Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಲಾಕ್‌ಡೌನ್ ಎಫೆಕ್ಟ್: ರಸ್ತೆಯಲ್ಲಿ...

​ಲಾಕ್‌ಡೌನ್ ಎಫೆಕ್ಟ್: ರಸ್ತೆಯಲ್ಲಿ ಹರಿಯುತ್ತಿದ್ದ ಹಾಲನ್ನು ಹಂಚಿಕೊಳ್ಳುತ್ತಿರುವ ವ್ಯಕ್ತಿ ಮತ್ತು ಬೀದಿನಾಯಿಗಳು

ವಾರ್ತಾಭಾರತಿವಾರ್ತಾಭಾರತಿ13 April 2020 10:50 PM IST
share
​ಲಾಕ್‌ಡೌನ್ ಎಫೆಕ್ಟ್: ರಸ್ತೆಯಲ್ಲಿ ಹರಿಯುತ್ತಿದ್ದ ಹಾಲನ್ನು ಹಂಚಿಕೊಳ್ಳುತ್ತಿರುವ ವ್ಯಕ್ತಿ ಮತ್ತು ಬೀದಿನಾಯಿಗಳು

ಲಕ್ನೋ, ಎ.13: ಕೊರೋನ ವೈರಸ್ ಸೋಂಕು ಹರಡುವುದನ್ನು ನಿಯಂತ್ರಿಸಲು ತರಾತುರಿಯಲ್ಲಿ ಹೇರಲಾಗಿದ್ದ ದೇಶವ್ಯಾಪಿ 21 ದಿನಗಳ ಲಾಕ್‌ಡೌನ್ ಹಲವಾರು ರೀತಿಗಳಲ್ಲಿ ಜನರನ್ನು ಸಂಕಷ್ಟಕ್ಕೆ ತಳ್ಳಿದೆ. ಇಂತಹ ಚಿತ್ರಣವೊಂದು ಸೋಮವಾರ ಬೆಳಿಗ್ಗೆ ಆಗ್ರಾದಲ್ಲಿ ಅನಾವರಣಗೊಂಡಿದೆ.

ವಿಶ್ವವಿಖ್ಯಾತ ತಾಜ್ ಮಹಲ್‌ಗೆ ಕೇವಲ ಆರು ಕಿ.ಮೀ.ದೂರದಲ್ಲಿರುವ ಆಗ್ರಾದ ರಾಮ ಬಾಘ್ ಚೌರಾಹಾ ದಲ್ಲಿ ಬೃಹತ್ ಗಾತ್ರದ ಹಾಲು ಸಾಗಾಟದ ಟ್ಯಾಂಕರ್ ಪಲ್ಟಿಯಾಗಿದ್ದು, ರಸ್ತೆಯಲ್ಲಿ ಹರಿಯುತ್ತಿದ್ದ ಹಾಲನ್ನು ಓರ್ವ ವ್ಯಕ್ತಿ ಬೀದಿನಾಯಿಗಳ ಗುಂಪಿನೊಂದಿಗೆ ಹಂಚಿಕೊಳ್ಳುತ್ತಿದ್ದ ದೃಶ್ಯ ಲಾಕ್ಡೌನ್ ನ ಸಂಕಷ್ಟಕ್ಕೆ ಸಾಕ್ಷಿಯಾಗಿತ್ತು. ತನ್ನ ಬಳಿಯಿದ್ದ ಸಣ್ಣ ಮಣ್ಣಿನ ಪಾತ್ರೆಯಲ್ಲಿ ಸಾಧ್ಯವಾದಷ್ಟು ಹಾಲನ್ನು ಬಾಚಿಕೊಳ್ಳಲು ವ್ಯಕ್ತಿಯು ಪ್ರಯತ್ನಿಸುತ್ತಿದ್ದರೆ ಸಮೀಪದಲ್ಲಿಯೇ ಅದೇ ಹಾಲಿಗಾಗಿ ಬೀದಿನಾಯಿಗಳು ಕಿತ್ತಾಡುತ್ತಿದ್ದವು.

ದೇಶಾದ್ಯಂತ ಲಕ್ಷಾಂತರ ಜನರನ್ನು ಬಡತನ ಮತ್ತು ಹಸಿವೆಯ ಕೂಪಕ್ಕೆ ತಳ್ಳಿರುವ 21 ದಿನಗಳ ಲಾಕ್‌ಡೌನ್ ಮಂಗಳವಾರ ಅಂತ್ಯಗೊಳ್ಳಲಿದೆ,ಆದರೆ ಅದು ಇನ್ನೂ ಎರಡು ವಾರಗಳ ಕಾಲ ವಿಸ್ತರಣೆಯಾಗುವುದು ಈಗಾಗಲೇ ಖಚಿತವಾಗಿದೆ.
ಯಾವುದೇ ಪೂರ್ವಸೂಚನೆಯಿಲ್ಲದೆ ದಿಢೀರನೆ ಮಾ.24ರಂದು ರಾತ್ರಿ ಎಂಟು ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಿದ ಲಾಕ್‌ಡೌನ್‌ಗೆ ಎರಡು ತಿಂಗಳು ಮೊದಲು ಭಾರತದಲ್ಲಿ ಮೊದಲ ಕರೋನ ವೈರಸ್ ಪ್ರಕರಣ ದಾಖಲಾಗಿತ್ತು.

ಸುಮಾರು 80 ಕೋಟಿ ಜನರಿಗೆ ನೆರವಾಗಲು ಕೇಂದ್ರವು ನೇರ ನಗದು ವರ್ಗಾವಣೆ ಮತ್ತು ಆಹಾರ ಸಬ್ಸಿಡಿಗಳನ್ನು ಪ್ರಕಟಿಸಿತ್ತು. ಆದರೆ ಎನ್‌ಡಿಟಿವಿ ಕಳೆದ ಕೆಲವು ವಾರಗಳಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಹೆಚ್ಚಿನ ಜನರು ತಮಗೆ ಇಂತಹ ಯಾವುದೇ ಸೌಲಭ್ಯ ದೊರಕಿಲ್ಲ ಅಥವಾ ಕಿಂಚಿತ್ ಲಾಭಗಳು ದೊರಕಿವೆ ಎಂದು ಹೇಳಿದ್ದಾರೆ. ಈ ಸೌಲಭ್ಯಗಳನ್ನು ಪಡೆಯಲು ಜನರು ಬಿಸಿಲಲ್ಲಿ ಸರದಿ ಸಾಲುಗಳಲ್ಲಿ ಗಂಟೆಗಟ್ಟಲೆ ಕಾದು ಬಸವಳಿದಿದ್ದಾರೆ,ಹಲವರು ಪೊಲೀಸರ ಲಾಠಿ ಏಟಿನ ರುಚಿಯನ್ನೂ ಕಂಡಿದ್ದಾರೆ.

ಲಾಕ್‌ಡೌನ್ ಕೊರೋನ ವೈರಸ್ ಪ್ರಕರಣಗಳ ತ್ವರಿತ ಏರಿಕೆಯನ್ನು ನಿಯಂತ್ರಿಸುವಲ್ಲಿ ಕೊಂಚ ಯಶಸ್ಸಿನ ಸಂಕೇತಗಳನ್ನು ನೀಡಿದೆಯಾದರೂ, ಸರಕಾರವು ಸಾಕಷ್ಟು ಪೂರ್ವಯೋಜನೆ ಮತ್ತು ಸಿದ್ಧತೆಗಳಿಲ್ಲದೆ ಕಠಿಣ ಕ್ರಮಗಳನ್ನು ಜಾರಿಗೊಳಿಸುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

Lockdown Impact:
इंसान और जानवर साथ साथ दूध पीने लगे।
आज अगरा के रामबाग चौराहे पर एक दूध वाले की दूध की टंकी गिर गयी।फिर क्या हुआ खुद देखिए। pic.twitter.com/OWvNg8EFIe

— Kamal khan (@kamalkhan_NDTV) April 13, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X