ಕೊರೋನ: ರಾಜ್ಯದಲ್ಲಿ ನಿನ್ನೆ ಸಂಜೆಯಿಂದ 15 ಹೊಸ ಪ್ರಕರಣ ಪತ್ತೆ
ಸೋಂಕಿತರ ಒಟ್ಟು ಸಂಖ್ಯೆ 247ಕ್ಕೇರಿಕೆ

ಬೆಂಗಳೂರು, ಎ.13: ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ತೀವ್ರವಾಗಿ ಏರಿಕೆ ಕಂಡುಬರುತ್ತಿದೆ. ರವಿವಾರ ಸಂಜೆ 5ರಿಂದ ಇಂದು ಮಧ್ಯಾಹ್ನ 12 ಗಂಟೆಯೊಳಗೆ 15 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆಯ ಪ್ರಕಟನೆ ತಿಳಿಸಿದೆ.
ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆ 247ಕ್ಕೆ ಏರಿಕೆಯಾಗಿದೆ. ಹುಬ್ಬಳ್ಳಿಯಲ್ಲಿ 4, ಮಂಡ್ಯ 3, ಬೆಳಗಾವಿ 3 ಬೀದರ್ 2, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆಯಲ್ಲಿ ತಲಾ ಒಬ್ಬರಲ್ಲಿ ಕೊರೋನ ಸೋಂಕು ಕಾಣಿಸಿಕೊಂಡಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ರವಿವಾರ ಇಡೀ ದಿನ 17 ಹೊಸ ಕೊರೋನ ಪ್ರಕರಣಗಳು ವರದಿಯಾಗಿದ್ದರೆ, ಇಂದು ಮಧ್ಯಾಹ್ನದೊಳಗೆಯೇ 15 ಮಂದಿಯಲ್ಲಿ ಸೋಂಕು ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.
ಕರ್ನಾಟಕದಲ್ಲಿ ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ 15 ಹೊಸ #Covid19 ಪ್ರಕರಣಗಳು ಖಚಿತವಾಗಿದ್ದು, ಒಟ್ಟಾರೆ ಸೊಂಕಿತರ ಸಂಖ್ಯೆ 247ಕ್ಕೆ ಏರಿದೆ. ಇದುವರೆಗೆ 59 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. #IndiaFightsCornona pic.twitter.com/n3YFfEmt07
— B Sriramulu (@sriramulubjp) April 13, 2020







