ಮಂಗಳೂರು : ಲಾಕ್ ಡೌನ್ ಹಿನ್ನೆಲೆಯಲ್ಲಿ ಪೊಲೀಸರಿಂದ ಬಿಗು ತಪಾಸಣೆ

ಮಂಗಳೂರು : ಕೊರೋನ ವೈರಸ್ ತಡೆಯುವ ನಿಟ್ಟಿನಲ್ಲಿ ದೇಶದಲ್ಲಿ ಲಾಕ್ ಡೌನ್ ಆದೇಶ ಜಾರಿಯಲ್ಲಿದ್ದು, ಮಂಗಳೂರಿನಲ್ಲಿ ಪೊಲೀಸರು ಬಿಗು ತಪಾಸಣೆ ನಡೆಸುತ್ತಿದ್ದಾರೆ.
ವಾಹನ ಸವಾರರು ಐಡಿ ಕಾರ್ಡ್ ಹೊಂದಿದ್ದರೂ ಅವರ ವಾಹನಗಳ ಸಂಖ್ಯೆಯನ್ನು ನಮೂದಿಸಿ ಕಳುಹಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲಾಕ್ ಡೌನ್ ಹಿನ್ನೆಲೆಯಲ್ಲಿ ನಗರದಲ್ಲಿ ಅನಗತ್ಯವಾಗಿ ಸಂಚರಿಸುವವರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಬಗ್ಗೆ ವರದಿಯಾಗಿದೆ.
ಕೊರೋನ ವೈರಸ್ ತಡೆಯುವ ನಿಟ್ಟಿನಲ್ಲಿ ದೇಶದಲ್ಲಿ ಲಾಕ್ ಡೌನ್ ಆದೇಶ ಜಾರಿಯಲ್ಲಿದ್ದು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಜಿಲ್ಲಾಡಳಿತ ನಿರ್ಧರಿಸಿದೆ.







.jpeg)

.jpeg)
_0.jpeg)


