ಲಾಕ್‌ಡೌನ್ ಉಲ್ಲಂಘನೆ: 106 ವಾಹನಗಳು ಮುಟ್ಟುಗೋಲು
ಮಂಗಳೂರು, ಎ.15: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಲಾಕ್‌ಡೌನ್ ಉಲ್ಲಂಘನೆ ಮಾಡಿ ಸಂಚರಿಸುತ್ತಿದ್ದ 106 ವಾಹನಗಳನ್ನು ಮಂಗಳೂರು ನಗರ ಪೊಲೀಸರು ಬುಧವಾರ ಮುಟ್ಟುಗೋಲು ಹಾಕಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಲಾಕ್‌ಡೌನ್ ಹಿನ್ನೆಲೆಯಲ್ಲಿ ಬಿಗು ತಪಾಸಣೆ ನಡೆಸಲಾಗುತ್ತಿದ್ದು, ನಿಯಮ ಉಲ್ಲಂಘನೆ ಮಾಡಿದ ದ್ವಿಚಕ್ರ ವಾಹನ, ಕಾರು, ಆಟೋರಿಕ್ಷಾ ಸೇರಿದಂತೆ ಒಟ್ಟು 106 ವಾಹನಗಳ ಮೇಲೆ ಕೇಸು ದಾಖಲಿಸಲಾಗಿದೆ. ಇದರಲ್ಲಿ ಸಂಚಾರ ಪೊಲೀಸರು 57 ಮತ್ತು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸರು 49 ವಾಹನಗಳನ್ನು ವಶಪಡಿಸಿದ್ದಾರೆ.
Next Story





