ಕೋಮುದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ: ಕೊಡಗು ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್

ಮಡಿಕೇರಿ, ಎ.11: ಕೊರೋನ ವೈರಸ್ ಹರಡುತ್ತಿರುವ ಈ ಸೂಕ್ಷ್ಮ ಪರಿಸ್ಥಿತಿಯಲ್ಲೂ ಕೆಲವರು ಕೋಮುದ್ವೇಷ ಹರಡುವ ಕಿಡಿಗೇಡಿ ಕೃತ್ಯದಲ್ಲಿ ತೊಡಗಿದ್ದು, ಪೊಲೀಸ್ ಇಲಾಖೆಯ ಮನವಿಯನ್ನು ಧಿಕ್ಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ರಚಾರದಲ್ಲಿ ತೊಡಗಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ.
ಕೊರೋನಾ ಹರಡದಂತೆ ಪೊಲೀಸ್ ಇಲಾಖೆ ಶ್ರಮಿಸುತ್ತಿದೆ. ಇದರ ನಡುವೆ ಕೋಮು ಪ್ರಚೋದನಾಕಾರಿ ಹೇಳಿಕೆಗಳು ಹರಿದಾಡುತ್ತಿರುವುದು ಪೊಲೀಸರಿಗೆ ತಲೆ ನೋವಾಗಿ ಪರಿಣಮಿಸಿದೆ.
Next Story





