Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ ವೈರಸ್: ಆರೋಗ್ಯ ಸಿಬ್ಬಂದಿಗಳಿಗೆ...

ಕೊರೋನ ವೈರಸ್: ಆರೋಗ್ಯ ಸಿಬ್ಬಂದಿಗಳಿಗೆ ಭದ್ರತೆ ಕೋರಿ ಸುಪ್ರೀಂಗೆ ಅರ್ಜಿ

ವಾರ್ತಾಭಾರತಿವಾರ್ತಾಭಾರತಿ6 April 2020 11:46 PM IST
share
ಕೊರೋನ ವೈರಸ್: ಆರೋಗ್ಯ ಸಿಬ್ಬಂದಿಗಳಿಗೆ ಭದ್ರತೆ ಕೋರಿ ಸುಪ್ರೀಂಗೆ ಅರ್ಜಿ

ತಿರುವನಂತಪುರ, ಎ.6: ಕೊರೋನ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುವ ಸಂದರ್ಭ ತೀವ್ರ ಅಪಾಯವನ್ನು ಎದುರಿಸುತ್ತಿರುವ ಆರೋಗ್ಯಸೇವೆಯ ಸಿಬ್ಬಂದಿಗಳಿಗೆ ಸೂಕ್ತ ಭದ್ರತೆ ನೀಡುವ ನಿಟ್ಟಿನಲ್ಲಿ ರಾಷ್ಟ್ರೀಯ ಶಿಷ್ಟಾಚಾರ ನಿಯಮಾವಳಿಯನ್ನು ರೂಪಿಸುವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಕೇರಳದ ನರ್ಸ್‌ಗಳ ಸಂಘ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಕೊರೋನ ವೈರಸ್ ನಿರಂತರವಾಗಿ ಹರಡುತ್ತಿದ್ದು ಈ ಸಾಂಕ್ರಾಮಿಕ ರೋಗದಿಂದ ತಮ್ಮನ್ನು ರಕ್ಷಿಸಿಕೊಳ್ಳಲು ನರ್ಸ್‌ಗಳಿಗೆ ಸರಿಯಾದ ವ್ಯವಸ್ಥೆಗಳಿಲ್ಲ ಎಂದು ರ್ಜಿಯಲ್ಲಿ ತಿಳಿಸಲಾಗಿದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯ ಪ್ಯಾಕೇಜ್‌ನಡಿ ಒದಗಿಸಲಾಗಿರುವ ವೈಯಕ್ತಿಕ ಅಪಘಾತ ಯೋಜನೆಯ ವ್ಯಾಪ್ತಿಯನ್ನು ವಿಸ್ತರಿಸಿ ಕೊರೋನ ಸೋಂಕಿನ ವಿರುದ್ಧ ಹೋರಾಡುತ್ತಿರುವ ಎಲ್ಲರಿಗೂ (ತಾತ್ಕಾಲಿಕ ಆಧಾರದಲ್ಲಿ ನೇಮಕವಾದವರ ಸಹಿತ) ಲಭ್ಯವಾಗಿಸಬೇಕು ಎಂದು ಅರ್ಜಿಯಲ್ಲಿ ವಿನಂತಿಸಲಾಗಿದೆ.

ಸಂಘದಲ್ಲಿ ಸುಮಾರು 3.8 ಲಕ್ಷ ನರ್ಸ್‌ಗಳಿದ್ದಾರೆ. ಆರೋಗ್ಯಸೇವಾ ಕ್ಷೇತ್ರದ ಸಿಬ್ಬಂದಿಗಳು ಕೊರೋನ ಸೋಂಕಿನ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕಾರಣ ಅವರಿಗೆ ಸೋಂಕು ಹರಡುವ ಅಪಾಯ ಹೆಚ್ಚಿದೆ. ಅಲ್ಲದೆ ಹಲವು ಆಸ್ಪತ್ರೆಗಳಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಉತ್ತಮ ಗುಣಮಟ್ಟದ ವೈಯಕ್ತಿಕ ಸುರಕ್ಷಾ ಸಾಧನದ ಕೊರತೆಯಿದೆ. ಕೊರೋನ ಸೋಂಕು ಪರೀಕ್ಷಿಸುವ ಕಿಟ್‌ಗಳ ಕೊರತೆಯಿದೆ. ಅಲ್ಲದೆ ಕ್ವಾರಂಟೈನ್ ವಾರ್ಡ್‌ಗಳಲ್ಲಿ ಮೂಲಸೌಲಭ್ಯಗಳ ಕೊರತೆಯಿದೆ. ಅಲ್ಲದೆ ಕೆಲವು ಆಸ್ಪತ್ರೆಗಳಲ್ಲಿ ಸಾರಿಗೆ ಸೌಲಭ್ಯ ನೀಡದೆ ಹೆಚ್ಚುವರಿ (ಓವರ್‌ಟೈಮ್) ಕರ್ತವ್ಯ ನಿರ್ವಹಿಸುವಂತೆ ಒತ್ತಡ ಹೇರಲಾಗುತ್ತಿದೆ. ರಜೆ ಪಡೆದರೆ ವೇತನದಲ್ಲಿ ಕಡಿತ ಮಾಡಲಾಗುತ್ತಿದೆ.

ಗರ್ಭೀಣಿಯಾದವರು ಅಥವಾ ಸ್ತನ್ಯಪಾನ ಮಾಡಿಸುತ್ತಿರುವವರನ್ನೂ ಅಧಿಕ ಅಪಾಯವಿರುವ ಕಾರ್ಯ ನಿರ್ವಹಿಸಲು ಬಲವಂತ ಪಡಿಸಲಾಗುತ್ತಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯಸೇವೆಯ ಸಿಬಂದಿಗಳಿಗೆ ಸೂಕ್ತ ಭದ್ರತೆ ನೀಡುವ ನಿಟ್ಟಿನಲ್ಲಿ ರಾಷ್ಟ್ರೀಯ ಶಿಷ್ಟಾಚಾರ ನಿಯಮಾವಳಿಯನ್ನು ರೂಪಿಸುವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಲಾಗಿದೆ. ಈ ಮಧ್ಯೆ, ತಾವು ರಸ್ತೆಯಲ್ಲಿ ನಡೆಯುತ್ತಿರುವಾಗ ಜನರು ತಮ್ಮನ್ನು ಕೊರೊನ ವೈರಸ್ ಎಂದು ಕರೆದು ಗೇಲಿ ಮಾಡುತ್ತಿದ್ದಾರೆ ಎಂದು ಅಸ್ಸಾಂನ ಗುವಾಹಟಿಯ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ನರ್ಸ್‌ಗಳು ದೂರು ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X