ಲಾಕ್‌ಡೌನ್ ಉಲ್ಲಂಘನೆ : 63 ವಾಹನಗಳು ಮುಟ್ಟುಗೋಲು
ಮಂಗಳೂರು, ಎ.12: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಲಾಕ್‌ಡೌನ್ ಉಲ್ಲಂಘನೆ ಮಾಡಿ ಸಂಚರಿಸುತ್ತಿದ್ದ 63 ವಾಹನಗಳನ್ನು ಮಂಗಳೂರು ನಗರ ಪೊಲೀಸರು ರವಿವಾರ ಮುಟ್ಟುಗೋಲು ಹಾಕಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಲಾಕ್‌ಡೌನ್ ಹಿನ್ನೆಲೆಯಲ್ಲಿ ಬಿಗು ತಪಾಸಣೆ ನಡೆಸಲಾಗುತ್ತಿದ್ದು, ನಿಯಮ ಉಲ್ಲಂಘನೆ ಮಾಡಿದ ದ್ವಿಚಕ್ರ ವಾಹನ, ಕಾರು, ಆಟೋರಿಕ್ಷಾ ಸೇರಿದಂತೆ ಒಟ್ಟು 63 ವಾಹನಗಳ ಮೇಲೆ ಕೇಸು ದಾಖಲಿಸಲಾಗಿದೆ.
ಮಂಗಳೂರು ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್. ಹರ್ಷಾ ನಿರ್ದೇಶನದಂತೆ ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಲಕ್ಷ್ಮೀ ಪ್ರಸಾದ್ ಮತ್ತು ಸಂಚಾರ ವಿಭಾಗದ ಎಸಿಪಿ ಮಂಜುನಾಥ್ ಶೆಟ್ಟಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
Next Story





