Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರೋನ ವೈರಸ್ ವಿರುದ್ಧ ಸಂಘಟಿತ...

ಕೊರೋನ ವೈರಸ್ ವಿರುದ್ಧ ಸಂಘಟಿತ ಹೋರಾಟಕ್ಕೆ ಮುಸ್ಲಿಂ ಜಮಾಅತ್ ಕರೆ

ವಾರ್ತಾಭಾರತಿವಾರ್ತಾಭಾರತಿ6 April 2020 4:56 PM IST
share

ಮಂಗಳೂರು : ಕೊರೋನ ವೈರಸ್ ಮನುಷ್ಯರನ್ನು ಮತಭೇದವಿಲ್ಲದೆ ತೀವ್ರವಾಗಿ ಕಾಡುತ್ತಿರುವ ಈ ಹೊತ್ತಿನಲ್ಲಿ ಪ್ರತಿಯೊಬ್ಬರೂ ಒಗ್ಗಟ್ಟಾಗಿ ತೀವ್ರ ಪ್ರತಿರೋಧ ಒಡ್ಡಬೇಕಾಗಿದೆ ಎಂದು ಕರ್ನಾಟಕ ಮುಸ್ಲಿಂ ಜಮಾತ್ ರಾಜ್ಯ ಸಮಿತಿ ಅಭಿಪ್ರಾಯಪಟ್ಟಿದೆ.

ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ರಾಜ್ಯ ಕಾರ್ಯಕಾರಿ ಸಮಿತಿಯು ಈ ಬಗ್ಗೆ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ರೋಗಾಣು ನಿಯಂತ್ರಣ ಸಂಬಂಧವಾಗಿ ನೀಡುತ್ತಿರುವ ಎಲ್ಲ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಪ್ರತಿಯೊಬ್ಬರೂ ಬದ್ಧರಾಗಿರಬೇಕು. ಮಸೀದಿ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಆಸಕ್ತ ತೋರುವ ಮುಸ್ಲಿಂ ಸಮುದಾಯವು ಇಂದಿನ ಪ್ರತಿಕೂಲ ಪರಿಸ್ಥಿತಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಸಲುವಾಗಿ ಎಲ್ಲ ಧಾರ್ಮಿಕ ಚಟುವಟಿಕೆಗಳನ್ನು ತಮ್ಮ ತಮ್ಮ ಮನೆಗಳಿಗೆ ಸೀಮಿತಗೊಳಿಸಬೇಕು. ಮುಸ್ಲಿಮರಿಗೆ ಬಹಳ ಪವಿತ್ರವಾಗಿರುವ ಶಬೇ ಬರಾಅತ್ ರಾತ್ರಿಯ ಪ್ರಾರ್ಥನೆಗಳಿಗೆ ಕೂಡ ಮಸೀದಿಯನ್ನು ಅವಲಂಬಿಸಬಾರದು.

ಪ್ರಾರ್ಥನೆಗೆ ವಿಶೇಷ ಫಲವಿರುವ ಪ್ರಸ್ತುತ ರಾತ್ರಿ ಪ್ರತಿಯೊಬ್ಬರೂ ಮನೆಗಳಲ್ಲಿ ಕುಟುಂಬ ಸಮೇತ ಪಠಣ, ಪ್ರಾರ್ಥನೆಗಳನ್ನು ನಡೆಸುವ ಮೂಲಕ ಮನೆಗಳಲ್ಲಿ ಮಸೀದಿಯ ವಾತಾವರಣ ಸೃಷ್ಟಿಸಬೇಕು. ಕಳೆದ ಎರಡು ವಾರಗಳಂತೆ ಮುಂದಿನ ಶುಕ್ರವಾರವೂ ಯಾವುದೇ ಕಾರಣಕ್ಕೂ ಮಸೀದಿಗಳಲ್ಲಿ ಜುಮಾ ಪ್ರಾರ್ಥನೆ ನಡೆಸಲು ಮುಂದಾಗಬಾರದು.

ಕೊರೋನ ವೈರಸ್ ಹರಡುವಾಗ ಅದು ಯಾವುದೇ ಜಾತಿ ಮತಗಳ ನಡುವೆ ತಾರತಮ್ಯ ಮಾಡುವುದಿಲ್ಲ. ಹೀಗಿರುವಾಗ ನಾವು ಕೂಡ ನಮ್ಮೊಳಗೆ ತಾರತಮ್ಯ ಮಾಡದೆ ಇಡೀ ಮಾನವಕುಲ ಒಂದಾಗಿ ಹೋರಾಡಬೇಕು. ಈ ನಡುವೆ ಕೆಲವು ಕಡೆಗಳಲ್ಲಿ ಕಂಡು ಬಂದಿರುವ ಕೋಮುವಾದಿ ನಡೆನುಡಿಗಳು ದುರಾದೃಷ್ಟಕರ. ತಬ್ಲೀಗಿ ಜಮಾತಿನ ಸಮ್ಮೇಳನದ ನೆಪದಲ್ಲಿ ಇಡೀ ಒಂದು ಸಮುದಾಯವನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸುವುದು ಅಕ್ಷಮ್ಯ. ತಬ್ಲೀಗಿ ಸಮ್ಮೇಳನಕ್ಕೆ ತೆರಳಿದವರು ಸರ್ಕಾರದ ಆದೇಶದಂತೆ ಸೂಕ್ತ ತಪಾಸಣೆ ಮತ್ತು ಚಿಕಿತ್ಸೆಗಳಿಗೆ ಒಳಗಾಗದೆ ಸಮಾಜದಲ್ಲಿ ಆತಂಕ, ಅಪನಂಬಿಕೆಗಳನ್ನು ಹುಟ್ಟುಹಾಕುತ್ತಿರುವುದು ಖಂಡನೀಯ. ಇಸ್ಲಾಂ ಎಂಬುದರ ಒಂದು ಅರ್ಥವೇ ಅನುಸರಣೆ ಎಂದಾಗಿದ್ದು, ಸರ್ಕಾರದ ಆದೇಶ ಹಾಗೂ ಉಲಮಾಗಳ ನಿರ್ದೇಶನಗಳನ್ನು ಅನುಸರಿಸಬೇಕು. ಶಂಕಾಸ್ಪದ ವ್ಯಕ್ತಿಗಳು ಸ್ವಯಂ ಪ್ರೇರಣೆಯಿಂದ ತಪಾಸಣೆ, ಚಿಕಿತ್ಸೆ ಹಾಗೂ ಸ್ವಯಂ ಗೃಹಬಂಧನಕ್ಕೆ ಒಳಗಾಗಬೇಕು. ತಮ್ಮಿಂದಾಗಿ ಇತರರು ಸೋಂಕಿತರಾಗಬಾರದೆಂಬ ಸಾಮಾಜಿಕ ಪ್ರಜ್ಞೆ ಹೊಂದಿರಬೇಕು‌.

ಯಾವುದಾದರೂ ಕ್ಷುಲ್ಲಕ ವ್ಯಕ್ತಿಗಳು ಕೊರೋನದ ಹಿನ್ನೆಲೆಯಲ್ಲಿ ಮುಸ್ಲಿಮರ ವಿರುದ್ಧ ಟೀಕೆ ಮಾಡಿರುವುದಕ್ಕೆ ಸಮುದಾಯ ತಲೆಕೆಡಿಸಬೇಕಿಲ್ಲ. ಆ ಕಾರಣಕ್ಕಾಗಿ ಹಿಂದೂಗಳನ್ನು ಟೀಕಿಸುವುದಕ್ಕೂ ಅವರ ಪೈಕಿ ಯಾರಾದರೂ ಮಾಡುವ ತಪ್ಪುಗಳನ್ನು ವೈಭವೀಕರಿಸುವುದಕ್ಕೂ ಹೋಗುವುದರಿಂದ ಸಾಮುದಾಯಿಕ ಅಂತರ ಮತ್ತಷ್ಟು ಹೆಚ್ಚುತ್ತದೆ. ಟೀಕೆಗಳಿಗೆ ಉತ್ತರಿಸುವ ಬದಲು ಎಲ್ಲರ ಸಮಾನ ವೈರಿಯಾಗಿರುವ ವೈರಸ್ ವಿರುದ್ಧ ಹೋರಾಡುವುದಕ್ಕಷ್ಟೇ ಗಮನಹರಿಸಬೇಕಾಗಿದೆ. ಮುಸ್ಲಿಮರನ್ನು ಆರೋಪಿ ಸ್ಥಾನದಲ್ಲಿ ಬಿಂಬಿಸುವ ಕೋಮು ಕ್ರಿಮಿಗಳ ಬಗ್ಗೆ ಬಹುಸಂಖ್ಯೆಯ ಹಿಂದೂಗಳೇ ವಿರೋಧ ಹೊಂದಿರುವುದನ್ನು ಮರೆಯಬಾರದು. ಸಮಾಜ, ದೇಶ ಹಾಗೂ ಒಟ್ಟು ಮನುಕುಲದ ಹಿತದೃಷ್ಟಿಯಿಂದ ಎಲ್ಲರೂ ಒಂದಾಗಬೇಕು ಎಂಬ ಪಾಠವನ್ನು ಕೊರೋನದಿಂದ ಕಲಿತುಕೊಳ್ಳಬೇಕಾಗಿದೆ ಎಂದು ಮುಸ್ಲಿಂ ಜಮಾತ್ ನಾಯಕರು ಅಭಿಪ್ರಾಯಪಟ್ಟಿದ್ದಾರೆ.  ಇದೇ ವೇಳೆಯಲ್ಲಿ ಈ ವಿಚಾರವಾಗಿ ರಾಜ್ಯದ ಮುಸಲ್ಮಾನರು ವಿರುದ್ಧ ಹೇಳಿಕೆ ಹಾಗೂ ಅಪಪ್ರಚಾರ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೇಳಿಕೆ ಪ್ರಶಂಸನೀಯ ಎಂದು ಅವರು ತಿಳಿಸಿದ್ದಾರೆ.

ಸಂಘಟನೆಯ ರಾಜ್ಯಾಧ್ಯಕ್ಷ ಮೌಲಾನಾ ಮುಫ್ತಿ ಅನ್ವರ್ ಅಲಿ ಖಾದಿರಿ ರಾಮನಗರ, ಪ್ರಧಾನ ಕಾರ್ಯದರ್ಶಿ ಎನ್ ಕೆ ಎಂ ಶಾಫಿ ಸಅದಿ ಬೆಂಗಳೂರು, ಕೋಶಾಧಿಕಾರಿ ಯೆನಪೋಯ ಅಬ್ದುಲ್ಲಾ ಕುಂಞಿ ಹಾಜಿ ಮಂಗಳೂರು, ನಾಯಕರಾದ ಮಹ್ಮೂದ್ ಮುಸ್ಲಿಯಾರ್ ಕೊಡಗು, ಡಾ. ಮುಹಮ್ಮದ್ ಫಾಝಿಲ್ ರಝ್ವಿ ಚನ್ನರಾಯಪಟ್ಟಣ, ಮೌಲಾನಾ ಅಬೂ ಸುಫಿಯಾನ್ ಮದನಿ,  ಮೌಲಾನಾ ಶಬೀರ್ ಅಲಿ ಬೆಂಗಳೂರು, ಮೌಲಾನಾ ನಫೀಸ್ ಹಬೀಬೀ ತುಮಕೂರು, ಸಯ್ಯಿದ್ ಮುಖ್ತಾರ್ ಅಹ್ಮದ್ ರಝ್ವಿ ದಾವಣಗೆರೆ, ಉಮರ್ ಹಾಜಿ ಬೆಂಗಳೂರು, ಇಕ್ಬಾಲ್ ಸೇಟ್ ಶಿವಮೊಗ್ಗ, ಕೆ ಎಂ ಅಬೂಬಕರ್ ಸಿದ್ದೀಖ್ ಚಿಕ್ಕಮಗಳೂರು, ಮುಮ್ತಾಝ್ ಅಲೀ ಮಂಗಳೂರು, ಎಸ್ ಎಮ್ ರಶೀದ್ ಹಾಜಿ ಮಂಗಳೂರು, ಮುಹಮ್ಮದ್ ಹಾಜಿ ಸಾಗರ, ಯಾಕೂಬ್ ಯೂಸುಫ್ ಹೊಸನಗರ, ಗೌಸ್ ವರದ ಬಳ್ಳಾರಿ,  ಹಮೀದ್ ಬಜ್ಪೆ, ಎಂಬಿಎಂ ಸಾದಿಕ್ ಮೊದಲಾದವರು ಸಭೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X