Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶೋಭಾ ಕರಂದ್ಲಾಜೆ ವಿರುದ್ಧ ಕ್ರಿಮಿನಲ್...

ಶೋಭಾ ಕರಂದ್ಲಾಜೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ: ಪಾಪ್ಯುಲರ್ ಫ್ರಂಟ್

ವಾರ್ತಾಭಾರತಿವಾರ್ತಾಭಾರತಿ5 April 2020 10:27 PM IST
share
ಶೋಭಾ ಕರಂದ್ಲಾಜೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ: ಪಾಪ್ಯುಲರ್ ಫ್ರಂಟ್

ಬೆಂಗಳೂರು, ಎ.5: ತಬ್ಲೀಗ್ ಜಮಾಅತ್ ಸಭೆಯಲ್ಲಿ ಪಾಲ್ಗೊಂಡವರ ಕುರಿತು ಸಂಸದೆ ಶೋಭಾ ಕರಂದ್ಲಾಜೆ ನೀಡಿರುವ ಹೇಳಿಕೆಯನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್ ತೀವ್ರವಾಗಿ ಖಂಡಿಸಿದ್ದಾರೆ.

"ನಿಝಾಮುದ್ದೀನ್‍ ತಬ್ಲೀಗ್ ಜಮಾಅತ್‍ನಲ್ಲಿ ಭಾಗವಹಿಸಿದ್ದವರು, ದೇಶಾದ್ಯಂತ ಕೊರೋನ ಹಬ್ಬಿಸುವ ದುಷ್ಕೃತ್ಯ ನಡೆಸಿದ್ದಾರೆ. ಇದರ ಹಿಂದೆ ಕೊರೋನ ಜಿಹಾದ್‍ನ ವಾಸನೆ ಬಡಿಯುತ್ತಿದೆ" ಎಂದು ಶೋಭಾ ಹೇಳಿಕೆ ನೀಡಿದ್ದಾರೆ. ವಾಸ್ತವದಲ್ಲಿ ಅವರ ಜಿಹಾದ್ ಪದ ಬಳಕೆಯು ಒಂದು ನಿರ್ದಿಷ್ಟ ಸಮುದಾಯವನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸುವ ಪಿತೂರಿಯಾಗಿರುತ್ತದೆ. ಕೇಂದ್ರ ಸರಕಾರ ಏಕಾಏಕಿ ಹೇರಿರುವ ಲಾಕ್‍ಡೌನ್ ಕ್ರಮವು ಬಹಳಷ್ಟು ಅವಾಂತರಗಳನ್ನು ಸೃಷ್ಟಿಸಿದ್ದು, ಲಕ್ಷಾಂತರ ಮಂದಿಯನ್ನು ಬೀದಿಪಾಲು ಮಾಡಿದೆ. ಬವಣೆಪಡುತ್ತಿರುವ ಜನರ ಹೃದಯವಿದ್ರಾವಕ ದೃಶ್ಯಗಳು ಮಾಧ್ಯಮಗಳಲ್ಲಿ ಈಗಾಗಲೇ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಲಾಕ್‍ಡೌನ್‍ಗೂ ಮೊದಲೇ ಮರ್ಕಝ್ ಕೇಂದ್ರದಲ್ಲಿ ಸೇರಿದ್ದ ಸಾವಿರಾರು ಸಂಖ್ಯೆಯ ಜನರನ್ನು ಕೂಡಲೇ ತೆರವುಗೊಳಿಸಲು ವ್ಯವಸ್ಥೆ ಕಲ್ಪಿಸಬೇಕೆನ್ನುವ ಸಂಘಟಕರ ಮನವಿಗೆ ಆಡಳಿತ ವರ್ಗವು ತೋರಿದ ನಿರ್ಲಕ್ಷ್ಯವು ಅಲ್ಲಿನ ಘಟನೆಗೆ ಮೂಲ ಕಾರಣ ಎಂಬ ವಿಚಾರವನ್ನು ವರದಿಗಳ ಮೂಲಕ ತಿಳಿಯಬಹುದು. ಆದರೆ ಪೂರ್ವಾಗ್ರಹಪೀಡಿತ ಮಾಧ್ಯಮಗಳು ಈ ಘಟನೆಗೆ ಕೋಮು ಬಣ್ಣ ಹಚ್ಚಿ ಅತಿರಂಜಿತ ವರದಿಯನ್ನು ಪ್ರಕಟಿಸುತ್ತಿವೆ. ಜೊತೆಗೆ ಕೆಲವೊಂದು ಟಿವಿ ಚಾನೆಲ್‍ಗಳು ಘಟನೆಗೆ ಸಂಬಂಧವೇ ಇಲ್ಲದ ಹಳೆಯ ವಿಡಿಯೋಗಳನ್ನು ಪ್ರಸಾರ ಮಾಡಿ ಸಮಾಜದಲ್ಲಿ ಭಯಾತಂಕವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿವೆ.

ಶೋಭಾ ಕರಂದ್ಲಾಜೆ ಈ ಹಿಂದೆಯೂ ಬಹಳಷ್ಟು ಬಾರಿ ಇಂತಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಾ ಸಮಾಜದಲ್ಲಿ ಕೋಮು ಸಾಮರಸ್ಯ ಕದಡಲು ಪ್ರಯತ್ನಿಸಿದ್ದರು. ಇದಕ್ಕಾಗಿ ಅವರ ವಿರುದ್ಧ ಕಾನೂನು ಕ್ರಮವನ್ನೂ ಕೈಗೊಳ್ಳಲಾಗಿತ್ತು ಮತ್ತು ಈ ಸಂಬಂಧ ಅವರು ನ್ಯಾಯಾಲಯದಲ್ಲಿ ಜಾಮೀನನ್ನು ಪಡೆದಿದ್ದರು. ಇದೀಗ ಮತ್ತೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸುವುದಾಗಿ ಎ.ಕೆ.ಅಶ್ರಫ್ ತಿಳಿಸಿದ್ದಾರೆ.

ಅದೇ ರೀತಿ ದಿಲ್ಲಿಯ ತಬ್ಲೀಗ್ ಜಮಾತ್ ವಿಚಾರವಾಗಿ ಮುಸ್ಲಿಮರ ತೇಜೋವಧೆ ನಡೆಸುವ ಅಭಿಯಾನವನ್ನು ಮಾಧ್ಯಮಗಳು ಕೈಬಿಡಬೇಕೆಂದು ಅವರು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X