ಮಕ್ಕಳ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸುವುದು ಬಾಲನ್ಯಾಯ ಕಾಯ್ದೆಯ ಉಲ್ಲಂಘನೆ: ಮಕ್ಕಳ ರಕ್ಷಣಾ ಸೊಸೈಟಿ
ಬೆಂಗಳೂರು, ಎ. 12: ರಾಜ್ಯದಲ್ಲಿನ ಕೊರೋನ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಮಕ್ಕಳ ಫೋಟೋ ಮತ್ತು ಇನ್ನಿತರ ವಿವರಗಳನ್ನು ಬಳಸಿ ದೇಣಿಗೆ ಪಡೆಯುವುದು ಬಾಲನ್ಯಾಯ ಕಾಯ್ದೆ ಉಲ್ಲಂಘನೆ ಎಂದು ರಾಜ್ಯ ಮಕ್ಕಳ ರಕ್ಷಣಾ ಸೊಸೈಟಿ ನಿರ್ದೇಶಕರು ಎಚ್ಚರಿಸಿದ್ದಾರೆ.
ರಾಜ್ಯದಲ್ಲಿ ಕೊರೋನ ವೈರಸ್ ಸೋಂಕು ಮಾರಕ ಸ್ವರೂಪದಲ್ಲಿ ಹರಡುತ್ತಿದ್ದು ಸ್ವಯಂ ಸೇವಾ ಸಂಸ್ಥೆಗಳು ನಡೆಸುತ್ತಿರುವ ಹಲವು ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಮಕ್ಕಳ ಆರೈಕೆ, ಪಾಲನೆ ಪೋಷಣೆಗಾಗಿ ದೇಣಿಗೆ ಸಂಗ್ರಹಿಸುತ್ತಿರುವುದು ಗಮನಕ್ಕೆ ಬಂದಿದೆ ಎಂದು ತಿಳಿಸಲಾಗಿದೆ.
ಈ ವಿಚಾರದ ಬಗ್ಗೆ ಸಾರ್ವಜನಿಕರು ಗಮನಿಸಿದಲ್ಲಿ ಕೊರೋನ ತುರ್ತು ಪರಿಸ್ಥಿತಿಯಲ್ಲಿ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ನೀಡಬೇಕು ಎಂದು ಪ್ರಕಟಣೆ ಕೋರಿದೆ.
Next Story





