Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಜನರ ಚೆಲ್ಲಾಟ, ಪೌರ ಕಾರ್ಮಿಕರಿಗೆ ಪ್ರಾಣ...

ಜನರ ಚೆಲ್ಲಾಟ, ಪೌರ ಕಾರ್ಮಿಕರಿಗೆ ಪ್ರಾಣ ಸಂಕಟ!

ಮಾಸ್ಕ್ ಬಳಕೆ ಮತ್ತು ವಿಲೇವಾರಿ ಸಮಸ್ಯೆ

ಸಮೀರ್ ದಳಸನೂರುಸಮೀರ್ ದಳಸನೂರು16 April 2020 11:18 AM IST
share
ಜನರ ಚೆಲ್ಲಾಟ, ಪೌರ ಕಾರ್ಮಿಕರಿಗೆ ಪ್ರಾಣ ಸಂಕಟ!

ಬೆಂಗಳೂರು, ಎ.15: ಕೊರೋನ ಸೋಂಕು ಹರಡುವ ಭೀತಿಯಿಂದಾಗಿ ಪ್ರತಿನಿತ್ಯ ಮುಖಕ್ಕೆ ಮಾಸ್ಕ್ ಬಳಸುವರರ ಸಂಖ್ಯೆ ಏರುತ್ತಲೇ ಇದೆ. ಆದರೆ, ಮಾಸ್ಕ್ ಬಳಸಿ ಬಿಸಾಡುವ ವಿಚಾರದಲ್ಲಿ ಜನರ ಬೇಜವಾಬ್ದಾರಿಯಿಂದ ಪೌರ ಕಾರ್ಮಿಕರ ಜೀವಕ್ಕೆ ಕುತ್ತು ಉಂಟಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ನಗರ ಪ್ರದೇಶದ ನಿವಾಸಿಗಳು, ಬಳಕೆ ಮಾಡಿದ ಮಾಸ್ಕ್‌ಗಳನ್ನು ಬೇಜವಾಬ್ದಾರಿಯಿಂದ ಕಸದ ಬುಟ್ಟಿಗೆ ಎಸೆಯುತ್ತಿರುವ ಕಾರಣದಿಂದಾಗಿ, ಇದನ್ನು ವಿಲೇವಾರಿ ಮಾಡಲು ಬರುವ ಪೌರ ಕಾರ್ಮಿಕರಲ್ಲಿ ಆತಂಕ ಮನೆ ಮಾಡಿದ್ದು, ಕೊರೋನ ಸೋಂಕು ಹರಡುವ ಭೀತಿ ಉಂಟಾಗಿದೆ.

ದಿನದಿಂದ ದಿನಕ್ಕೆ ನಗರದಲ್ಲಿ ಕೊರೋನ ಭೀತಿ ಹೆಚ್ಚಾಗುತ್ತಿದ್ದು, ಆತಂಕಕ್ಕೆ ಒಳಗಾಗಿರುವ ಸಾರ್ವಜನಿಕರಲ್ಲಿ ಮಾಸ್ಕ್, ಗ್ಲೌಸ್ ಹಾಗೂ ಸ್ಯಾನಿಟೈಸರ್ ಬಳಕೆ ಪ್ರಮಾಣ ಹೆಚ್ಚಾಗುತ್ತಿದೆ. ಆದರೆ, ಬಳಕೆ ಮಾಡಿದ ಮಾಸ್ಕ್ ಮತ್ತು ಹ್ಯಾಂಡ್ ಗ್ಲೌಸ್ ಅನ್ನು ಸಾರ್ವಜನಿಕರು ಕಸದಲ್ಲಿ ಮಿಶ್ರಣ ಮಾಡಿ ನೀಡುತ್ತಾರೆ. ಇವುಗಳನ್ನು ಸೋಂಕಿತರು ಅಥವಾ ಶಂಕಿತರು ಬಳಸಿದ್ದರೆ, ಅದರಿಂದ ನಮಗೂ ಸೋಂಕು ತಗಲುವ ಭೀತಿ ಇದೆ ಎಂದು ಬಿಬಿಎಂಪಿ ಪೌರಕಾರ್ಮಿಕ ರಮೇಶ್ ಸೊಣಪ್ಪ ನುಡಿದರು.

1 ಲಕ್ಷ ಮಾಸ್ಕ್‌: ರಾಜಧಾನಿ ಬೆಂಗಳೂರಿನಲ್ಲಿಯೇ ಒಂದು ಲಕ್ಷಕ್ಕೂ ಅಧಿಕ ಮಾಸ್ಕ್‌ಗಳು ಬಳಕೆಯಾಗಿ ಕಸದ ಬುಟ್ಟಿಗೆ ಸೇರಿವೆ. ಮಾಸ್ಕ್ ವೈದ್ಯಕೀಯ ತ್ಯಾಜ್ಯಕ್ಕೆ ಸೇರಬೇಕಾದ ವಸ್ತು. ಇದನ್ನು ಸೂಕ್ತ ರೀತಿಯಲ್ಲಿ ಬೇರ್ಪಡಿಸಿ ನೀಡುತ್ತಿಲ್ಲ. ಸಾಮಾನ್ಯ ಒಣಕಸದ ರೀತಿಯಲ್ಲಿಯೇ ಕಸಕ್ಕೆ ಸುರಿಯುತ್ತಾರೆ. ಕೆಲವೊಮ್ಮೆ ಬೀದಿ ಬದಿಯ ರಸ್ತೆಗಳಲ್ಲಿಯೂ ಮಾಸ್ಕ್‌ಗಳು ಪತ್ತೆಯಾಗಿದ್ದು, ಈ ಬಗ್ಗೆ ಬಿಬಿಎಂಪಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎನ್ನುವುದು ಪೌರಕಾರ್ಮಿಕರ ಒತ್ತಾಯ.

ರೋಗ ಹರಡಲಿದೆ: ಯಾವುದೇ ಒಂದು ಬಟ್ಟೆ ಅಥವಾ ಮಾಸ್ಕ್ ಅನ್ನು ಸತತ ಆರೇಳು ಗಂಟೆಗಳ ಕಾಲ ಮುಖದ ಬಳಿ ಬಳಕೆ ಮಾಡಿದರೆ, ಅದರಲ್ಲಿ ಬ್ಯಾಕ್ಟೀರಿಯಾಗಳು ಅಂಟಿಕೊಂಡು ಜೀವಂತವಾಗಿರುತ್ತದೆ. ಇದನ್ನು ಮತ್ತೊಬ್ಬರು ಮುಟ್ಟಿದರೆ, ಬಹುಬೇಗ ರೋಗದ ಸೋಂಕು ಹರಡಲಿದೆ ಎಂದು ಹಿರಿಯ ವೈದ್ಯ ಡಾ.ಶಂಕರ್ ಮಹಾದೇವ ಅಭಿಪ್ರಾಯಟ್ಟರು.

ಯಾವುದೇ ಕಾರಣಕ್ಕೂ ಮಾಸ್ಕ್ ಹಾಗೂ ಗ್ಲೌಸ್ ಸೇರಿದಂತೆ ವೈದ್ಯಕೀಯ ತ್ಯಾಜ್ಯಗಳನ್ನು ನೇರವಾಗಿ ನೀಡಿದರೆ ತೆಗೆದುಕೊಳ್ಳಬೇಡಿ ಎಂದು ಪೌರಕಾರ್ಮಿಕರಿಗೆ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಈ ರೀತಿ ಬೇಜವಾಬ್ದಾರಿತನದಿಂದ ವರ್ತಿಸಬಾರದು. ಈ ರೀತಿ ಮಾಡುವುದರಿಂದ ಪೌರಕಾರ್ಮಿಕರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ, ಮಾಸ್ಕ್, ಗ್ಲೌಸ್‌ಗಳನ್ನು ಪೇಪರ್‌ನಲ್ಲಿ ಸುತ್ತಿ ನೀಡಿದರೆ ಮಾತ್ರ ಸ್ವೀಕರಿಸುವಂತೆ ಸೂಚನೆ ನೀಡಲಾಗಿದೆ.

-ರಂದೀಪ್, ಬಿಬಿಎಂಪಿ ವಿಶೇಷ ಆಯುಕ್ತ (ಘನತ್ಯಾಜ್ಯ ನಿರ್ವಹಣೆ)

ಮನೆ ಮಾಸ್ಕ್ ಬಳಸಿ

 ಬಹುತೇಕರು ಸರ್ಜಿಕಲ್ ಮಾಸ್ಕ್ ಬಳಕೆ ಮಾಡುತ್ತಿರುವುದು ಸರಿಯಲ್ಲ. ಆರೋಗ್ಯ ಸಿಬ್ಬಂದಿ ಹೊರತುಪಡಿಸಿ, ಇತರರು ಸರ್ಜಿಕಲ್ ಮಾಸ್ಕ್ ಬಳಸಬೇಡಿ. ಎಲ್ಲರೂ ಸರ್ಜಿಕಲ್ ಮಾಸ್ಕ್ ಬಳಸುವುದರಿಂದ ವೈದ್ಯಕೀಯ ವೃತ್ತಿಯಲ್ಲಿರುವವರಿಗೆ ಕೊರತೆಯಾಗುತ್ತದೆ. ಸಾಮಾನ್ಯ ನಾಗರಿಕರು ಬಟ್ಟೆ ಮೂಲಕ ಮನೆಯಲ್ಲಿಯೇ ತಯಾರಿಸಿದ ಮಾಸ್ಕ್ ಬಳಕೆ ಮಾಡಿ. ಜತೆಗೆ, ಹೊರಗಡೆ ಎಸೆಯುವಾಗ ಜಾಗೃತಿ ವಹಿಸಿ.

-ಡಾ.ದೇವಿ ಪ್ರಸಾದ್ ಶೆಟ್ಟಿ, ಚೇರ್ಮನ್ ನಾರಾಯಣ ಹೆಲ್ತ್

ಪೇಪರ್‌ನಲ್ಲಿ ಸುತ್ತಿ ಪ್ರತ್ಯೇಕವಾಗಿ ನೀಡಿ

ಬಳಸಿದ ಮಾಸ್ಕ್, ಹ್ಯಾಂಡ್ ಗ್ಲೌಸ್, ಟಿಶುಪೇಪರ್, ವೈದ್ಯಕೀಯ ಚಿಕಿತ್ಸೆಗೆ ಬಳಕೆ ಮಾಡಿದ ಹತ್ತಿ, ಬ್ಯಾಂಡೇಜ್ ಅನ್ನು ಒಂದು ಕಾಗದದ ಕವರ್ ಅಥವಾ ಪೇಪರ್‌ನಲ್ಲಿ ಸುತ್ತಿ ಪ್ರತ್ಯೇಕವಾಗಿ ಪೌರಕಾರ್ಮಿಕರಿಗೆ ನೀಡಬೇಕು. ಹಸಿ ಮತ್ತು ಒಣ ತ್ಯಾಜ್ಯದೊಂದಿಗೆ ಮಿಶ್ರಣ ಮಾಡಿ ನೀಡಬಾರದು.

-ಮನ್ಸೂರ್ ಅಹ್ಮದ್, ಒಣತ್ಯಾಜ್ಯ ಸಂಗ್ರಹಕಾರ

share
ಸಮೀರ್ ದಳಸನೂರು
ಸಮೀರ್ ದಳಸನೂರು
Next Story
X