ತಮಿಳುನಾಡು: ಲಾಕ್ ಡೌನ್ ಎಪ್ರಿಲ್ 30ರ ತನಕ ವಿಸ್ತರಣೆ

ಚೆನ್ನೈ : ಕಳೆದ ತಿಂಗಳ ಮಾರ್ಚ್ 24ರಂದು ಕೇಂದ್ರ ಸರಕಾರ ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟಲು ಹೇರಿದ 21 ದಿನಗಳ ಲಾಕ್ ಡೌನ್ ಅನ್ನು ತಮಿಳುನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ರಾಜ್ಯದಲ್ಲಿ ಇನ್ನೂ ಎರಡು ವಾರಗಳ ತನಕ ವಿಸ್ತರಿಸಿದ್ದಾರೆ. ರಾಜ್ಯದಲ್ಲಿ ಎಪ್ರಿಲ್ 30ರ ತನಕ ಲಾಕ್ ಡೌನ್ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ. ಸಾರ್ವಜನಿಕ ಆರೋಗ್ಯ ಕ್ಷೇತ್ರದ ತಜ್ಞರ ಸಲಹೆಯಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದೂ ಅವರು ತಿಳಿಸಿದ್ದಾರೆ.
ಇಲ್ಲಿಯ ತನಕ ಲಾಕ್ ಡೌನ್ ವಿಸ್ತರಣೆ ಘೋಷಿಸಿದ ಏಳನೇ ರಾಜ್ಯ ತಮಿಳುನಾಡು ಆಗಿದೆ. ಈಗಾಗಲೇ ಮಹಾರಾಷ್ಟ್ರ, ಪಂಜಾಬ್, ಒಡಿಶಾ, ರಾಜಸ್ಥಾನ, ಪಶ್ಚಿಮ ಬಂಗಾಳ ಹಾಗೂ ತೆಲಂಗಾಣ ಸರಕಾರಗಳು ಎಪ್ರಿಲ್ 30ರ ತನಕ ಲಾಕ್ ಡೌನ್ ವಿಸ್ತರಿಸಿವೆ.
Next Story





