Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಈಸ್ಟರ್ ಆಚರಣೆ ಹೊಸ ಭರವಸೆಯನ್ನು...

ಈಸ್ಟರ್ ಆಚರಣೆ ಹೊಸ ಭರವಸೆಯನ್ನು ಮೂಡಿಸಲಿ: ಉಡುಪಿ ಬಿಷಪ್

ವಾರ್ತಾಭಾರತಿವಾರ್ತಾಭಾರತಿ11 April 2020 8:41 PM IST
share

ಉಡುಪಿ, ಎ.11: ಇಡೀ ಮಾನವಕುಲ ಕೊರೋನಾ ಮಹಾಮಾರಿಯ ಸೋಂಕಿನ ಭೀತಿಯಿಂದ ನಲುಗಿರುವಾಗ ಬಂದಿರುವ ಈ ವರ್ಷದ ಈಸ್ಟರ್ ಹಬ್ಬ ಅಂಧಕಾರದ ಕಾರ್ಮೋಡಗಳ ಅಂಚಿನಲ್ಲಿ ಕಾಣಿಸುವ ಬೆಳ್ಳಿಯ ರೇಖೆ ಯಂತಿದೆ. ಮರಣದ ಮೇಲೆ ಜಯಶಾಲಿಯಾದ ಪ್ರಭು ಯೇಸುಕ್ರಿಸ್ತರು ಎಲ್ಲರ ಮನೆ ಮನಗಳಲ್ಲಿ ನವಜೀವನದ ಭರವಸೆಯನ್ನು ಮೂಡಿಸಲಿ ಎಂದು ಉಡುಪಿಯ ಧರ್ಮಾಧ್ಯಕ್ಷ ಅತಿ ವಂ.ಡಾ.ಜೆರಾಲ್ಡ್ ಲೋಬೊ ಹೇಳಿದ್ದಾರೆ.

ಈಸ್ಟರ್ ಹಬ್ಬದ ಸಂದೇಶ ನೀಡಿದ ಅವರು, ‘ಪ್ರಾರ್ಥನೆ, ಉಪವಾಸ, ದಾನ ಧರ್ಮಗಳನ್ನೊಳಗೊಂಡ ನಲ್ವತ್ತು ದಿನಗಳ ತಪಸ್ಸು ಕಾಲದ ವೃತವು ಕಳೆದು ಯೇಸುಕ್ರಿಸ್ತರ ಪುನರುತ್ಥಾನದ ಈಸ್ಟರ್ ಹಬ್ಬ ಮತ್ತೊಮ್ಮೆ ಬಂದಿದೆ. ಎರಡು ಸಾವಿರ ವರ್ಷಗಳ ಹಿಂದೆ ಯೇಸುಕ್ರಿಸ್ತರು ಅನುಭವಿಸಿದ ಕಷ್ಟ, ಯಾತನೆ, ಶಿಲುಬೆಯ ಮರಣ ಹಾಗೂ ಇವೆಲ್ಲದರ ಶಿಖರವಾದ ಪುನರುತ್ಥಾನವನ್ನು ಭಕ್ತಿಯಿಂದ ಸ್ಮರಿಸಿ, ಆ ಚಾರಿತ್ರಿಕ ಘಟನೆಗಳನ್ನು ಪುನರ್ಜೀವಿಸಿ, ದೈನಂದಿನ ಜೀವನದಲ್ಲಿ ವಿಶ್ವಾಸವರ್ಧನೆಯನ್ನು ಮಾಡುವ ಸಂಭ್ರಮ ಇದಾಗಿದೆ ಎಂದರು.

ಈಜಿಪ್ತಿನ ದಾಸ್ಯತ್ವದಲ್ಲಿ ಬಳಲುತ್ತಿದ್ದ ತನ್ನ ಜನರನ್ನು ದೇವರು ಬಿಡಿಸಿ ಅವರನ್ನು ಹೊಸ ನಾಡಿಗೆ ಹಾಗೂ ಹೊಸ ಬದುಕಿನೆಡೆಗೆ ಕರೆದೊಯ್ದ ಚಾರಿತ್ರಿಕ ನೆನಪಿನ ಆಚರಣೆಯೂ ಈ ಹಬ್ಬದೊಂದಿಗೆ ಸೇರಿಕೊಂಡಿದೆ. ಹೀಗಾಗಿ ಈಸ್ಟರ್ ಯೇಸುಕ್ರಿಸ್ತರು ಮರಣದ ಮೇಲೆ ವಿಜಯವನ್ನು ಸಾರಿದ ಅವರ ದೈವತ್ವದ ಪ್ರತಿಪಾದನೆ ಮಾತ್ರವಲ್ಲದೆ, ಹೊಸ ಜೀವನ, ಹೊಸ ಸೃಷ್ಟಿ ಹಾಗೂ ಹೊಸ ಅನ್ವೇಷಣೆಯಿಂದ ಮರಣವೇ ಜೀವನದ ಅಂತಿಮ ಅಲ್ಲ ಎಂಬುದನ್ನೂ ಸಾರುತ್ತದೆ.

ಕಷ್ಟ, ನೋವು, ರೋಗ, ಯಾತನೆಗಳು ಶಾಶ್ವತವಲ್ಲ. ಅವುಗಳಿಗೆ ಅಂತ್ಯವಿದೆ. ದೇವರು ನಮ್ಮನ್ನು ಸೋಲಲು ಸೃಷ್ಟಿಸಿಲ್ಲ, ಬದಲಾಗಿ ಕಷ್ಟಗಳ ಮೇಲೆ ವಿಜಯ ಶಾಲಿಗಳಾಗಲು ಸೃಷ್ಟಿಸಿದ್ದಾರೆ. ಆದ್ದರಿಂದ ಇಂದಿನ ಕೊರೋನ ಭೀತಿಯ ಕಠಿಣ ಪರಿಸ್ಥಿತಿಯಲ್ಲಿ ಸಜ್ಜನ ಯೋಬನ ಮಾತುಗಳು ನಮಗೆ ಪ್ರೇರಣೆಯಾಗಲಿ. ದೇವರಿಂದ ನಾವು ಸುಖಪಡೆಯಬಹುದು, ದುಃಖವನ್ನು ಮಾತ್ರ ಪಡೆಯ ಬಾರದೋ ?

ಈ ಈಸ್ಟರ್ ಹಬ್ಬದಂದು, ಈ ಸೋಂಕಿನ ವಿರುದ್ಧ ಹೋರಾಡುತ್ತಿರುವ ಎಲ್ಲ ವಿಜ್ಞಾನಿಗಳು, ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳಿಗಾಗಿ, ಜನತೆಯ ಅಸುರಕ್ಷತೆಯನ್ನು ದೂರಗೊಳಿಸಿ ವಿಶ್ವಾಸ ತುಂಬುತ್ತಿರುವ ಎಲ್ಲಾ ಅಧಿಕಾರಿ ಗಳಿಗಾಗಿ, ಹಸಿದು ಕಂಗೆಟ್ಟ ನಿರಾಶ್ರಿತ ಜನತೆ ಹಾಗೂ ಅಶಕ್ತರಿಗಾಗಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಸಹಾಯ ಮಾಡುತ್ತಿರುವ ಎಲ್ಲಾ ಸುಮನಸ್ಸಿನ ಜನರಿಗಾಗಿ ಹಾಗೂ ಇವುಗಳನ್ನೆಲ್ಲ ಸೂಕ್ತ ರೀತಿಯಲ್ಲಿ ನಿರ್ವಹಿಸುತ್ತಿರುವ ಜನ ಪ್ರತಿನಿಧಿ ಗಳಿಗಾಗಿ ನಮ್ಮ ವಿಶೇಷ ಪ್ರಾರ್ಥನೆಗಳು ಸಲ್ಲಲಿ. ಸಕಲರಿಗೂ ಈಸ್ಟರ್ ಹಬ್ಬದ ಹಾರ್ದಿಕ ಶುಭಾಷಯಗಳು ಎಂದು ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X