1 ವರ್ಷದ ಮಗುವಿನ ಸಹಿತ ಮತ್ತೆ 17 ಮಂದಿಗೆ ಕೊರೋನ ಸೋಂಕು
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 277ಕ್ಕೆ ಏರಿಕೆ

ಸಾಂದರ್ಭಿಕ ಚಿತ್ರ
ಬೆಂಗಳೂರು, ಎ.15: ರಾಜ್ಯದಲ್ಲಿ 1 ವರ್ಷದ ಮಗುವಿನ ಸಹಿತ ಮತ್ತೆ 17 ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಮಧ್ಯಾಹ್ನ ಬಿಡುಗಡೆಗೊಳಿಸಿರುವ ಆರೋಗ್ಯ ಬುಲೆಟಿನ್ ನಲ್ಲಿ ಮಂಗಳವಾರ ಸಂಜೆ 5ರಿಂದ ಇಂದು ಮಧ್ಯಾಹ್ನ 12 ಗಂಟೆಯೊಳಗೆ 17 ಹೊಸ ಪ್ರಕರಣಗಳು ವರದಿಯಾಗಿರುವುದಾಗಿ ತಿಳಿಸಲಾಗಿದೆ.
ಈ ಪೈಕಿ ಇಂದು ಬೆಳಗ್ಗೆ ಬೆಂಗಳೂರು ನಗರದ ಆಸ್ಪತ್ರೆಯಲ್ಲಿ ಚಿಕ್ಕಬಳ್ಳಾಪುರದ 65 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 277ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರಲ್ಲಿ 75 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರೆ, 11 ಮಂದಿ ಮೃತಪಟ್ಟಿದ್ದಾರೆ.
Next Story





