ಜಪ್ತಿ ಮಾಡಿದ್ದ ಆಟೋ ಕೊಂಡೊಯ್ಯುತ್ತಿದ್ದ ವೇಳೆ ಅಪಘಾತ: ಪೊಲೀಸ್ ಮುಖ್ಯಪೇದೆ ಮೃತ್ಯು

ಬೆಂಗಳೂರು, ಎ.12: ಲಾಕ್‍ಡೌನ್ ಹಿನ್ನೆಲೆ ಅನಗತ್ಯವಾಗಿ ಸಂಚಾರ ಮಾಡುತ್ತಿದ್ದ ವೇಳೆ ಜಪ್ತಿ ಮಾಡಿದ್ದ ಆಟೋ ರಿಕ್ಷಾ ಒಂದನ್ನು ಪೊಲೀಸ್ ಮುಖ್ಯ ಪೇದೆ ಚಲಾಯಿದಾಗ ಅಪಘಾತ ಸಂಭವಿಸಿ ಮುಖ್ಯ ಪೇದೆ ಮೃತಪಟ್ಟಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಜಪ್ತಿ ಮಾಡಿದ್ದ ಆಟೋ ಚಾಲನೆ ಮಾಡಿಕೊಂಡು ಹೋಗುವಾಗ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಢಿಕ್ಕಿಯಾಗಿದ್ದು, ಪರಿಣಾಮ ಪೀಣ್ಯ ಪೊಲೀಸ್ ಠಾಣೆಯ ಮುಖ್ಯಪೇದೆ ನಾಗೇಶ್ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ರವಿವಾರ ಪೀಣ್ಯ ದಾಸರಹಳ್ಳಿ ಜಂಕ್ಷನ್ ಬಳಿ ಅನಗತ್ಯವಾಗಿ ರಸ್ತೆಯಲ್ಲಿ ಓಡಾಡುತ್ತಿದ್ದ ಆಟೋವನ್ನು ವಶಕ್ಕೆ ಪಡೆದುಕೊಂಡಿದ್ದು, ಅದನ್ನು ಕೊಂಡು ಹೋಗುವಾಗ ವಾಹನ ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದಿದೆ. ಅಪಘಾತ ಬಳಿಕ ನಾಗೇಶ್‍ಗೆ ಲಘು ಹೃದಯಾಘಾತವಾಗಿದೆ ಎಂದು ತಿಳಿದುಬಂದಿದೆ.
ಪೊಲೀಸರು ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ತಲೆಗೆ ಗಂಭೀರ ಗಾಯವಾದ ಹಿನ್ನೆಲೆಯಲ್ಲಿ ತೀವ್ರ ರಕ್ತಸ್ರಾವವಾಗಿ, ಚಿಕಿತ್ಸೆ ಫಲಕಾರಿಯಾಗದೆ ನಾಗೇಶ್ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
Next Story





