Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಣ್ಣು- ತರಕಾರಿಗೆ ಬೆಂಬಲ ಬೆಲೆ ನೀಡಲು...

ಹಣ್ಣು- ತರಕಾರಿಗೆ ಬೆಂಬಲ ಬೆಲೆ ನೀಡಲು ಪರಿಶೀಲನೆ: ಕೃಷಿ ಸಚಿವ ಬಿ.ಸಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ14 April 2020 2:57 PM IST
share
ಹಣ್ಣು- ತರಕಾರಿಗೆ ಬೆಂಬಲ ಬೆಲೆ ನೀಡಲು ಪರಿಶೀಲನೆ: ಕೃಷಿ ಸಚಿವ ಬಿ.ಸಿ.ಪಾಟೀಲ್

ಚಿಕ್ಕಬಳ್ಳಾಪುರ, ಎ.14: ಹಣ್ಣು - ತರಕಾರಿಗಳಿಗೆ ಬೆಂಬಲ ಬೆಲೆ ನೀಡುವ ಮನವಿಯನ್ನು ಪರಿಶೀಲಿಸುವುದಾಗಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಭರವಸೆ ನೀಡಿದ್ದಾರೆ.

ಮಂಗಳವಾರ ಜಿಲ್ಲಾ ಕೃಷಿ ಚಟುವಟಿಕೆ ಪ್ರಗತಿ ಪರಿಶೀಲನೆ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ಲಾಕ್ ಡೌನ್ ಕಾರಣದಿಂದ ಸಾಮಾನ್ಯ ಪರಿಸ್ಥಿತಿ ಮಾರುಕಟ್ಟೆಯಿಲ್ಲದೇ ಹಣ್ಣು - ತರಕಾರಿಗಳು ಕೊಳೆತು ಹೋಗುತ್ತಿವೆ. ಇವುಗಳಿಗೂ ಬೆಂಬಲ ಬೆಲೆ ನೀಡಿದರೆ ಸಹಾಯಕವಾಗುವುದೆಂದು ಕೃಷಿಕರು ಅಹವಾಲು ಸಲ್ಲಿಸಿದ್ದಾರೆ. ಇದರ ಬಗ್ಗೆ ಪರಿಶೀಲಿಸುವುದಾಗಿ ಅವರು ತಿಳಿಸಿದರು.

ಜಿಲ್ಲೆಯಲ್ಲಿ ಕೃಷಿಕರ ನೆರವಿಗೆ ಬರುವುದಕ್ಕೆ ಕೃಷಿ ಇಲಾಖೆ ಸಿಬ್ಬಂದಿ ಕೊರತೆ ಇದೆ ಎಂಬುದನ್ನು ಸಹ ಕೃಷಿಕರು ಹೇಳಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆ ನೀಡಿದ ಸಚಿವರು, ಬಿತ್ತನೆಬೀಜ- ಗೊಬ್ಬರ ಕಾಳಸಂತೆಯಲ್ಲಿ ಮಾರಾಟವಾಗುವುದು ಕಂಡು ಬಂದರೆ, ಮಧ್ಯವರ್ತಿಗಳಿಂದ ರೈತರಿಗೆ ತೊಂದರೆಯಾದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ರಾಜ್ಯಾದ್ಯಂತ ಕಾಳಸಂತೆ ಮೇಲೆ ಕಣ್ಣಿಡಲು ಜಾಗ್ರತ ದಳವನ್ನು ಸಜ್ಜುಗೊಳಿಸಲಾಗಿದೆ. ಅವರು ಮುಲಾಜಿಲ್ಲದೇ ಕ್ರಮ ಜರುಗಿಸುತ್ತಾರೆ ಎಂದು ಹೇಳಿದರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಬೇಕಾದ ಬಿತ್ತನೆ ಬೀಜಗಳು, ರಸಗೊಬ್ಬರಗಳ ದಾಸ್ತಾನು ಸಾಕಷ್ಟಿದೆ. ಕೃಷಿಕರು ಅನವಶ್ಯಕವಾಗಿ ವದಂತಿಗಳಿಗೆ ಕಿವಿಗೊಡಬೇಡಿ ಎಂದವರು ಹೇಳಿದರು.

ಹಣ್ಣು - ತರಕಾರಿ ಇನ್ನಿತರ ಬೆಳೆಗಳಿಗೆ ಸಿಂಪಡಿಸುವ ಅಗತ್ಯ ಔಷಧ - ಕೀಟನಾಶಕಗಳಲ್ಲಿ ಕಳಪೆ ದರ್ಜೆಯವುಗಳ ಬಗ್ಗೆ ದೂರುಗಳು ಬಂದಿವೆ. ಇಂಥವುಗಳನ್ನು ಇಲಾಖೆ ಕೂಡಲೇ ಪತ್ತೆಹಚ್ಚಿ ಕ್ರಮ ಕೈಗೊಳ್ಳುತ್ತದೆ ಎಂದವರು ತಿಳಿಸಿದರು.

ಕೊರೋನ ಕಾರಣದಿಂದ ಇಡೀ ಜಗತ್ತೇ ಸಂಕಷ್ಟದಲ್ಲಿದೆ. ಇಂಥ ಸಮಯದಲ್ಲಿ ಯಾರೂ ರಾಜಕೀಯ ಪ್ರೇರಿತ ಟೀಕೆಗಳನ್ನು ಮಾಡಬಾರದು. ಎಲ್ಲರೂ ಒಗ್ಗಟ್ಟಿನಿಂದ ಇಂಥ ಕಠಿಣ ಪರಿಸ್ಥಿತಿ ಎದುರಿಸಬೇಕು ಎಂದು ವಿರೋಧಪಕ್ಷಗಳ ಟೀಕಾಕಾರರಿಗೆ ಕಿವಿಮಾತು ಹೇಳಿದರು.

 ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಹಾಗೂ  ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ಬಾಗೇಪಲ್ಲಿ ಶಾಸಕರಾದ ಸುಬ್ಬಾರೆಡ್ಡಿ, ಕೃಷ್ಣಾರೆಡ್ಡಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X