ದೇಶಾದ್ಯಂತ ದೀಪ ಬೆಳಗಿದ ಜನರು: ಕೊರೋನ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟು ಪ್ರದರ್ಶನ
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರ ಕರೆಯಂತೆ ದೇಶಾದ್ಯಂತ ಜನರು ರಾತ್ರಿ 9 ಗಂಟೆಗೆ ವಿದ್ಯುತ್ ದೀಪಗಳನ್ನು ಆರಿಸಿ, ದೀಪ, ಕ್ಯಾಂಡಲ್ ಗಳನ್ನು ಬೆಳಗಿಸಿ ಕೊರೋನ ವಿರುದ್ಧದ ಹೋರಾಟದಲ್ಲಿ ಏಕತೆಯನ್ನು ಪ್ರದರ್ಶಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ತಮ್ಮ ಮನೆಗಳ ಮುಂಭಾಗ ದೀಪ ಹಚ್ಚಿದರು.