ಕೊರೋನ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಸಾವು: 11ಕ್ಕೆ ಏರಿದ ಮೃತರ ಸಂಖ್ಯೆ

ಸಾಂದರ್ಭಿಕ ಚಿತ್ರ
ಬೆಂಗಳೂರು, ಎ.15: ಕೊರೋನ ಸೋಂಕಿನಿಂದ ರಾಜ್ಯದಲ್ಲಿ ಮತ್ತೊಂದು ಸಾವು ಸಂಭವಿಸಿದ್ದು, ಚಿಕ್ಕಬಳ್ಳಾಪುರದ ವ್ಯಕ್ತಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇದು ಸೋಮವಾರ ಸಂಜೆಯ ಬಳಿಕ ಕೊರೋನದಿಂದ ರಾಜ್ಯದಲ್ಲಿ ಸಂಭವಿಸಿದ ಐದನೇ ಸಾವು.
ಕೊರೋನ ಸೋಂಕಿನಿಂದ ಬಳಲುತ್ತಿದ್ದ ಚಿಕ್ಕಬಳ್ಳಾಪುರದ 69 ವರ್ಷದ ವ್ಯಕ್ತಿ ಇಂದು ಮೃತಪಟ್ಟಿದ್ದು, ಈ ಬಗ್ಗೆ ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮೂಲಕ ತಿಳಿಸಿದ್ದಾರೆ. "ಚಿಕ್ಕಬಳ್ಳಾಪುರದ 69 ವರ್ಷದ ವ್ಯಕ್ತಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ. ಪಾರ್ಥಿವ ಶರೀರವನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಡಲಾಗಿದ್ದು, ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಅಂತ್ಯಕ್ರಿಯೆಗೆ ಇಲಾಖೆಯು ಸಿದ್ಧತೆ ನಡೆಸುತ್ತಿದೆ. ದಯಮಾಡಿ ಸಾರ್ವಜನಿಕರು ಮನೆಯಲ್ಲೇ ಸುರಕ್ಷಿತವಾಗಿರಬೇಕು ಎಂದು ವಿನಂತಿಸುತ್ತೇನೆ" ಎಂದು ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಸೋಮವಾರ ರಾತ್ರಿ ಕಲಬುರಗಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ಬಳಿಕ ವಿಜಯಪುರದಲ್ಲಿ ಒಂದು ಹಾಗೂ ಬೆಂಗಳೂರಿನಲ್ಲಿ ಎರಡು ಸಾವು ಸಂಭವಿಸಿತ್ತು. ಒಟ್ಟಾರೆ ರಾಜ್ಯದಲ್ಲಿ ಕೊರೋನದಿಂದ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿದೆ
ಚಿಕ್ಕಬಳ್ಳಾಪುರದ 69 ವರ್ಷದ ವ್ಯಕ್ತಿಯೊಬ್ಬರು #COVID19 ಸೋಂಕಿನಿಂದ ಮೃತಪಟ್ಟಿದ್ದಾರೆ. ಪಾರ್ಥಿವ ಶರೀರವನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಡಲಾಗಿದ್ದು, ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಅಂತ್ಯಕ್ರಿಯೆಗೆ ಇಲಾಖೆಯು ಸಿದ್ಧತೆ ನಡೆಸುತ್ತಿದೆ. ದಯಮಾಡಿ ಸಾರ್ವಜನಿಕರು ಮನೆಯಲ್ಲೇ ಸುರಕ್ಷಿತವಾಗಿರಬೇಕು ಎಂದು ವಿನಂತಿಸುತ್ತೇನೆ
— B Sriramulu (@sriramulubjp) April 15, 2020







