ಮಂಗಳೂರು: ವಲಸೆ ಕಾರ್ಮಿಕರಿಗೆ ಆಹಾರ ಸಾಮಗ್ರಿ ವಿತರಣೆ

ಮಂಗಳೂರು, ಎ.5: ನಗರ ಪ್ರದೇಶದಲ್ಲಿ ಇತರ ಜಿಲ್ಲೆ ಹಾಗೂ ರಾಜ್ಯಗಳಿಂದ ವಲಸೆ ಬಂದು ಹೈೂಗೆಬಝಾರ್ ವಾರ್ಡಿನಲ್ಲಿ ನೆಲೆಸಿರುವ ವಲಸೆ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳನ್ನು ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಡಿ.ವೇದವ್ಯಾಸ್ ಕಾಮತ್ ಮನೆ ಮನೆಗೆ ತೆರಳಿ ವಿತರಿಸಿದರು.
ನಗರ ಪ್ರದೇಶದಲ್ಲಿ ಜನರು ಗುಂಪುಗೂಡುವುದು ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಸುತ್ತಾಡುವುದನ್ನು ನಿಷೇಧಿಸಲಾಗಿದೆ. ಆದರೆ ತುರ್ತು ಅವಶ್ಯಕತೆಗಳಿಗಾಗಿ ಅನೇಕ ಸೇವಾ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿದೆ. ಅಗತ್ಯ ಆಹಾರ ಪದಾರ್ಥ ಹಾಗೂ ಔಷಧ ಮುಂತಾದ ಸಾಮಗ್ರಿಗಳು ಬೇಕಿದ್ದರೆ ತುರ್ತು ಸಹಾಯವಾಣಿ ಕೇಂದ್ರಕ್ಕೆ ಕರೆ ಮಾಡಿದರೆ ವ್ಯವಸ್ಥೆ ಮಾಡಲಾಗುವುದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.
ಈ ಸಂದರ್ಭ ಮೇಯರ್ ದಿವಾಕರ್ ಪಾಂಡೇಶ್ವರ, ಸ್ಥಾಯಿ ಸಮಿತಿಯ ಅಧ್ಯಕ್ಷೆ ಪೂರ್ಣಿಮಾ, ಮನಪಾ ಸದಸ್ಯರಾದ ಭಾನುಮತಿ, ಸುಧೀರ್ ಶೆಟ್ಟಿ ಕಣ್ಣೂರು, ಮುಖಂಡರಾದ ರವಿಶಂಕರ್ ಮಿಜಾರ್, ಕಾರ್ಮಿಕ ಇಲಾಖೆಯ ಅಧಿಕಾರಿ ವಿಮಲಾ ಉಪಸ್ಥಿತರಿದ್ದರು.
Next Story





