Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಸೋಮವಾರ 36 ಮಂದಿಯ ಸ್ಯಾಂಪಲ್...

ಉಡುಪಿ: ಸೋಮವಾರ 36 ಮಂದಿಯ ಸ್ಯಾಂಪಲ್ ಪರೀಕ್ಷೆಗೆ

ವಾರ್ತಾಭಾರತಿವಾರ್ತಾಭಾರತಿ6 April 2020 8:36 PM IST
share

ಉಡುಪಿ, ಎ.6: ಶಂಕಿತ ನೋವೆಲ್ ಕೊರೋನ ವೈರಸ್ (ಕೋವಿಡ್-19) ಸೋಂಕಿಗಾಗಿ ಇಂದು ಒಟ್ಟು 36 ಮಂದಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಶಂಕಿತ ಕೋವಿಡ್-19ರ ಸೋಂಕಿಗಾಗಿ ಒಬ್ಬರು ಹಾಗೂ ಶಂಕಿತ ರ ಸಂಪರ್ಕಕ್ಕಾಗಿ 32 ಮಂದಿ ಅಲ್ಲದೇ ಉಸಿರಾಟದ ತೊಂದರೆ ಎದುರಿಸು ತ್ತಿರುವ ಮೂವರ ಗಂಟಲು ದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಈ ವರದಿ ಒಂದೆರಡು ದಿನಗಳಲ್ಲಿ ಕೈಸೇರುವ ನಿರೀಕ್ಷೆ ಇದೆ ಎಂದರು.

ಸೋಮವಾರ ಒಟ್ಟು ನಾಲ್ವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರೆ ಲ್ಲರೂ ಉಸಿರಾಟದ ತೊಂದರೆಗಾಗಿ ಆಸ್ಪತ್ರೆಗೆ ಬಂದಿದ್ದಾರೆ. ಇವರಲ್ಲಿ ಮೂವರು ಪುರುಷರು ಹಾಗೂ ಓರ್ವ ಮಹಿಳೆ ಇದ್ದಾರೆ. ಇಂದು ಸ್ಯಾಂಪಲ್ ಪರೀಕ್ಷೆಗಾಗಿ ಕಳುಹಿಸಿದ 32 ಮಂದಿ ಈಗಾಗಲೇ ಆಸ್ಪತ್ರೆ ಕ್ವಾರಂಟೈನ್‌ ನಲ್ಲಿದ್ದು, ಸೋಂಕಿತರ ಸಂಪರ್ಕಕ್ಕೆ ಬಂದವದ್ದಾಗಿದೆ ಎಂದು ಡಿಎಚ್‌ಓ ವಿವರಿಸಿದರು.

ನಿನ್ನೆಯವರೆಗೆ ಬರಬೇಕಾಗಿದ್ದ 40 ಮಂದಿಯ ಸ್ಯಾಂಪಲ್‌ಗಳ ಪರೀಕ್ಷೆಯಲ್ಲಿ 31 ವರದಿ ತಮ್ಮ ಕೈಸೇರಿದ್ದು, ಇವೆಲ್ಲವೂ ಸೋಂಕಿಗೆ ನೆಗೆಟಿವ್ ಆಗಿವೆ ಎಂದು ಡಾ. ಸೂಡ ತಿಳಿಸಿದರು. ಹೀಗಾಗಿ ಉಳಿದ 9 ಮಂದಿ ಹಾಗೂ ಇಂದಿನ 36 ಸೇರಿದಂತೆ ಒಟ್ಟು 45 ಮಂದಿಯ ಸ್ಯಾಂಪಲ್ ವರದಿ ಇನ್ನು ಬರಬೇಕಾಗಿದೆ. ಈ ಮೂಲಕ ಇದುವರೆಗೆ ಜಿಲ್ಲೆಯಿಂದ ಕಳುಹಿಸಿದ 269 ಮಂದಿಯ ಸ್ಯಾಂಪಲ್‌ಗಳಲ್ಲಿ 221 ಮಂದಿಯ ವರದಿ ನೆಗೆಟಿವ್ ಆಗಿ ಬಂದಿದ್ದರೆ, ಮೂವರದ್ದು ಮಾತ್ರ ಪಾಸಿಟಿವ್ ಆಗಿದೆ ಎಂದವರು ವಿವರಿಸಿದರು.

ಸೋಮವಾರ ಜಿಲ್ಲೆಯಲ್ಲಿ 20 ಮಂದಿ ಕೋವಿಡ್-19ರ ತಪಾಸಣೆಗಾಗಿ ನೋಂದಣಿಗೊಂಡಿದ್ದಾರೆ. ಈ ಮೂಲಕ ಇದುವರೆಗೆ ಒಟ್ಟು 1996 ಮಂದಿ ತಪಾಸಣೆಗಾಗಿ ನೋಂದಣಿ ಮಾಡಿಕೊಂಡಂತಾಗಿದೆ. ಇವರಲ್ಲಿ ಇಂದು 219 ಮಂದಿ 28 ದಿನಗಳ ನಿಗಾ ಪೂರೈಸಿದ್ದರೆ, 1580 (433) ಮಂದಿ 14 ದಿನಗಳ ನಿಗಾವನ್ನು ಪೂರ್ಣಗೊಳಿಸಿದ್ದಾರೆ. ಒಟ್ಟು 339 ಮಂದಿ ಹೋಮ್ ಕ್ವಾರಂಟೈನ್ ಹಾಗೂ 63 ಮಂದಿ ಆಸ್ಪತ್ರೆ ಕ್ವಾರಂಟೈನ್‌ ನಲ್ಲಿದ್ದಾರೆ. ಇಂದು 37 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದರು.

ಸೋಮವಾರ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಕೋವಿಡ್-19ರ ಕುರಿತು ಜಿಲ್ಲೆಯ ವೈದ್ಯಾಧಿಕಾರಿಗಳಿಗೆ ಝೂಮ್ ಆ್ಯಪ್ ಮೂಲಕ ತರಬೇತಿ ಕಾರ್ಯ ಕ್ರಮವನ್ನು ಆಯೋಜಿಸಲಾಗಿತ್ತು.

ಎಂದಿನಂತೆ ಜಿಲ್ಲೆಯ ಆರೋಗ್ಯ ಇಲಾಖೆಯ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಕೋವಿಡ್-19 ಕುರಿತು ಜಾಗೃತಿ ಮತ್ತು ಮಾಹಿತಿಗಳನ್ನು ನೀಡಿದರು. ಇದಕ್ಕಾಗಿ ಅನುಕರಿಸ ಬೇಕಾದ ಎಚ್ಚರಿಕೆಯ ಕುರಿತು ತಿಳಿಸಿದರು. ಇವರು ಇಂದು ನಾಡ, ಪೆರ್ಣಂಕಿಲ, ಕಿರಿಮಂಜೇಶ್ವರ, ಪಳ್ಳಿ, ಬೆಳ್ಮಣ್ಣು, ದುರ್ಗಾ, ಕುಂಭಾಶಿ, ಇರ್ವತ್ತೂರು, ಸಿದ್ಧಾಪುರ ಗ್ರಾವುಗಳ ಮನೆಗಳಿಗೆ ಭೇಟಿ ನೀಡಿದರು.

ಮೊದಲ ಸೋಂಕಿತನ ಸ್ಯಾಂಪಲ್ ಮರು ಪರೀಕ್ಷೆಗೆ

ಜಿಲ್ಲೆಯಲ್ಲಿ ಮಾ.26ರಂದು ಕೋವಿಡ್-19 ಸೋಂಕು ಮೊತ್ತ ಮೊದಲನೇ ಯದಾಗಿ ಪತ್ತೆಯಾದ ಮಣಿಪಾಲದ 34ರ ಹರೆಯದ ಯುವಕನ ಗಂಟಲು ದ್ರವವನ್ನು ನಿನ್ನೆ ಮರು ಪರೀಕ್ಷೆಗಾಗಿ ಶಿವಮೊಗ್ಗಕ್ಕೆ ಕಳುಹಿಸಲಾಗಿದೆ ಎಂದು ಡಿಎಚ್‌ಓ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇದೀಗ ಉಡುಪಿಯ ಡಾ.ಟಿಎಂಎ ಪೈ ಕೋವಿಡ್ ಆಸ್ಪತ್ರೆಯಲ್ಲಿ ಐಸೋಲೇಷನ್ ವಾರ್ಡಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಈ ಯುವಕ, ವೇಗವಾಗಿ ಗುಣಮುಖರಾಗುತಿದ್ದು, ಅವರ ಗಂಟಲು ದ್ರವವನ್ನು ಮೊದಲ ಪರೀಕ್ಷೆಗಾಗಿ ನಿನ್ನೆ ಕಳುಹಿಸಲಾಗಿದೆ. ನಾಳೆ ಇದರ ವರದಿ ಬರುವ ನಿರೀಕ್ಷೆ ಇದ್ದು, ಆ ಬಳಿಕ ಮತ್ತೊಮ್ಮೆ ಅವರ ಸ್ಯಾಂಪಲ್‌ನ ಪರೀಕ್ಷೆ ನಡೆಸಿ, ಎರಡೂ ನೆಗೆಟಿವ್ ಬಂದರೆ 14 ದಿನಗಳ ಬಳಿಕ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ಅದೇ ರೀತಿ ಮಾ.29ರಂದು ಸೋಂಕು ಪತ್ತೆಯಾದ ಉಡುಪಿಯ ಇಬ್ಬರು ಯುವಕರೂ ಸಹ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿ ದ್ದಾರೆ. ಈ ವಾರದ ಕೊನೆಗೆ ಅವರ ಸ್ಯಾಂಪಲ್‌ನ್ನು ಪರೀಕ್ಷೆಗೆ ಕಳುಹಿಸಬಹುದು ಎಂದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X