ರಾಜ್ಯದಲ್ಲಿ ಕೊರೋನ ಸೋಂಕಿಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ ಹತ್ತಕ್ಕೆ ಏರಿಕೆ
ಇಂದು 13 ವರದಿಗಳು ಪಾಸಿಟಿವ್

ಸಾಂದರ್ಭಿಕ ಚಿತ್ರ
ಬೆಂಗಳೂರು, ಎ.14: ರಾಜ್ಯದಲ್ಲಿ ನಿನ್ನೆಯಿಂದ ಕೊರೋನ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗುವ ಮೂಲಕ ಒಟ್ಟಾರೆ ರಾಜ್ಯದಲ್ಲಿ ಕೊರೋನದಿಂದ ಸಾವನ್ನಪ್ಪಿದವರ ಸಂಖ್ಯೆ ಹತ್ತಕ್ಕೆ ಏರಿದೆ. ಇದು ರಾಜ್ಯದ ಜನತೆಯಲ್ಲಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವ್ಯಕ್ತಿಯೊಬ್ಬರು ಇಂದು ಮೃತಪಟ್ಟಿದ್ದಾರೆ. ಇದಕ್ಕೂ ಮೊದಲು ನಿನ್ನೆ ರಾತ್ರಿಯಿಂದ ಕಲಬುರಗಿ, ಬೆಂಗಳೂರು ಹಾಗೂ ವಿಜಯಪುರದಲ್ಲಿ ಸಾವಿನ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ ಇಂದು 10 ವರ್ಷದ ಬಾಲಕಿಯೊಬ್ಬಳ ಸಹಿತ ಒಟ್ಟಾರೆ 13 ಹೊಸ ಪ್ರಕರಣಗಳು ಪಾಸಿಟಿವ್ ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 260ಕ್ಕೆ ಏರಿಕೆಯಾಗಿದೆ. 71 ಮಂದಿ ಇದುವರೆಗೆ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
Next Story





