Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2 ವಾರಗಳ ಕಾಲ ಲಾಕ್‌ಡೌನ್ ಮುಂದುವರಿಸಲು...

2 ವಾರಗಳ ಕಾಲ ಲಾಕ್‌ಡೌನ್ ಮುಂದುವರಿಸಲು ಪ್ರಧಾನಿ, ಸಿಎಂಗಳ ಒಪ್ಪಿಗೆ

ವಾರ್ತಾಭಾರತಿವಾರ್ತಾಭಾರತಿ11 April 2020 8:46 PM IST
share
2 ವಾರಗಳ ಕಾಲ ಲಾಕ್‌ಡೌನ್ ಮುಂದುವರಿಸಲು ಪ್ರಧಾನಿ, ಸಿಎಂಗಳ ಒಪ್ಪಿಗೆ

ಹೊಸದಿಲ್ಲಿ, ಎ.11: ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಶನಿವಾರ ಕನಿಷ್ಠ 13 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಾಲ್ಕು ಗಂಟೆಗಳ ಕಾಲ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕೊರೋನ ವೈರಸ್ ಸೋಂಕು ಹರಡುವಿಕೆಯನ್ನು ತಡೆಯಲು ಹೇರಲಾಗಿರುವ ದೇಶವ್ಯಾಪಿ ಲಾಕ್‌ಡೌನ್ ಅನ್ನು ಇನ್ನೂ ಎರಡು ವಾರಗಳ ಕಾಲ ವಿಸ್ತರಿಸುವ ಸುಳಿವನ್ನು ನೀಡಿದ್ದಾರೆ. ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿಗಳು ಇನ್ನಷ್ಟು ಅವಧಿಗೆ ಲಾಕ್‌ಡೌನ್ ವಿಸ್ತರಣೆಗೆ ಒಲವು ವ್ಯಕ್ತಪಡಿಸಿದ್ದಾರೆ. ನಿಗದಿಯಂತೆ 21 ದಿನಗಳ ಲಾಕ್‌ಡೌನ್ ಮಂಗಳವಾರ ಅಂತ್ಯಗೊಳ್ಳಲಿತ್ತು.

“ಪ್ರಧಾನಿಯವರು ಲಾಕ್‌ಡೌನ್ ವಿಸ್ತರಿಸುವ ಸರಿಯಾದ ನಿರ್ಧಾರವನ್ನೇ ಕೈಗೊಂಡಿದ್ದಾರೆ. ನಾವು ಬೇಗನೆ ಲಾಕ್‌ಡೌನ್ ಆರಂಭಿಸಿದ್ದರಿಂದ ಇಂದು ಭಾರತದ ಸ್ಥಿತಿ ಹಲವಾರು ಶ್ರೀಮಂತ ರಾಷ್ಟ್ರಗಳಿಗಿಂತ ಉತ್ತಮವಾಗಿದೆ. ಲಾಕ್‌ಡೌನ್‌ನ್ನು ಈಗ ಹಿಂದೆಗೆದುಕೊಂಡರೆ ಅದರ ಎಲ್ಲ ಲಾಭಗಳು ವ್ಯರ್ಥಗೊಳ್ಳುತ್ತವೆ. ಹೀಗಾಗದಿರಲು ಲಾಕ್‌ಡೌನ್ ವಿಸ್ತರಣೆ ಮುಖ್ಯವಾಗಿದೆ” ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಭೆಯ ಬಳಿಕ ಟ್ವೀಟಿಸಿದ್ದಾರೆ.

ಒಡಿಶಾ ಮತ್ತು ಪಂಜಾಬ್ ಈಗಾಗಲೇ ಲಾಕ್‌ಡೌನ್ ವಿಸ್ತರಣೆಯನ್ನು ಪ್ರಕಟಿಸಿವೆ. ಲಾಕ್‌ಡೌನ್ ವಿಸ್ತರಣೆಗೆ ತನ್ನ ಆಕ್ಷೇಪವಿಲ್ಲವೆಂದು ಬಿಹಾರ ಸರಕಾರವು ಕೇಂದ್ರಕ್ಕೆ ಬರೆದಿರುವ ಪತ್ರದಲ್ಲಿ ತಿಳಿಸಿದೆ. ಆದರೆ ಗ್ರಾಮೀಣ ನಿರ್ಮಾಣ ಚಟುವಟಿಕೆಗಳು ಮತ್ತು ನೆರೆ ಪರಿಹಾರ ಕಾಮಗಾರಿಗಳಿಗೆ ವಿನಾಯಿತಿಯನ್ನು ಮುಂದುವರಿಸುವಂತೆ ಕೋರಿಕೊಂಡಿದೆ. ಕಳೆದ ವರ್ಷ ಭಾರೀ ನೆರೆಗೆ ಸಾಕ್ಷಿಯಾಗಿದ್ದ ಬಿಹಾರದಲ್ಲಿ ಈಗಲೂ ಪುನರ್‌ನಿರ್ಮಾಣ ಯೋಜನೆಗಳು ಪ್ರಗತಿಯಲ್ಲಿವೆ.

 ವೀಡಿಯೊ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದ್ದ ಹೆಚ್ಚಿನ ಮುಖ್ಯಮಂತ್ರಿಗಳು ಲಾಕ್‌ಡೌನ್‌ನ್ನು ಶೀಘ್ರವೇ ಹಿಂದೆಗೆದು ಕೊಂಡರೆ ಕೊರೋನ ವೈರಸ್ ಪ್ರಕರಣಗಳಲ್ಲಿ ಏರಿಕೆಯನ್ನು ನಿಭಾಯಿಸಲು ರಾಜ್ಯಗಳಲ್ಲಿ ಅಗತ್ಯ ಹೆಚ್ಚಿನ ಸಂಪನ್ಮೂಲಗಳ ಕೊರತೆಯಾಗಬಹುದು ಎಂಬ ಅಂಶವನ್ನು ಬೆಟ್ಟು ಮಾಡಿದ್ದರು.

ಮೋದಿಯವರು ಲಾಕ್‌ಡೌನ್ ವಿಸ್ತರಣೆಯನ್ನು ಘೋಷಿಸಲು ಮತ್ತೊಮ್ಮೆ ದೇಶವನ್ನುದ್ದೇಶಿಸಿ ಟಿವಿ ಭಾಷಣವನ್ನು ಮಾಡುವ ಸಾಧ್ಯತೆಯಿದೆ.

ಕೈಗಾರಿಕೆಗಳು ಹಂತ ಹಂತವಾಗಿ ಪುನರಾರಂಭಗೊಳ್ಳಲು ತಾನು ಅವಕಾಶ ನೀಡುವುದಾಗಿ ಮೋದಿ ಸಭೆಯಲ್ಲಿ ತಿಳಿಸಿದರು.

 ‘ದಯವಿಟ್ಟು ಲಾಕ್‌ಡೌನ್ ವಿಸ್ತರಿಸಿ. ಕೊರೋನ ವೈರಸ್ ನಿಭಾಯಿಸಲು ನಮಗೆ ಮೂಲಸೌಕರ್ಯಗಳ ಕೊರತೆಯಿಲ್ಲ. ಆದರೆ ನೀತಿಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು ಪ್ರಶ್ನೆಯಾಗಿದೆ. ಪ್ರಧಾನಿಯವರು ಯಾವಾಗಲೂ ರಾಜ್ಯಗಳ ಸಲಹೆಗಳನ್ನು ಸ್ವಾಗತಿಸಿದ್ದಾರೆ ’ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರೆ, ದೇಶವ್ಯಾಪಿ ಲಾಕ್‌ಡೌನ್ ವಿಸ್ತರಿಸುವುದು ಮುಖ್ಯವಾಗಿದೆ. ರಾಬಿ ಬೆಳೆಗೆ ಏಕರೂಪ ಪರಿಹಾರ ನೀತಿಯೊಂದು ಅಗತ್ಯವಾಗಿದೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ ಗೆಹ್ಲೋಟ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X