ಕೊರೋನ ಕುರಿತಾಗಿ ಹೇಳಿಕೆ ನೀಡುವಾಗ ಎಚ್ಚರವಿರಲಿ: ದ.ಕ.ಜಿಲ್ಲಾ ಕಾಂಗ್ರೆಸ್ ಸೂಚನೆ
ಮಂಗಳೂರು, ಎ.12: ಕೊರೋನ ವೈರಸ್ ರೋಗಕ್ಕೆ ಸಂಬಂಧಿಸಿದಂತೆ ಪಕ್ಷದ ನಾಯಕರು, ಕಾರ್ಯಕರ್ತರು ಸಾಮಾಜಿಕ ಜಾಲತಾಣ ಸಹಿತ ವಿವಿಧ ಮಾಧ್ಯಮಗಳಿಗೆ ಯಾವುದೇ ಹೇಳಿಕೆ ಅಥವಾ ಪ್ರಕಟನೆಗಳನ್ನು ನೀಡುವಾಗ ಎಚ್ಚರಿಕೆ ವಹಿಸಲು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸೂಚಿಸಿದ್ದಾರೆ.
ಪಕ್ಷದ ನಾಯಕರು, ಕಾರ್ಯಕರ್ತರು ವಿವಿಧ ರೀತಿಯ ಹೇಳಿಕೆಗಳನ್ನು ನೀಡುತ್ತಿರುವುದು ಕಂಡು ಬಂದಿದೆ. ಈ ರೋಗಕ್ಕೆ ಸಂಬಂಧಿಸಿ ಯಾವುದೇ ಹೇಳಿಕೆ ನೀಡುವ ಮುನ್ನ ಜಿಲ್ಲಾ ಕಾಂಗ್ರೆಸ್‌ನಲ್ಲಿ ಸಮಾಲೋಚನೆ ನಡೆಸದೆ ನೀಡಬಾರದು. ಯಾವುದೇ ಹೇಳಿಕೆಗಳನ್ನು ನೀಡುವ ಮೊದಲು ಜಿಲ್ಲಾ ಕಾಂಗ್ರೆಸ್‌ನಲ್ಲಿ ಸಮಾಲೋಚಿಸಿ ಬಳಿಕ ನೀಡುವಂತೆ ತಿಳಿಸಿದ್ದಾರೆ.
Next Story





