ಕೊರೋನ ಸೋಂಕಿತ ಕಲಬುರಗಿಯ ವ್ಯಕ್ತಿ ಸಾವು: ರಾಜ್ಯದಲ್ಲಿ 7ಕ್ಕೆ ಏರಿದ ಸಾವಿನ ಸಂಖ್ಯೆ

ಕಲಬುರಗಿ, ಎ.13: ಕೊರೋನ ವೈರಸ್ ಸೋಂಕಿತ ವ್ಯಕ್ತಿಯೊಬ್ಬರು ಇಂದು ಮೃತಪಟ್ಟಿದ್ದು, ಇದರೊಂದಿಗೆ ಕೊರೋನದಿಂದ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.
ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 55 ವರ್ಷದ ವ್ಯಕ್ತಿ ಇಂದು ಮೃತಪಟ್ಟಿದ್ದಾರೆ. ಇವರು ಇತ್ತೀಚಿಗೆ ಆಸ್ಪತ್ರೆಗೆ ದಾಖಲಾಗಿ ಕೋವಿಡ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಪ್ರಕರಣದೊಂದಿಗೆ ಕಲಬುರಗಿ ಜಿಲ್ಲೆಯಲ್ಲಿ ಕೊರೋನ ಸೋಂಕಿನಿಂದ ಮೃತರಾದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
Next Story





