Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೇ 3ರ ತನಕ ಲಾಕ್ ಡೌನ್: ಪ್ರಧಾನಿ ಮೋದಿ...

ಮೇ 3ರ ತನಕ ಲಾಕ್ ಡೌನ್: ಪ್ರಧಾನಿ ಮೋದಿ ದೇಶದ ಜನತೆಯ ಮುಂದಿಟ್ಟ 7 ಸೂತ್ರಗಳು

ವಾರ್ತಾಭಾರತಿವಾರ್ತಾಭಾರತಿ14 April 2020 11:17 AM IST
share
ಮೇ 3ರ ತನಕ ಲಾಕ್ ಡೌನ್: ಪ್ರಧಾನಿ ಮೋದಿ ದೇಶದ ಜನತೆಯ ಮುಂದಿಟ್ಟ 7 ಸೂತ್ರಗಳು

ಹೊಸದಿಲ್ಲಿ: ಈಗಾಗಲೇ ಜಾರಿಯಲ್ಲಿರುವ ಲಾಕ್ ಡೌನ್ ನ್ನು ಮೇ 3ರ ತನಕ ವಿಸ್ತರಿಸಲಾಗುವುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ. ದೇಶವನ್ನುದ್ದೇಶಿಸಿ ಮಂಗಳವಾರ ಮಾತಾನಾಡಿದ ಅವರು ಲಾಕ್ ಡೌನ್ ವಿಸ್ತರಣೆಯಾಗಿರುವ ಅವಧಿಯಲ್ಲಿ ಜನರು ಏನೆಲ್ಲಾ ಮಾಡಬೇಕು ಮತ್ತು ಏನೆಲ್ಲಾ ಮಾಡಬಾರದು ಎಂಬ ವಿಷಯಗಳ ಬಗ್ಗೆ ಸರಕಾರ ಬುಧವಾರ ವಿವರವಾದ ಮಾರ್ಗಸೂಚಿಯನ್ನು ಹೊರಡಿಸಲಿದೆ ಎಂದರು.

ಭಾರತದಲ್ಲಿ ಕೊರೋನ ವೈರಸ್ ಸೋಂಕು ಹರಡುವುದನ್ನು ತಡೆಯಲು ಪ್ರಧಾನಿ ಮೋದಿಯವರು ಇದೇ ಸಂದರ್ಭದಲ್ಲಿ  ಏಳು ಸೂಚನೆಗಳು ಮತ್ತು  ಮುನ್ನೆಚ್ಚರಿಕೆಗಳನ್ನು ಒಳಗೊಂಡ ಪಟ್ಟಿಯನ್ನು ದೇಶದ ಜನತೆಯ ಮುಂದಿಟ್ಟಿದ್ದಾರೆ. ವಿವರ ಇಂತಿವೆ:

►ಮನೆಯಲ್ಲಿ ಹಿರಿಯ ನಾಗರಿಕರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ

ವಯಸ್ಸಾದ ಕುಟುಂಬ ಸದಸ್ಯರನ್ನು, ವಿಶೇಷವಾಗಿ ಅನಾರೋಗ್ಯದಿಂದ ಬಳಲುತ್ತಿರುವ ಅಥವಾ ಯಾವುದೇ ಕಾಯಿಲೆಯಿಂದ ಬಳಲುತ್ತಿರುವವರನ್ನು ನೋಡಿಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ  ಮನವಿ ಮಾಡಿದ್ದಾರೆ. ಹೆಚ್ಚಿನ ವಯೋಮಾನದವರಲ್ಲಿ ಪ್ರಕರಣಗಳು ಕಂಡುಬಂದರೂ, ವಯಸ್ಸಾದವರು ಕೋವಿಡ್ -19 ಸೋಂಕಿನಿಂದ ಹೆಚ್ಚಿನ ಅಪಾಯವನ್ನು ಎದುರಿಸುತ್ತಾರೆ ಎಂದು ತಜ್ಞರು ಹೇಳಿದ್ದಾರೆ.

►ಲಾಕ್‌ಡೌನ್ ಮತ್ತು ಸಾಮಾಜಿಕ ಅಂತರವನ್ನು ಅನುಸರಿಸಿ, ಮನೆಯಲ್ಲಿ ತಯಾರಿಸಿದ ಮಾಸ್ಕ್ ಗಳನ್ನು ಧರಿಸಿ.

ಲಾಕ್ ಡೌನ್ ಸಮಯದಲ್ಲಿ ಸಾಮಾಜಿಕ  ಅಂತರವನ್ನು ಕಾಯ್ದುಕೊಳ್ಳುವುದನ್ನು ಕಟ್ಟುನಿಟ್ಟಾಗಿ ಕಾಪಾಡುವುದು ಪ್ರಧಾನ ಮಂತ್ರಿ ನಾಗರಿಕರನ್ನು ಕೇಂದ್ರೀಕರಿಸಲು ಹೇಳಿದ ಇನ್ನೊಂದು ಅಂಶ. ತಮ್ಮ ಮನೆಗಳಿಂದ ಹೊರಗೆ ಹೋಗಬೇಕಾದ ನಾಗರಿಕರು ಸಾಮಾಜಿಕ  ಅಂತರ ಮತ್ತು ಮಾಸ್ಕ್  ಧರಿಸುವುದನ್ನು ದೃಢಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.

►ಆಯುಷ್ ಸಚಿವಾಲಯ ನೀಡಿದ ನಿರ್ದೇಶನಗಳನ್ನು ಅನುಸರಿಸಿ, ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ.

ಕೋವಿಡ್ -19 ಅನ್ನು ನಿಭಾಯಿಸಲು ಜನರಿಗೆ ಸಹಾಯ ಮಾಡುವ ಕಾರಣ ಆಯುಷ್ ಸಚಿವಾಲಯದ ವೆಬ್‌ಸೈಟ್‌ನಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು, ಸದೃಢವಾಗಿರಲು ಏನು ಮಾಡಬೇಕೆಂಬುದರ ಬಗ್ಗೆ ಇರುವ  ಸಲಹೆಗಳನ್ನು ಪಾಲಿಸುವಂತೆ ಪಿಎಂ ಮೋದಿ ನಾಗರಿಕರಿಗೆ ಸಲಹೆ ನೀಡಿದರು. ಆಯುರ್ವೇದದ ಮೂಲಕ ಆಹಾರ ಪದ್ಧತಿ, ಪೋಷಣೆ ಮತ್ತು ವಿನಾಯಿತಿ ಕುರಿತು ಆನ್‌ಲೈನ್ ಕೋರ್ಸ್‌ಗಳನ್ನು ಘೋಷಿಸುವುದಾಗಿ ಆಯುಷ್ ಸಚಿವಾಲಯ ಟ್ವಿಟರ್‌ನಲ್ಲಿ ಪ್ರಕಟಿಸಿದೆ.

►ಆರೋಗ್ಯ ಸೇತು ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ

ವ್ಯಕ್ತಿಗಳ ಸ್ಥಳ ದತ್ತಾಂಶವನ್ನು ಬಳಸುವ ಮತ್ತು ಸಂಪರ್ಕ ಪತ್ತೆಹಚ್ಚಲು ಸಹಾಯ ಮಾಡುವ ಆರೋಗ್ಯ  ಸೇತು ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ನಾಗರಿಕರನ್ನು ವಿನಂತಿಸಿದರು. ಇದನ್ನು ಡೌನ್‌ಲೋಡ್ ಮಾಡುವಂತೆ ಸರ್ಕಾರವು ವ್ಯಕ್ತಿಗಳನ್ನು ಒತ್ತಾಯಿಸುತ್ತಿದೆ ಏಕೆಂದರೆ ಇದು ಪರಿಸ್ಥಿತಿಯನ್ನು ಉತ್ತಮವಾಗಿ ಮೇಲ್ವಿಚಾರಣೆ ಮಾಡಲು ಸಹಾಯ ಮಾಡುತ್ತದೆ ಪ್ರಧಾನಿ ಮೋದಿ ಹೇಳಿದರು.

►ಸಾಧ್ಯವಾದಷ್ಟು ಅಗತ್ಯವಿರುವವರಿಗೆ ಸಹಾಯ ಮಾಡಿ

ಕೋವಿಡ್ -19 ಬಿಕ್ಕಟ್ಟಿನಿಂದ ತೀವ್ರ ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿರುವ ಬಡ ಮತ್ತು ನಿರ್ಗತಿಕರಿಗೆ ಸಹಾಯ ಮಾಡುವಂತೆ ಪ್ರಧಾನಿ ನಾಗರಿಕರಿಗೆ ಕರೆ ನೀಡಿದರು. ಸರ್ಕಾರವು ತನ್ನ ಯೋಜನೆಗಳ ಮೂಲಕ ಬಡವರಿಗೆ ಸಹಕರಿಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರೆ, ಈ ಕಠಿಣ ಸಮಯದಲ್ಲಿ ಬಡವರಿಗೆ ಸಹಾಯ ಮಾಡಲು ಜನರು ಏನು ಬೇಕಾದರೂ ಕೊಡುಗೆ ನೀಡುವಂತೆ ಕೇಳಿಕೊಂಡರು.

►ನಿಮ್ಮ ವ್ಯವಹಾರಗಳಲ್ಲಿ ನಿಮ್ಮ ಸಹೋದ್ಯೋಗಿಗಳಿಗೆ ಸಹಾಯ ಮಾಡಿ, ನೌಕರರನ್ನು ಕೆಲಸದಿಂದ ತೆಗದುಹಾಕಬೇಡಿ.

ಕಾರ್ಪೊರೇಟ್‌ಗಳು ಮತ್ತು  ಉದ್ಯಮಿಗಳಿಗೆ  ಮೋದಿ  ಮಾಡಿರುವ  ದೊಡ್ಡ ಮನವಿಯಾಗಿದ್ದು, ರಾಷ್ಟ್ರವ್ಯಾಪಿ ಲಾಕ್‌ಡೌನ್ ಸಮಯದಲ್ಲಿ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲು ಅಥವಾ ಅವುಗಳನ್ನು ಮಿತಿಗೊಳಿಸಲು ಒತ್ತಾಯಿಸಲಾಗಿದೆ. ನೌಕರರ ವಜಾ, ವೇತನ  ಕಡಿತ  ಇವುಗಳನ್ನು  ಗಮನದಲ್ಲಿಟ್ಟುಕೊಂಡು, ಪ್ರಧಾನಿ ಮೋದಿ ಅವರು ದೇಶಾದ್ಯಂತದ ಉದ್ಯೋಗದಾತರಿಗೆ ನೌಕರರ ಬಗ್ಗೆ ಸಹಾನುಭೂತಿ ತೋರಿಸಬೇಕು ಮತ್ತು ಅವರನ್ನು ತಮ್ಮ ಉದ್ಯೋಗದಿಂದ ತೆಗೆದುಹಾಕದಂತೆ ವಿನಂತಿಸಿದರು.

►ವೈದ್ಯರು, ದಾದಿಯರು ಮತ್ತು ಕೋವಿಡ್ -19 ವಿರುದ್ಧ ಹೋರಾಡುವ ಎಲ್ಲರನ್ನೂ ಗೌರವಿಸಿ

ದೇಶದಲ್ಲಿ ಕೊರೋನ ವೈರಸ್ ಸೋಂಕು ತಡೆಯಲು ಮುಂಚೂಣಿಯ ಹೋರಾಡುತ್ತಿರುವ ಎಲ್ಲರಿಗೂ  ಗೌರವ ನೀಡಬೇಕೆಂದು ಪಿಎಂ ಮೋದಿ ನಾಗರಿಕರನ್ನು ಕೋರಿದರು. ದೇಶಾದ್ಯಂತ ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯರ ವಿರುದ್ಧ ಪದೇ ಪದೇ ಹಲ್ಲೆ ನಡೆಸಿದ ಘಟನೆಗಳ  ಬಗ್ಗೆ ಪ್ರಧಾನಿ ಮೋದಿ ಕಳವಳ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X