ರಾಜ್ಯದಲ್ಲಿಂದು ಏಳು ಕೊರೋನ ಪ್ರಕರಣಗಳು ದೃಢ: 151ಕ್ಕೆ ಏರಿದ ಸೋಂಕಿತರ ಸಂಖ್ಯೆ

ಸಾಂದರ್ಭಿಕ ಚಿತ್ರ
ಬೆಂಗಳೂರು, ಎ.5: ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ ರವಿವಾರ ಏಳು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 151ಕ್ಕೆ ಏರಿಕೆಯಾಗಿದೆ. ಅದರಲ್ಲಿ 4 ಜನರು ಮೃತಪಟ್ಟಿದ್ದು, 12 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಕೋವಿಡ್19 ಪೀಡಿತ 151 ರೋಗಿಗಳು(ಒಬ್ಬರು ಗರ್ಭಿಣಿ) ಗೊತ್ತುಪಡಿಸಿದ ಆಸ್ಪತ್ರೆಗಳ ಪ್ರತ್ಯೇಕ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯವು ಸ್ಥಿರವಾಗಿದ್ದು, ಮೂವರನ್ನು ಐಸಿಯುನಲ್ಲಿ ಇಡಲಾಗಿದೆ. ಸೋಂಕಿತರ ಪೈಕಿ ಮೂವರು ಬೆಳಗಾವಿ ಮೂಲದವರಾಗಿದ್ದರೆ, ಇಬ್ಬರು ಬೆಂಗಳೂರು ಹಾಗೂ ಒಬ್ಬರು ಬಳ್ಳಾರಿ ಮೂಲದವರು.
ಕರ್ನಾಟಕದಲ್ಲಿ ಪತ್ತೆಯಾದ ಒಟ್ಟು ಸೋಂಕಿತ ಪ್ರಕರಣಗಳಲ್ಲಿ 8 ಪ್ರಕರಣಗಳು ಕೇರಳ ಮೂಲದ್ದಾಗಿದ್ದು, ಅವರು ಕರ್ನಾಟಕದ ವಿಮಾನ ನಿಲ್ದಾಣಗಳ ಮೂಲಕ ಪ್ರಯಾಣಿಸಿದ್ದರು ಎಂದು ಆರೋಗ್ಯ ಇಲಾಖೆ ತಿಳಿಸಿದೆ.
Next Story





