ಮಂಗಳೂರು: 'ಮೋದಿ ಕಿಟ್' ವಿತರಣೆ

ಮಂಗಳೂರು, ಎ.5: ಮಂಗಳೂರು ನಗರ ದಕ್ಷಿಣ ವಿಧಾನಸಭಾ ವ್ಯಾಪ್ತಿಯ ಕಾರ್ಮಿಕರು ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ 500 ರೂ. ಮೌಲ್ಯದ ಆಹಾರ ಪದಾರ್ಥಗಳ ‘ಮೋದಿ ಕಿಟ್’ನ್ನು ಶಾಸಕ ವೇದವ್ಯಾಸ್ ಕಾಮತ್ ಹಾಗೂ ಸಂಸದ ನಳಿನ್ ಕುಮಾರ್ ವಿತರಿಸಿದರು.
ಲಾಕ್‌ಡೌನ್‌ನಿಂದಾಗಿ ಕೂಲಿ ಕಾರ್ಮಿಕರು, ಆರ್ಥಿಕವಾಗಿ ಹಿಂದುಳಿದವರಿಗೆ ಆಹಾರದ ಸಮಸ್ಯೆ ಎದುರಾಗಬಾರದು ಎನ್ನುವ ನಿಟ್ಟಿನಲ್ಲಿ ಸೇವಾ ತಂಡವನ್ನು ರಚಿಸಲಾಗಿದೆ. ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಕಾರ್ಪೊರೇಟರ್‌ಗಳನ್ನು ಒಳಗೊಂಡ ತಂಡವು ಸೇವಾಕಾರ್ಯದಲ್ಲಿ ತನ್ನನ್ನು ತೊಡಗಿಸಿಕೊಳ್ಳಲಿದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಈ ಸಂದರ್ಭ ಮೇಯರ್ ದಿವಾಕರ್ ಪಾಂಡೇಶ್ವರ, ಸ್ಥಾಯಿ ಸಮಿತಿಯ ಅಧ್ಯಕ್ಷೆ ಪೂರ್ಣಿಮಾ, ಸುಧೀರ್ ಶೆಟ್ಟಿ ಕಣ್ಣೂರು, ರವಿಶಂಕರ್ ಮಿಜಾರ್ ಮತ್ತಿತರರು ಉಪಸ್ಥಿತರಿದ್ದರು.
Next Story





