Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲಾಕ್‍ಡೌನ್ ಬಳಿಕ ಬಡ ಕೂಲಿಕಾರರ ಜೀವನ...

ಲಾಕ್‍ಡೌನ್ ಬಳಿಕ ಬಡ ಕೂಲಿಕಾರರ ಜೀವನ ದುಸ್ತರ: ಎಚ್.ಡಿ.ದೇವೇಗೌಡ

ವಾರ್ತಾಭಾರತಿವಾರ್ತಾಭಾರತಿ9 April 2020 5:57 PM IST
share
ಲಾಕ್‍ಡೌನ್ ಬಳಿಕ ಬಡ ಕೂಲಿಕಾರರ ಜೀವನ ದುಸ್ತರ: ಎಚ್.ಡಿ.ದೇವೇಗೌಡ

ಬೆಂಗಳೂರು, ಎ.9: ಕೊರೋನ ಮಹಾಮಾರಿ ನಮ್ಮ ದೇಶಕ್ಕೆ ಅಪ್ಪಳಿಸಿರುವ ಈ ಹೊತ್ತಿನಲ್ಲಿ ದೇಶಕ್ಕೆ ದೇಶವೆ ಲಾಕ್‍ಡೌನ್ ಆಗಿದೆ. ಸರಕಾರಗಳು ಅನಿವಾರ್ಯ ಉಪಕ್ರಮವಾಗಿರುವ ಈ ಲಾಕ್‍ಡೌನ್‍ನ್ನು ಜಾರಿಗೊಳಿಸಿದ ಮೇಲೆ ಪಿಡುಗು ನಿಯಂತ್ರಣಕ್ಕೆ ಬರುತ್ತಿದೆ. ಇದಕ್ಕಾಗಿ ಸರಕಾರವನ್ನು, ಜನತೆಯನ್ನು, ಇದಕ್ಕಾಗಿ ಹಗಲಿರುಳು ದುಡಿಯುತ್ತಿರುವ ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಮೊದಲಾದ ಇಲಾಖೆಗಳ ಸಮಸ್ತ ಸಿಬ್ಬಂದಿ ವರ್ಗ ಹೀಗೆ ಎಲ್ಲರನ್ನೂ ಅಭಿನಂದಿಸುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ಲಾಕ್‍ಡೌನ್ ಘೋಷಣೆಯಾದ ಬಳಿಕ ಗುಳೆ ಹೋಗುತ್ತಿರುವವರು, ವಲಸೆ ಹೋಗುತ್ತಿರುವ ಅಸಂಘಟಿತ ಕಾರ್ಮಿಕರು, ದಿನನಿತ್ಯ ದುಡಿದು ಅಂದಿನಂದಿನ ಬದುಕು ಸಾಗಿಸುತ್ತಿದ್ದ ಬಡ ಕೂಲಿಕಾರರು ಇವರ ಜೀವನ ತುಂಬಾ ದುಸ್ತರವಾಗಿದೆ. ಉಪವಾಸ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ತಿಳಿಸಿದ್ದಾರೆ.

ಸರಕಾರವು ಈ ಬಗ್ಗೆ ಕ್ರಮಗಳನ್ನು ತೆಗೆದುಕೊಂಡಿದೆ. ಆದರೆ, ಎಲ್ಲವನ್ನೂ ಸರಕಾರ ಮಾಡಬೇಕೆಂದು ಕೂರುವ ಸಮಯ ಇದಲ್ಲ. ನಮಗೆಲ್ಲರಿಗೂ ನಾಗರಿಕ ಪ್ರಜ್ಞೆ ಮತ್ತು ಸಾಮಾಜಿಕ ಜವಾಬ್ದಾರಿ ಇರುವುದರಿಂದ ನಾವು ಸರಕಾರದೊಂದಿಗೆ ಕೈ ಜೋಡಿಸಿ ಸಂತ್ರಸ್ತರ, ಬಡವರ ನೆರವಿಗೆ ಬರಬೇಕಾಗಿದೆ ಎಂದು ದೇವೇಗೌಡ ಮನವಿ ಮಾಡಿದ್ದಾರೆ.

ರಾಜ್ಯಾದ್ಯಂತ ನಮ್ಮ ಪಕ್ಷದ ನಾಯಕರು, ಕಾರ್ಯಕರ್ತರು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿರುವುದು ನನಗೆ ತುಂಬಾ ಸಂತಸ ತಂದಿದೆ. ನಮ್ಮ ಪಕ್ಷದ ಶಾಸಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಈಗಾಗಲೆ ಆಹಾರ ಮತ್ತು ಆರೋಗ್ಯದ ಕಿಟ್‍ಗಳನ್ನು ಬಡವರಿಗೆ ಹಂಚುತ್ತಿದ್ದಾರೆ. ಕೇವಲ ಶಾಸಕರಷ್ಟೆ ಅಲ್ಲದೆ, ಪರಾಜಿತರಾದ ನಮ್ಮ ಪಕ್ಷದ ಅಭ್ಯರ್ಥಿಗಳು, ಭಾವಿ ಅಭ್ಯರ್ಥಿಗಳು ಕೂಡ ಸಮಯದ ಪ್ರಾಮುಖ್ಯತೆ ಮತ್ತು ಅಗತ್ಯತೆಯನ್ನು ಅರ್ಥಮಾಡಿಕೊಂಡು ಕ್ರಿಯಾಶೀಲರಾಗಿ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಈ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ದೇವೇಗೌಡ ಹೇಳಿದ್ದಾರೆ.

ಈ ನಿಮ್ಮ ಕೈಂಕರ್ಯ ಹೀಗೆಯೆ ಮುಂದುವರೆಯಲಿ, ಈ ಲಾಕ್‍ಡೌನ್ ಕೊನೆಯಾಗುವವರೆಗೆ, ಈ ಪಿಡುಗು ತೊಲಗುವವರೆಗೆ ನೀವು ಹೀಗೆ ಜನರ ಸಮಸ್ಯೆಗೆ ಸ್ಪಂದಿಸುತ್ತಿರಿ. ನಾನೂ ಈ ನಿಟ್ಟಿನಲ್ಲಿ ಬಡವರಿಗೆ ನನ್ನ ಕೈಲಾದ ನೆರವು ನೀಡುವವನಿದ್ದೇನೆ. ಒಟ್ಟಿನಲ್ಲಿ ನಮ್ಮ ಪಕ್ಷವೂ ಈ ಹೊತ್ತಿನಲ್ಲಿ ಜನಸ್ಪಂದನಶೀಲವಾಗಿರುವುದು ನನಗೆ ಸಮಾಧಾನ ತಂದಿದೆ ಎಂದು ದೇವೇಗೌಡ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X