ಲಾಕ್ಡೌನ್ ಉಲ್ಲಂಘನೆ: 236 ವಾಹನಗಳು ಮುಟ್ಟುಗೋಲು
ಮಂಗಳೂರು, ಎ.7: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಲಾಕ್ಡೌನ್ ಉಲ್ಲಂಘನೆ ಮಾಡಿ ಸಂಚರಿಸುತ್ತಿದ್ದ 236 ವಾಹನಗಳನ್ನು ಮಂಗಳೂರು ನಗರ ಪೊಲೀಸರು ಮಂಗಳವಾರ ವಶಪಡಿಸಿಕೊಂಡು ಕೇಸು ದಾಖಲಿಸಿದ್ದಾರೆ.
ಲಾಕ್ಡೌನ್ ಹಿನ್ನೆಲೆಯಲ್ಲಿ ನಾಕಾಬಂದಿ ಹಾಕಿ ಬಿಗಿ ತಪಾಸಣೆ ನಡೆಸಲಾಗುತ್ತಿದ್ದು, ಲಾಕ್ಡೌನ್ ಉಲ್ಲಂಘನೆ ಮಾಡಿದ ದ್ವಿಚಕ್ರ ವಾಹನ, ಕಾರು, ಆಟೋರಿಕ್ಷಾ ಸೇರಿದಂತೆ 236 ವಾಹನಗಳನ್ನು ಮುಟ್ಟುಗೋಲು ಹಾಕಲಾಗಿದೆ.
ಮಂಗಳೂರು ನಗರ ಪೊಲೀಸ್ ಕಮಿಷನರ್ ಡಾ. ಪಿ.ಎಸ್. ಹರ್ಷ ನಿರ್ದೇಶನದಂತೆ ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಲಕ್ಷ್ಮೀ ಗಣೇಶ್ ಮತ್ತು ಸಂಚಾರ ವಿಭಾಗದ ಎಸಿಪಿ ಮಂಜುನಾಥ್ ಶೆಟ್ಟಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
Next Story