಲ್ಲಿ ಸುಮಾರು 4 ದಶಕಗಳ ಕಾಲ ಹಿರಿಯ ಛಾಯಾಗ್ರಾಹಕರಾಗಿ ಕಾರ್ಯ ನಿರ್ವಹಿಸಿದ್ದರು. ಅತ್ಯಂತ ಅಪರೂಪದ ಚಿತ್ರಗಳನ್ನು ಇವರು ತಮ್ಮ ಸೇವಾವಧಿಯಲ್ಲಿ ಸೆರೆಹಿಡಿದಿದ್ದಾರೆ.
ರಾಜ್ಯೋತ್ಸವ, ಮಾಧ್ಯಮ ಅಕಾಡೆಮಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಇವರು ಭಾಜನಾರಾಗಿದ್ದರು. ಶುಕ್ರವಾರ ಮಧ್ಯಾಹ್ನ ಬನಶಂಕರಿ ಚಿತಾಗಾರದಲ್ಲಿ ಇವರ ಅಂತ್ಯಕ್ರಿಯೆ ನೆರವೇರಿದೆ. ಟಿ.ಎಲ್.ರಾಮಸ್ವಾಮಿ ನಿಧನಕ್ಕೆ ಪ್ರೆಸ್ ಕ್ಲಬ್ ಆಡಳಿತ ಮಂಡಳಿ ಸೇರಿದಂತೆ ಅನೇಕ ಪತ್ರಕರ್ತರು ಸಂತಾಪ ವ್ಯಕ್ತಪಡಿಸಿದ್ದಾರೆ.
Next Story





