ಕಲಬುರಗಿ: ಸಿಡಿಲು ಬಡಿದು ಇಬ್ಬರು ಮೃತ್ಯು

ಕಲಬುರಗಿ, ಎ.13: ಸಿಡಿಲು ಬಡಿದು ಇಬ್ಬರು ಕುರಿಗಾಹಿಗಳು ಮೃತಪಟ್ಟಿರುವ ಘಟನೆ ಯಡ್ರಾಮಿ ತಾಲೂಕಿನ ಐನಾಪುರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಗ್ರಾಮದ ಕಲ್ಲಪ್ಪ ಪೂಜಾರಿ ಮತ್ತು ಮುದುಕಪ್ಪ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಕುರಿ ಕಾಯಲು ಹೋದಾಗ ಸಿಡಿಲು ಬಡಿದು ಈ ದುರಂತ ಸಂಭವಿಸಿದೆ. ಈ ಕುರಿತು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





