Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊರೋನ: ಅನಿವಾಸಿ ಕನ್ನಡಿಗರ...

ಕೊರೋನ: ಅನಿವಾಸಿ ಕನ್ನಡಿಗರ ಸಮಸ್ಯೆಗಳನ್ನು ಪರಿಹರಿಸಲು ಕರ್ನಾಟಕ ಮುಸ್ಲಿಂ ಜಮಾಅತ್, ಕೆಸಿಎಫ್ ಮನವಿ

ವಾರ್ತಾಭಾರತಿವಾರ್ತಾಭಾರತಿ10 April 2020 9:29 PM IST
share

ಮಂಗಳೂರು: ಕೊರೋನದಿಂದ ಸಂಕಷ್ಟಕ್ಕೀಡಾಗಿರುವ ಅನಿವಾಸಿ ಕನ್ನಡಿಗರ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಜೈಶಂಕರ್ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕರ್ನಾಟಕ ಮುಸ್ಲಿಂ ಜಮಾಅತ್ ಮತ್ತು ಕರ್ನಾಟಕ ಕಲ್ಚರಲ್ ಫೌಡೇಶನ್ ಮನವಿ ಮಾಡಿದೆ.

ಈ ಬಗ್ಗೆ ಜಂಟಿ ಪತ್ರ ಬರೆದಿರುವ ಮುಸ್ಲಿಂ ಜಮಾಅತ್ ಕಾರ್ಯದರ್ಶಿ ಶಾಫಿ ಸಅದಿ ಮತ್ತು ಕೆಸಿಎಫ್ ಅಧ್ಯಕ್ಷ ಡಾ.ಶೇಕ್ ಬಾವ, ದೇಶದ ಆರ್ಥಿಕ ಬೆಳವಣಿಗೆಯ ಹಿಂದೆ ಅನಿವಾಸಿ ಭಾರತೀಯರ ಅಪಾರ ಪರಿಶ್ರಮವಿದೆ. ದೇಶ ಅವರ ಜೀವದ ಒಂದು ಭಾಗ. ಅನಿವಾಸಿ ಅನ್ನುವುದೇ ಮೂಲತಃ ಸಾಹಸೀ ಬದುಕು. ನಮ್ಮ ದೇಶದ ಅಭಿವೃದ್ಧಿಯಲ್ಲಿ ವಲಸಿಗರು ಮಹತ್ವದ ಪಾತ್ರ ವಹಿಸುತ್ತಾರೆ. ಇದೀಗ ಅವರು ಕಳವಳಕ್ಕೆ ಒಳಗಾಗುವ ಪರಿಸ್ಥಿತಿ ಇದೆ. ಅನೇಕ ವಲಸಿಗರು ಫ್ಲ್ಯಾಟ್‌ಗಳಲ್ಲಿ ಹತ್ತು ಅಥವಾ ಹದಿನೈದು ಮಂದಿ ಒಂದೇ ಕೋಣೆಯಲ್ಲಿ ವಾಸಿಸುತ್ತಿದ್ದಾರೆ. ಕೊಲ್ಲಿ ರಾಷ್ಟ್ರಗಳಲ್ಲಿ ಇಂತಹ ಅನೇಕ ಮಂದಿಯಿದ್ದು, ಕೊಲ್ಲಿಯಾದ್ಯಂತದ ಸರಕಾರಗಳು ಅವರನ್ನು ಚೆನ್ನಾಗಿ ನೋಡಿಕೊಂಡಿದ್ದರೂ, ಕೊರೋನ ಪ್ರಪಂಚದಾದ್ಯಂತ ಹರಡುತ್ತಿರುವಂತೆ ಭಾರತೀಯ ನಾಗರಿಕರು ವಿದೇಶಗಳಲ್ಲಿ ಸುರಕ್ಷಿತ ಪರಿಸ್ಥಿತಿಗಳನ್ನು ಅನುಭವಿಸುತ್ತಿದ್ದಾರೆಯೇ ಎಂಬುದನ್ನು ಸರಕಾರ ಖಚಿತಪಡಿಸಿಕೊಳ್ಳಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಅಗತ್ಯ ಆರೋಗ್ಯ ತಪಾಸಣೆಗಾಗಿ ಭಾರತದಿಂದ ವಿಶೇಷ ವೈದ್ಯಕೀಯ ತಂಡವನ್ನು ಕಳುಹಿಸಲು ಸರಕಾರ ಮುಂದಾಗಬೇಕು. ಲಾಕ್‌ಡೌನ್ ಮುಗಿದ  ಕೂಡಲೇ ಕೊಲ್ಲಿಯಿಂದ ಊರಿಗೆ ಮರಳಲು ಬಯಸುವವರಿಗೆ ತಪಾಸಣೆಯ ನಂತರ ವಿಶೇಷ ವಿಮಾನವನ್ನು ಒದಗಿಸಬೇಕು. ಸರಿಯಾದ ಪರೀಕ್ಷೆ ಮತ್ತು ಸುರಕ್ಷಿತ ಕ್ವಾರಂಟೈನ್ ಏರ್ಪಡಿಸುವ ಮೂಲಕ ನಮ್ಮ ನಾಗರಿಕರು ಮರಳಿ ಬರುವ ಸನ್ನಿವೇಶ ಒದಗಿಸಬೇಕು ಎಂದು ಅವರು ಪತ್ರದಲ್ಲಿ ಸೂಚಿಸಿದ್ದಾರೆ.

ವಲಸಿಗರಿಗೆ ಆಹಾರ ಪದಾರ್ಥಗಳನ್ನು ತಲುಪಿಸುವುದು, ಅಗತ್ಯ ಔಷಧಿಗಳನ್ನು ಒದಗಿಸುವುದು, ರೋಗ ತಡೆಗಟ್ಟಲು ಹ್ಯಾಂಡ್ ಸ್ಯಾನಿಟೈಸರ್ ಮತ್ತು ಮುಖವಾಡವನ್ನು ತಲುಪಿಸುವ ಕಾರ್ಯದಲ್ಲಿ ಸರಕಾರ ಸಕ್ರಿಯ ಮೇಲ್ವಿಚಾರಣೆ ಮಾಡಬೇಕು ಎಂದು ಸಂಘಟನೆ ತಮ್ಮ ಪತ್ರದಲ್ಲಿ ವಿನಂತಿಸಿದೆ.

ಭಾರತ ದೇಶದ ಪೌರರೆಂಬ ನೆಲೆಯಲ್ಲಿ ತಮ್ಮ ಹುಟ್ಟೂರಿಗೆ ವಾಪಾಸ್ಸಾಗುವ ಮೂಲಭೂತ ಹಕ್ಕನ್ನು ವಿಶ್ವದ ವಿವಿಧ ದೇಶಗಳಲ್ಲಿ ವಾಸಿಸುವ ಅನಿವಾಸಿ ಭಾರತೀಯರೆಲ್ಲರೂ ಅನುಭವಿಸಲು ಸರಕಾರ ಶ್ರಮಿಸಬೇಕು. ವಿವಿಧ ರಾಜ್ಯಕ್ಕೆ ಮರಳುವವರನ್ನು ಅವರ ಆರೋಗ್ಯ ವಿಚಾರಣೆ- ತಪಾಸಣೆ ನಡೆಸಿ ಐಸೊಲೇಶನ್ ಅಥವಾ ಆಸ್ಪತ್ರೆಗಳಿಗೆ  ಕಳುಹಿಸುವ ವ್ಯವಸ್ಥೆ  ಮಾಡಬೇಕು. ಸಾರ್ವಜನಿಕ ಕಟ್ಟಡಗಳು, ವಿವಿಧ ಧಾರ್ಮಿಕ ಕೇಂದ್ರಗಳು ಮತ್ತು ಶಾಲಾ ಕಾಲೇಜು ಕಟ್ಟಡಗಳನ್ನು ಅನಿವಾಸಿಗಳು ರೋಗ ಮುಕ್ತಿ ಹೊಂದುವ ತನಕ ತಾತ್ಕಾಲಿಕ ವಸತಿಗಳಾಗಿ ಮಾರ್ಪಡಿಸಲು ಸರಕಾರ ವ್ಯವಸ್ಥೆ ಮಾಡಬೇಕೆಂದು ಮನವಿ ಮಾಡಲಾಗಿದೆ. ಅಲ್ಲದೇ, ಮುಸ್ಲಿಂ ಜಮಾಅತ್ ಅಧೀನದ್ಲಲಿರುವ ರಾಜ್ಯದ ಎಲ್ಲಾ ಸಂಸ್ಥೆಗಳನ್ನು ಕ್ವಾರಂಟೈನ್ ಕೇಂದ್ರಗಳಾಗಿ ಉಪಯೋಗಿಸಲು ಸರಕಾರಕ್ಕೆ ನೀಡುವುದಾಗಿ ನಾಯಕರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X