ಜನೌಷಧಿ ಕೇಂದ್ರಗಳನ್ನು ಬೆಳಗ್ಗೆ 7 ಗಂಟೆಗೆ ತೆರೆಯಲು ಸಚಿವ ಕೋಟ ಸೂಚನೆ
ಮಂಗಳೂರು, ಎ.13: ಕೇಂದ್ರ ಸರಕಾರದ ಜನೋಪಯೋಗಿ ಯೋಜನೆಯಾದ, ಜನೌಷಧಿ ಕೇಂದ್ರವನ್ನು ಬೆಳಗ್ಗೆ 9 ಗಂಟೆಯ ನಂತರ ತೆರೆಯುವುದರಿಂದ ಅನೇಕರಿಗೆ ತೊಂದರೆಯಾಗುತ್ತಿದೆ ಎಂಬ ದೂರು ಬರುತ್ತಿದೆ. ಹಾಗಾಗಿ ಎ.14ರಿಂದ ಬೆಳಗ್ಗೆ 7 ಗಂಟೆಗೆ ತೆರೆಯಲು ದ.ಕ. ಮತ್ತು ಉಡುಪಿ ಜಿಲ್ಲೆಯ ಜನೌಷಧಿ ಕೇಂದ್ರಗಳ ಮೇಲ್ವಿಚಾರಕರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ.
ದ.ಕ.ಜಿಲ್ಲೆಯಲ್ಲಿ 34 ಹಾಗೂ ಉಡುಪಿ ಜಿಲ್ಲೆಯಲ್ಲಿ 27 ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳು ಕಾರ್ಯವೆಸಗುತ್ತಿದೆ. ಇಲ್ಲಿ ಬೆಳಗ್ಗೆ 7 ಗಂಟೆಗೆ ತೆರೆದರೆ ಜನಸಾಮಾನ್ಯರು ಕಡಿಮೆ ವೆಚ್ಚದಲ್ಲಿ ಔಷಧ ಪಡೆಯಲು ಸಾಧ್ಯವಾಗಲಿದೆ ಎಂದು ಸಚಿವರ ಕಾರ್ಯಾಲಯದ ಪ್ರಕಟನೆ ತಿಳಿಸಿದೆ.
Next Story





