ಎ.20ರವರೆಗೆ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ

ಬೆಂಗಳೂರು, ಎ.15: ಕೊರೋನ ವೈರಸ್ ಸೋಂಕು ತಡೆಗಟ್ಟಲು ಹೇರಿರುವ ಲಾಕ್‍ಡೌನ್ ಅವಧಿ ವಿಸ್ತರಣೆ ಹಿನ್ನೆಲೆಯಲ್ಲಿ ಎ.20ರ ಮಧ್ಯರಾತ್ರಿ ವರೆಗೆ ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ನಿಷೇಧ ಹೇರಿ ಅಬಕಾರಿ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗುತ್ತಿದೆ ಎಂಬ ಮದ್ಯಪ್ರಿಯರ ನಿರೀಕ್ಷೆ ಹುಸಿಯಾಗಿದ್ದು, ಎ.20ರ ಬಳಿಕ ಪರಿಸ್ಥಿತಿ ಅವಲೋಕಿಸಿ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಬೇಕೇ? ಅಥವಾ ಬೇಡವೇ? ಎಂಬ ಬಗ್ಗೆ ರಾಜ್ಯ ಸರಕಾರ ಮುಂದಿನ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ.
ಆಲ್ಕೊಹಾಲ್ ಆಧರಿತ ಸ್ಯಾನಿಟೈಸರ್ ಉತ್ಪಾದಿಸುವ ಡಿಸ್ಟಿಲರಿಗಳ ಹೊರತಾಗಿ ಯಾವುದೇ ಉತ್ಪಾದನಾ ಘಟಕಗಳು ಕಾರ್ಯ ನಿರ್ವಹಿಸುವಂತಿಲ್ಲ. ಈ ಆದೇಶವನ್ನು ಉಲ್ಲಂಘಿಸಿದರೆ ಅಂತಹವರ 'ಸನ್ನದ್ದು'ಗಳನ್ನು ರದ್ದುಪಡಿಸಲು ಕ್ರಮ ಜರುಗಿಸಲಾಗಿವುದು. ಈ ವಿಚಾರದಲ್ಲಿ ಯಾವುದೇ ಲೋಪ ಕಂಡುಬಂದಲ್ಲಿ ತಮ್ಮ ವ್ಯಾಪ್ತಿಯ ಅಬಕಾರಿ ಉಪ ಆಯುಕ್ತರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಆದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ
Next Story





