ಉಡುಪಿ: ಆಹಾರ ಕಿಟ್ ವಿತರಣೆ ಸಂದರ್ಭ ಸಾಮಾಜಿಕ ಅಂತರದ ನಿರ್ಲಕ್ಷ
ಉಡುಪಿ, ಎ.10: ಜಿಲ್ಲೆಯಲ್ಲಿ ಕಾರ್ಮಿಕರು ಹಾಗೂ ಬಡವರಿಗೆ ಊಟ, ಆಹಾರ ಕಿಟ್‌ಗಳನ್ನು ವಿತರಿಸುವ ಸಂದರ್ಭ ವಿವಿಧ ಸಂಘಸಂಸ್ಥೆಗಳು, ಜನ ಪ್ರತಿನಿಧಿಗಳು ಹಾಗೂ ರಾಜಕೀಯ ಪಕ್ಷಗಳ ಕಾರ್ಯಕರ್ತರು ಸಾಮಾಜಿಕ ಅಂತರವನ್ನು ಕಾಪಾಡದೆ ಲಾಕ್‌ಡೌನ್ ನಿಯಮಗಳನ್ನು ಗಾಳಿಗೆ ತೂರುತ್ತಿರುವ ಬಗ್ಗೆ ಎ್ಲೆಡೆ ಆರೋಪಗಳು ಕೇಳಿಬರುತ್ತಿವೆ.
ಉಡುಪಿ ಜಿಲ್ಲಾಧಿಕಾರಿಗಳ ಆದೇಶದಂತೆ ನಗರದ ಸೂಪರ್ ಮಾರ್ಕೆಟ್ ಗಳು, ಮೆಡಿಕಲ್, ದಿನಸಿ ಹಾಗೂ ತರಕಾರಿ ಅಂಗಡಿಗಳು ಸಾಮಾಜಿಕ ಅಂತರಕ್ಕೆ ಆದ್ಯತೆ ನೀಡಿ ವ್ಯಾಪಾರ ನಡೆಸುತ್ತಿದ್ದರೆ, ಈ ಆಹಾರ ಕಿಟ್‌ಗಳನ್ನು ವಿತರಿಸುವವರು ಮಾತ್ರ ಗುಂಪು ಗುಂಪಾಗಿ ನಿಂತು ಸಾಮಾಜಿಕ ಅಂತರ ಕಾಪಾಡದೇ ಆಹಾರ ಕಿಟ್‌ಗಳನ್ನು ವಿತರಿಸುತ್ತಿರುವುದು ಕಂಡುಬರುತ್ತಿದೆ.
ಅದೇ ರೀತಿ ಜಿಲ್ಲೆಯ ವಿವಿಧ ಕಡೆಗಳಲ್ಲಿರುವ ನಿರಾಶ್ರಿತರ ಶಿಬಿರಗಳಲ್ಲೂ ಜನಪ್ರತಿನಿಧಿಗಳು ಸಾಮಾಜಿಕ ಅಂತರ ಕಾಪಾಡದೆ ನಿಯಮ ಉಲ್ಲಂಘಿಸು ತ್ತಿರುವ ಪ್ರಕರಣಗಳು ಈಗಾಗಲೇ ವರದಿಯಾಗಿವೆ. ಈ ಹಿಂದೆ ಜಿಲ್ಲಾಧಿಕಾರಿ ಆದೇಶ ನೀಡಿ ಕ್ರಮ ತೆಗೆದುಕೊಳ್ಳುವ ಎಚ್ಚರಿಕೆ ನೀಡಿ ದರೂ ಯಾರು ಕೂಡ ಇದಕ್ಕೆ ಮನ್ನಣೆ ನೀಡುತ್ತಿಲ್ಲ.
ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಪಂ ಸದಸ್ಯರು ಕೂಡ ಸಮಾಜ ಸೇವೆಯ ಹೆಸರಿನಲ್ಲಿ ಈ ನಿಯಮಗಳನ್ನು ಉಲ್ಲಂಘಿಸುತ್ತಿರುವ ಬಗ್ಗೆ ದೂರುಗಳು ಬರು ತ್ತಿವೆ. ಸಾಮಾಜಿಕ ಅಂತರ ಉಲ್ಲಂಘಿಸುವವರ ವಿರುದ್ಧ ಮಾತ್ರವಲ್ಲದೆ, ಬಡವರಿಗೆ ಆಹಾರ ನೀಡಿ ಫೋಟೋಗೆ ಫೋಸ್ ನೀಡುವವರ ವಿರುದ್ಧ ಕೂಡ ಕ್ರಮ ಜರಗಿಸಬೇಕೆಂದು ಸಾರ್ವಜನಿಕರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.
ಪ್ರಕರಣ ದಾಖಲು: ಡಿಸಿ ಎಚ್ಚರಿಕೆ
ಆಹಾರದ ಕಿಟ್‌ಗಳನ್ನು ವಿತರಿಸುವ ಸಂದರ್ಭ ಸಂಘಸಂಸ್ಥೆಯವರು ಸಾಮಾಜಿಕ ಅಂತರ ಕಾಪಾಡದಿರುವುದು ಗಮನಕ್ಕೆ ಬಂದಿದೆ. ಈಗಾಗಲೇ ಸಾಮಾಜಿಕ ಅಂತರಕ್ಕೆ ಪ್ರಾಮುಖ್ಯತೆ ನೀಡುವಂತೆ ಆದೇಶ ನೀಡಲಾಗಿತ್ತು. ಇನ್ನು ಕೂಡ ಅದನ್ನು ಪಾಲಿಸದವರ ವಿರುದ್ಧ ವಿರುದ್ಧ ಪ್ರಕರಣ ದಾಖಲಿಸುವ ಮೂಲಕ ಕಠಿಣ ಕ್ರಮ ಜರಗಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.







