Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ನೇಹಿತನನ್ನು ಸೂಟ್‌ಕೇಸ್‌ನಲ್ಲಿ...

ಸ್ನೇಹಿತನನ್ನು ಸೂಟ್‌ಕೇಸ್‌ನಲ್ಲಿ ತುಂಬಿಸಿ ಕೊಂಡೊಯ್ಯುವ ವೇಳೆ ಸಿಕ್ಕಿಬಿದ್ದ

ವಾರ್ತಾಭಾರತಿವಾರ್ತಾಭಾರತಿ12 April 2020 8:05 PM IST
share

ಮಂಗಳೂರು, ಎ.12: ಲಾಕ್‌ಡೌನ್ ಮಧ್ಯೆ ವಿದ್ಯಾರ್ಥಿಯೊಬ್ಬ ವಸತಿ ಸಮುಚ್ಚಯದ ನಿಯಮ ಮೀರಿ ಗೆಳೆಯನನ್ನು ಸೂಟ್‌ಕೇಸ್‌ನಲ್ಲಿ ತುಂಬಿಸಿ ರೂಮಿಗೆ ಕರೆದೊಯ್ದು ವಾಪಸ್ ಕೊಂಡೊಯ್ಯುವಾಗ ಸಿಕ್ಕಿಬಿದ್ದ ಘಟನೆ ರವಿವಾರ ನಡೆದಿದೆ.

ನಗರದ ಆರ್ಯಸಮಾಜ ರಸ್ತೆಯಲ್ಲಿರುವ ವಸತಿ ಸಮುಚ್ಚಯದಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿರುವ ವಿದ್ಯಾರ್ಥಿ ಮತ್ತು ಆತನ ಕುಟುಂಬ ವಾಸಿಸುತ್ತಿತ್ತು. ಆ ವಸತಿ ಸಮುಚ್ಚಯದಲ್ಲಿ ಇದೇ ಕುಟುಂಬಕ್ಕೆ ಇನ್ನೊಂದು ಬಾಡಿಗೆ ಮನೆಯಿದ್ದು, ಅದರಲ್ಲಿ ವಿದ್ಯಾರ್ಥಿ ವಾಸವಾಗಿದ್ದ.

ಲೋಕ್‌ಡೌನ್ ಹಿನ್ನೆಲೆಯಲ್ಲಿ ವಸತಿ ಸಮುಚ್ಚಯ ಅಸೋಸಿಯೇಶನ್ ವಾಸ್ತವ್ಯವಿರುವವರನ್ನು ಹೊರತುಪಡಿಸಿ ಇತರರಿಗೆ ಪ್ರವೇಶ ನಿರಾಕರಣೆ ಮಾಡಿತ್ತು. ವಿದ್ಯಾರ್ಥಿ ಮಾತ್ರ ‘ತನಗೆ ಬೋರ್ ಆಗುತ್ತದೆ, ತಾನು ಒಂಟಿಯಾಗಿದ್ದು ತನ್ನ ಗೆಳೆಯನನ್ನು ರೂಮಿಗೆ ಕರೆದುಕೊಂಡು ಬರುತ್ತೇನೆ’ ಎಂದು ಹೇಳುತ್ತಿದ್ದ. ಇದಕ್ಕೆ ವಸತಿ ಸಮುಚ್ಚಯ ಅಸೋಸಿಯೇಶನ್ ಅನುಮತಿ ನೀಡಿರಲಿಲ್ಲ ಎನ್ನಲಾಗಿದೆ.

ವಿದ್ಯಾರ್ಥಿ ರವಿವಾರ ಮುಂಜಾನೆ ರೂಮಿನಿಂದ ಸ್ಕೂಟರ್‌ನಲ್ಲಿ ಹೊರಗೆ ತೆರಳಿದ್ದಾನೆ. ಸ್ವಲ್ಪ ಸಮಯದ ಬಳಿಕ ಸೂಟ್‌ಕೇಸ್ ಜತೆ ಬಂದು ಅದನ್ನು ರೂಮಿಗೆ ಕೊಂಡು ಹೋಗಿದ್ದಾನೆ. ಇದನ್ನು ವಾಚ್‌ ಮ್ಯಾನ್ ನೋಡಿದ್ದರೂ ಕೂಡ ಮುಂಜಾವ ಆದ ಕಾರಣ ಪ್ರಶ್ನಿಸಲು ಹೋಗಿರಲಿಲ್ಲ ಎಂದು ತಿಳಿದು ಬಂದಿದೆ.

ಮತ್ತೆ ಸೂಟ್‌ಕೇಸ್ ಜತೆ ರೂಮಿನಿಂದ ಹೊರಬಂದು ಸ್ಕೂಟರ್‌ನಲ್ಲಿ ತೆರಳಲು ಸಿದ್ಧತೆ ನಡೆಸುತ್ತಿದ್ದಾಗ ಅನುಮಾನಗೊಂಡು ವಿದ್ಯಾರ್ಥಿಯನ್ನು ತಡೆದು ಪ್ರಶ್ನಿಸಿ ಸೂಟ್‌ಕೇಸ್ ತೆರೆಯುವಂತೆ ಒತ್ತಾಯಿಸಿದ್ದಾರೆ. ಸೂಟ್‌ಕೇಸ್ ತೆರೆದಾಗ ಅದರೊಳಗೆ ವಿದ್ಯಾರ್ಥಿಯ ಸ್ನೇಹಿತ ಪತ್ತೆಯಾದ ಎಂದು ತಿಳಿದುಬಂದಿದೆ.

ಈ ಬಗ್ಗೆ ಕದ್ರಿ ಪೊಲೀಸರಿಗೆ ತಿಳಿಸಲಾಯಿತು. ಅದರಂತೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಸೂಟ್‌ಕೇಸ್ ಸಹಿತ ಇಬ್ಬರನ್ನು ಕದ್ರಿ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿ ವಿದ್ಯಾರ್ಥಿಯಿಂದ ಮುಚ್ಚಳಿಕೆ ಬರೆಸಿ ಬಿಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X