Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೇ 3ರ ತನಕ ಲಾಕ್ ಡೌನ್ ಮುಂದುವರಿಕೆ:...

ಮೇ 3ರ ತನಕ ಲಾಕ್ ಡೌನ್ ಮುಂದುವರಿಕೆ: ಪ್ರಧಾನಿ ಮೋದಿ

ಕೋವಿಡ್ ವಿರುದ್ಧ ಹೋರಾಟಕ್ಕೆ ದೇಶದ ಜನತೆ ಮುಂದೆ ಸಪ್ತ ಸೂತ್ರ

ವಾರ್ತಾಭಾರತಿವಾರ್ತಾಭಾರತಿ14 April 2020 10:19 AM IST
share
ಮೇ 3ರ ತನಕ ಲಾಕ್ ಡೌನ್ ಮುಂದುವರಿಕೆ: ಪ್ರಧಾನಿ ಮೋದಿ

ಹೊಸದಿಲ್ಲಿ, ಎ.14: ಮಹಾಮಾರಿ ಕೊರೋನ ವೈರಸ್ ಸೋಂಕು ಹರಡುವುದರ ವಿರುದ್ಧ  ಹೋರಾಟ ಮಾಡುತ್ತಿದ್ದೇವೆ. ಲಾಕ್ ಡೌನ್ ಮಾಡಿದ್ದೇವೆ. ಲಾಕ್ ಡೌನ್ ಲಾಭ ಭಾರತಕ್ಕೆ ಸಿಕ್ಕಿದೆ. ಈಗಾಗಲೇ ಜಾರಿಯಲ್ಲಿರುವ ಲಾಕ್ ಡೌನ್ ನ್ನು ಮೇ 3ರ ತನಕ ವಿಸ್ತರಿಸಲಾಗುವುದು  ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಕಟಿಸಿದರು.

ದೇಶವನ್ನುದ್ದೇಶಿಸಿ ಮಂಗಳವಾರ  ಮಾತಾನಾಡಿದ ಅವರು  ಲಾಕ್ ಡೌನ್ ವಿಸ್ತರಣೆಯಾಗಿರುವ ಅವಧಿಯಲ್ಲಿ  ಜನರು ಏನೆಲ್ಲಾ ಮಾಡಬೇಕು  ಮತ್ತು ಏನೆಲ್ಲಾ ಮಾಡಬಾರದು ಎಂಬ ವಿಷಯಗಳ ಬಗ್ಗೆ ಸರಕಾರ  ಬುಧವಾರ ವಿವರವಾದ ಮಾರ್ಗಸೂಚಿಯನ್ನು ಹೊರಡಿಸಲಿದೆ ಎಂದರು 

ಎಲ್ಲಾ ದೇಶವಾಸಿಗಳ ತಪಸ್ಸಿನ ಫಲವಾಗಿ ಈ  ಹೋರಾಟದಲ್ಲಿ ಯಶಸ್ಸು ಸಾಧಿಸಿದ್ದೇವೆ. ಕೆಲವರಿಗೆ ಊಟಕ್ಕೆ, ಕೆಲವರಿಗೆ ಓಡಾಟಕ್ಕೆ ಈ ನಡುವೆ  ತೊಂದರೆಯಾಗಿದೆ ಎಂದು  ಹೇಳಿದರು.

19 ದಿನಗಳ ಲಾಕ್ ಡೌನ್ ನ್ನು ಮುಂದುವರಿಸಿದ ಪ್ರಧಾನಿ ಮೋದಿ  ಅವರು ಎ.20ರ ಬಳಿಕ ಪರಿಸ್ಥಿತಿಯನ್ನು  ಅವಲೋಕಿಸಿ ಮುಂದಿನ ನಿರ್ಧಾರ ಕೈಕೊಳ್ಳಲಾಗುವುದು ಎಂದರು

ಈಗಾಗಲೇ  ಆರ್ಥಿಕತೆಯ ವಿಷಯದಲ್ಲಿ ಭಾರತವು ಭಾರಿ ನಷ್ಟವನ್ನು ಅನುಭವಿಸಬೇಕಾದರೂ ಜನರ ಜೀವನವು ಹೆಚ್ಚು ಮಹತ್ವದ್ದಾಗಿದೆ ಎಂದು ಪ್ರಧಾನಿ ಹೇಳಿದರು.

ಕೋವಿಡ್ -19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಯುವ ಭಾರತದ ಪ್ರಯತ್ನವು ವಿಶ್ವದ ಹೆಚ್ಚಿನ ದೇಶಗಳಿಗಿಂತ ಉತ್ತಮವಾಗಿದೆ. ಪ್ರಕರಣಗಳಲ್ಲಿ ಒಂದೇ ಒಂದು ಪ್ರಕರಣ ಇರುವುದಕ್ಕೂ ಮುಂಚೆಯೇ, ನಾವು ವಿದೇಶದಿಂದ ಬರುವ ಪ್ರಯಾಣಿಕರನ್ನು ಪರೀಕ್ಷಿಸಲು ಪ್ರಾರಂಭಿಸಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು.

ಜನರು, ವಿಶೇಷವಾಗಿ ವಲಸೆ ಕಾರ್ಮಿಕರು ಎದುರಿಸುತ್ತಿರುವ ಎಲ್ಲಾ ಕಷ್ಟಗಳ ನಡುವೆಯೂ ಕೋವಿಡ್ -19 ವಿರುದ್ಧದ ಸಾಮೂಹಿಕ ಹೋರಾಟಕ್ಕೆ ಧನ್ಯವಾದ ಸಲ್ಲಿಸಿದ ಮೋದಿ  ಅವರು ಸಾಮೂಹಿಕ ಪ್ರಯತ್ನಗಳನ್ನು ಶಿಸ್ತಿನ ಸೈನಿಕನ ಪ್ರಯತ್ನಕ್ಕೆ ಹೋಲಿಸಿದರು.

ದೇಶದ ಜನತೆಯ ಮುಂದಿಟ್ಟ ಸಪ್ತ ಸೂತ್ರ

ಭಾರತದಲ್ಲಿ ಕೊರೋನ ವೈರಸ್  ಸೋಂಕು ಹರಡುವುದನ್ನು   ತಡೆಯಲು ಪ್ರಧಾನಿ  ಮೋದಿಯವರು ಇದೇ ಸಂದರ್ಭದಲ್ಲಿ  ಏಳು ಸೂಚನೆಗಳು ಮತ್ತು  ಮುನ್ನೆಚ್ಚರಿಕೆಗಳನ್ನು ಒಳಗೊಂಡ ಪಟ್ಟಿಯನ್ನು ದೇಶದ ಜನತೆಯ  ಮುಂದಿಟ್ಟಿದ್ದಾರೆ, ವಿವರ ಇಂತಿವೆ

*ನಿಮ್ಮ ಮನೆಯ ಹಿರಿಯ ನಾಗರಿಕರನ್ನು, ಅದರಲ್ಲೂ ವಿಶೇಷವಾಗಿ ಸಮಸ್ಯೆಗಳಿರುವವರನ್ನು ಸರಿಯಾಗಿ ನೋಡಿಕೊಳ್ಳಿ.

* ಲಾಕ್‌ಡೌನ್ ಮತ್ತು ಸಾಮಾಜಿಕ ದೂರವನ್ನು ಸರಿಯಾಗಿ ಅನುಸರಿಸಬೇಕು. ಮನೆಯಲ್ಲಿ ತಯಾರಿಸಿದ ಫೇಸ್ ಕವರ್ ಮತ್ತು ಮಾಸ್ಕ್ ಗಳನ್ನು ಬಳಸಬೇಕು.

 * ಆಯುಷ್ ಸಚಿವಾಲಯ ನೀಡಿದ ನಿರ್ದೇಶನಗಳನ್ನು ಅನುಸರಿಸಿ ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ.

 * ಕೊರೊನಾವೈರಸ್ ಹರಡುವಿಕೆಯನ್ನು ತಡೆಯಲು, ಆರೋಗ್ಯ ಸೇತು  ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿ.

 * ಸಾಧ್ಯವಾದಲ್ಲೆಲ್ಲಾ ಬಡ ಕುಟುಂಬಗಳಿಗೆ ಸಹಾಯ ಮಾಡಿ.

 * ನಿಮ್ಮ ವ್ಯವಹಾರಗಳಲ್ಲಿ, ನಿಮ್ಮ ಸಹೋದ್ಯೋಗಿಗಳಿಗೆ ಸಹಾಯ ಮಾಡಿ, ನೌಕರರನ್ನು ಕೆಲಸದಿಂದ  ತೆಗದುಹಾಕಬೇಡಿ.

* ಕೊರೋನ ವೈರಸ್ 'ಸೈನಿಕರು' - ವೈದ್ಯರು, ದಾದಿಯರು, ನೈರ್ಮಲ್ಯ ಕಾರ್ಮಿಕರನ್ನು ಗೌರವಿಸಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X