Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಮುಸ್ಲಿಮರ ವಿರುದ್ಧ ದ್ವೇಷ ಹರಡುವ...

​ಮುಸ್ಲಿಮರ ವಿರುದ್ಧ ದ್ವೇಷ ಹರಡುವ ಕೃತ್ಯಗಳಿಗೆ ಕಡಿವಾಣ ಹಾಕಿ : ಡಿವೈಎಫ್‌ಐ

ವಾರ್ತಾಭಾರತಿವಾರ್ತಾಭಾರತಿ7 April 2020 8:15 PM IST
share

ಮಂಗಳೂರು, ಎ.7: ಕೊರೋನ ಹರಡಲು ಮುಸ್ಲಿಮರು ಕಾರಣ ಎಂಬ ಕಾಲ್ಪನಿಕ ವಾದವನ್ನು ಮುಂದಿಟ್ಟು ನಾಡಿನಾದ್ಯಂತ ಮುಸ್ಲಿಮರ ವಿರುದ್ಧ ದ್ವೇಷ ಹರಡುವ, ಗ್ರಾಮಗಳಿಗೆ ಪ್ರವೇಶ ನಿರಾಕರಿಸಿ ಸಾಮಾಜಿಕ ಬಹಿಷ್ಕಾರ ಹಾಕುವ ಆತಂಕಕಾರಿ ಕೃತ್ಯಗಳು ಎಗ್ಗಿಲ್ಲದೆ ನಡೆಯುತ್ತಿದೆ. ಸರಕಾರ ತಕ್ಷಣ ಮಧ್ಯಪ್ರವೇಶಿಸಿ ಇಂತಹ ಅಪಾಯಕಾರಿ ಪ್ರವೃತ್ತಿಗೆ ಕಡಿವಾಣ ಹಾಕಬೇಕು ಎಂದು ಡಿವೈಎಫ್‌ಐ ಆಗ್ರಹಿಸಿದೆ.

ದಿಲ್ಲಿಯ ಸಮಾವೇಶದಲ್ಲಿ ಕೊರೋನ ಹರಡಿರುವ ಪ್ರಕರಣವನ್ನು ಮುಂದಿಟ್ಟು ಈ ರೋಗ ಹರಡಲು ಮುಸ್ಲಿಮರು ಕಾರಣ. ಮುಸ್ಲಿಮರೇ ವ್ಯವಸ್ಥಿತವಾಗಿ ಕೊರೋನ ಹರಡಿಸುತ್ತಿದ್ದಾರೆ ಎಂಬ ಪೂರ್ವಾಗ್ರಹಪೀಡಿತ, ಕಾಲ್ಪನಿಕ ಸುದ್ದಿಯನ್ನು ಕೆಲವೊಂದು ಮಾಧ್ಯಮಗಳ ಜೊತೆ ಸೇರಿ ಸಮಾಜದಲ್ಲಿ ವ್ಯವಸ್ಥಿತವಾಗಿ ಹರಡಲಾಗಿದೆ. ಈ ಮೂಲಕ ಭಾರತದ ಮುಸ್ಲಿಮರ ತಲೆಯ ಮೇಲೆ ಕೊರೋನ ಹೊಣೆಯನ್ನು ಏಕಪಕ್ಷೀಯವಾಗಿ ಹೊರಿಸಲಾಗಿದೆ. ಈ ರೀತಿಯ ಸುದ್ದಿ ಸೃಷ್ಟಿ, ಹರಡುವಿಕೆಯ ಹಿಂದೆ ಬಲಪಂಥೀಯ ಶಕ್ತಿಗಳ ಸಕ್ರಿಯ ಪಾತ್ರವಿದೆ. ಇಂತಹ ಸುಳ್ಳು ಸುದ್ದಿಗಳಿಂದ ಸಾರ್ವಜನಿಕರು ಭೀತಿಗೊಂಡಿದ್ದು, ನೆರೆಹೊರೆಯ ಮುಸ್ಲಿಮರನ್ನೂ ಅನುಮಾನದಿಂದ ನೋಡುವ ಸ್ಥಿತಿ ನಿರ್ಮಾಣಗೊಂಡಿದೆ. ಅದರ ಪರಿಣಾಮವಾಗಿ ರಾಜ್ಯದ ಹಲವೆಡೆ ಮುಸ್ಲಿಮ್ ವ್ಯಾಪಾರಿಗಳನ್ನು ಗ್ರಾಮ ಪ್ರವೇಶಿಸದಂತೆ ತಡೆದ, ಹಲವು ಕಡೆ ಮುಸ್ಲಿಮರನ್ನು ಬೀದಿಯಲ್ಲಿ ತಡೆದು ನಿಲ್ಲಿಸಿದ ಘಟನೆಗಳು ವರದಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಂತೂ ಮುಸ್ಲಿಮರ ವಿರುದ್ಧ ಎಗ್ಗಿಲ್ಲದೆ ದ್ವೇಷದ ಮಾತುಗಳನ್ನು ಆಡಲಾಗುತ್ತಿದೆ. ದ.ಕ. ಜಿಲ್ಲೆಯ ಹಲವು ಗ್ರಾಮಗಳಲ್ಲಿ ಮುಸ್ಲಿಮರಿಗೆ ಪ್ರವೇಶ ನಿರಾಕರಿಸುವ, ವ್ಯಾಪಾರ ಬಹಿಷ್ಕಾರದ ಪೋಸ್ಟರ್‌ಗಳನ್ನು ಆಯಕಟ್ಟಿನ ಜಾಗಗಳಲ್ಲಿ ಅಂಟಿಸಲಾಗಿದೆ. ಇದು ಸಾಂಕ್ರಾಮಿಕ ಸೋಂಕಿನಂತೆ ಗ್ರಾಮಗಳಿಂದ ಗ್ರಾಮಕ್ಕೆ ಹಬ್ಬುತ್ತಿದೆ. ಇಂತಹ ಕೃತ್ಯಗಳ ಹಿಂದೆ ಖಚಿತವಾಗಿ ಬಲಪಂಥೀಯ ಕೋಮು ರಾಜಕಾರಣ ಪಾತ್ರ ಇದೆ ಎಂದು ಡಿವೈಎಫ್‌ಐ ಆಪಾದಿಸಿದೆ.

ಇಂತಹ ಕೃತ್ಯಗಳು ಅಲ್ಪಸಂಖ್ಯಾತ ಸಮುದಾಯದಲ್ಲಿ ಭಯ, ಹತಾಶೆಗೆ ಕಾರಣವಾಗುತ್ತಿದೆ. ಅವರನ್ನು ಏಕಾಂಗಿಗೊಳಿಸಲಾಗುತ್ತಿದೆ. ಸಾಮಾಜಿಕ ಬಹಿಷ್ಕಾರದ ಇಂತಹ ಕೃತ್ಯಗಳು ಭವಿಷ್ಯದಲ್ಲಿ ಕರಾಳ ರೂಪಗಳನ್ನು ಪಡೆಯುವ ಸಾಧ್ಯತೆಗಳಿವೆ. ಸರಕಾರ ಇಂತಹ ಪ್ರಕ್ರಿಯೆ ಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಮುಸಲ್ಮಾನ ಸಮುದಾಯದ ಮೇಲೆ ವಿನಾಕಾರಣ ಆರೋಪ ಹೊರಿಸುವುದನ್ನು ಸಹಿಸುವುದಿಲ್ಲ ಎಂಬ ಮಾತಿಗೆ ಬದ್ಧರಾಗಿ ಮುಖ್ಯಮಂತ್ರಿಗಳು ಕಠಿಣ ಕ್ರಮಗಳನ್ನು ಜರುಗಿಸಬೇಕು. ಪೊಲೀಸರು ಇಂತಹ ಘಟನೆಗಳಲ್ಲಿ ಸಂತ್ರಸ್ತ ಸಮುದಾಯದಿಂದ ದೂರಿಗಾಗಿ ಕಾಯದೆ, ಸ್ವಯಪ್ರೇರಿತ ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳಬೇಕು ಎಂದು ಡಿವೈಎಫ್‌ಐ ಆಗ್ರಹಿಸಿದೆ.

ಜನ ಸಮೂಹವು ಸಮಾಜವನ್ನು ಇಬ್ಬಾಗಿಸುವ, ಗಂಭೀರ ಸಮಸ್ಯೆಗಳನ್ನು ಸೃಷ್ಟಿಸುವ ಇಂತಹ ದ್ವೇಷಪೂರಿತ ಪ್ರಚಾರಗಳಿಗೆ ಬಲಿಬೀಳ ಬಾರದು, ಸುಳ್ಳು ಸುದ್ದಿಗಳನ್ನು ಖಚಿತ ಪಡಿಸದೆ ನಂಬಬಾರದು. ಸಾಮಾಜಿಕ ಐಕ್ಯತೆಯನ್ನು ಎತ್ತಿಹಿಡಿದು ಮತೀಯ ಸೌಹಾರ್ದತೆಯನ್ನು ಕಾಪಾಡಬೇಕು ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮತ್ತು ಕಾರ್ಯದರ್ಶಿ ಬಸವರಾಜ ಪೂಜಾರ್ ಪ್ರಕಟನೆಯಲ್ಲಿ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X