ಮುಸ್ಲಿಮರ ಅವಹೇಳನ: ಕ್ರಮಕ್ಕೆ ಎಸ್‌ಡಿಪಿಐ ಮನವಿ
ಮಂಗಳೂರು, ಎ.8: ಕೊರೋನ ವೈರಸ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಮ್ ಸಮುದಾಯದ ವಿರುದ್ಧವಾಗಿ ಅವಹೇಳನಕಾರಿಯಾಗಿ ಮತ್ತು ಪ್ರಚೋದನಕಾರಿಯಾಗಿ ಪೋಸ್ಟ್ ಮಾಡುವವರ ವಿರುದ್ಧ ಸ್ವಯಂ ಪ್ರೇರಿತವಾಗಿ ಕಠಿಣ ಕಾನೂನು ಕ್ರಮ ಜರುಗಿಸುವ ಬಗ್ಗೆ ಆದೇಶ ನೀಡಬೇಕು ಎಂದು ದ.ಕ.ಜಿಲ್ಲಾ ಎಸ್‌ಡಿಪಿಐ ಸಮಿತಿಯು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಿದೆ.
ಕೊರೋನ ವೈರಸ್‌ನಿಂದ ಜನರು ಭಯ ಭೀತರಾಗಿದ್ದು ಜಾತಿ, ಧರ್ಮ, ಮತ ಭೇದವಿಲ್ಲದೆ ಎಲ್ಲರೂ ಈ ವೈರಸ್‌ನಿಂದ ಮುಕ್ತಿ ಹೊಂದಲು ಪ್ರಯತ್ನ ನಡೆಸುತ್ತಿದ್ದಾರೆ. ಈ ಮಧ್ಯೆ ಕೇಂದ್ರ ಸರಕಾರವು ವಿಧಿಸಿರುಬ ಲಾಕ್‌ಡೌನ್‌ನ್ನು ಪಾಲಿಸಲಾಗುತ್ತಿದೆ. ಆದಾಗ್ಯೂ ಕೆಲವರು ಕೊರೋನ ವೈರಸ್‌ಗೆ ಧರ್ಮವನ್ನು ಎಳೆದು ತರುವುದರ ಮೂಲಕ ಫೇಸ್‌ಬುಕ್, ವಾಟ್ಸಪ್ ಹಾಗೂ ಇನ್ನಿತರ ಸಾಮಾಜಿಕ ಜಾಲತಾಣದ ಮೂಲಕ ಇಸ್ಲಾಮ್ ಧರ್ಮದ ಆಚಾರ ವಿಚಾರಗಳನ್ನು ಗೇಲಿಮಾಡಿಕೊಂಡು ಪ್ರಚೋದನೆಗೆ ಒಳಗಾಗುವಂತಹ ಪೋಸ್ಟ್ಗಳನ್ನು ಹಾಕುವುದು ನಿರಂತರವಾಗಿ ನಡೆಯುತ್ತಲೇ ಇದೆ. ಇದು ಸಮಾಜದ ಸ್ವಾಸ್ಥ್ಯವನ್ನು ಕೆಡಿಸುತ್ತಿದೆ. ಹಾಗಾಗಿ ಇಂತಹ ಕುಕೃತ್ಯ ಎಸಗುವವರ ವಿರುದ್ಧ ಪೊಲೀಸ್ ಇಲಾಖೆಯು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು ಎಂದು ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಒತ್ತಾಯಿಸಿದ್ದಾರೆ.





