Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 98 ವಸತಿ ಶಾಲೆ, ವಸತಿ ನಿಲಯಗಳಲ್ಲಿ 784...

98 ವಸತಿ ಶಾಲೆ, ವಸತಿ ನಿಲಯಗಳಲ್ಲಿ 784 ಮಂದಿ ಕ್ವಾರಂಟೈನ್ ನಲ್ಲಿ: ಡಿಸಿಎಂ ಕಾರಜೋಳ

ವಾರ್ತಾಭಾರತಿವಾರ್ತಾಭಾರತಿ16 April 2020 1:14 PM IST
share
98 ವಸತಿ ಶಾಲೆ, ವಸತಿ ನಿಲಯಗಳಲ್ಲಿ 784 ಮಂದಿ ಕ್ವಾರಂಟೈನ್ ನಲ್ಲಿ: ಡಿಸಿಎಂ ಕಾರಜೋಳ

ಬೆಂಗಳೂರು. ಎ.16: ಕೊರೋನ ವೈರಸ್ ಸೋಂಕು ನಿಯಂತ್ರಣಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯು ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಸಮಾಜ ಕಲ್ಯಾಣ ಇಲಾಖೆಯ 44 ವಸತಿ ನಿಲಯ ಹಾಗೂ 54 ಮೊರಾರ್ಜಿ ದೇಸಾಯಿ  ವಸತಿ ಶಾಲೆ ಸೇರಿದಂತೆ ಒಟ್ಟು 98 ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ 784 ಜನರನ್ನು ಕ್ವಾರಂಟೈನ್‍ನಲ್ಲಿಡಲಾಗಿದೆ  ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.

ಬೆಂಗಳೂರಿನ ಎಂ.ಜಿ. ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ  ಆಶ್ರಯದಲ್ಲಿರುವವರನ್ನು ಭೇಟಿ ಮಾಡಿ, ಅವರ ಆರೋಗ್ಯ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ನೀಡುತ್ತಿರುವ ಸೌಲಭ್ಯ ಹಾಗೂ ಆರೈಕೆಯ ಬಗ್ಗೆ ವಿಚಾರಿಸಿದ ನಂತರ ಮಾತನಾಡಿದ ಅವರು, ಕೊರೋನ ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್ ಡೌನ್‍ನಿಂದ ಬಾಧಿತರಾದವರಿಗೆ, ನಿರಾಶ್ರಿತರಿಗೆ, ಅಸಂಘಟಿತ ಕೂಲಿ ಕಾರ್ಮಿಕರಿಗೆ, ಅಲೆಮಾರಿ ಜನಾಂಗದವರಿಗೆ  ಹಾಗೂ ಆಶ್ರಯ ಕೋರಿ ಬಂದ ಒಟ್ಟು  5,108   ಜನರಿಗೆ ಸಮಾಜ  ಇಲಾಖೆಯ  ವ್ಯಾಪ್ತಿಯ  92 ವಸತಿ ಶಾಲೆಗಳಲ್ಲಿ ಹಾಗೂ ನಿಲಯಗಳಲ್ಲಿ ಆಶ್ರಯ ಕಲ್ಪಿಸಲಾಗಿದೆ.

ರಾಜ್ಯದಲ್ಲಿ  ಯಾರೂ ಅನ್ನ, ನೀರು ದೊರಕದೇ ಬಳಲಬಾರದು ಎನ್ನುವುದು  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಶಯವಾಗಿದ್ದು, ಇದಕ್ಕಾಗಿ ಅನೇಕ  ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಅದಕ್ಕೆ ಪೂರಕವಾಗಿ ಸಮಾಜ ಕಲ್ಯಾಣ ಇಲಾಖೆಯು ಶ್ರಮಿಸುತ್ತಿದೆ. ಇಂತಹ ಸಂಕಷ್ಟದ ಸಮಯದಲ್ಲಿ   ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ  ಶ್ರೀ ಕುಮಾರ್ ನಾಯಕ್ ಅವರ ನೇತೃತ್ವದಲ್ಲಿ ಇಲಾಖೆ ಅಧಿಕಾರಿಗಳು ಸಕ್ರಿಯವಾಗಿ ಕ್ರಮಕೈಗೊಂಡಿರುವುದು ಶ್ಲಾಘನೀಯ ಸಂಗತಿಯಾಗಿದೆ. ತೊಂದರೆಗೊಳದ ಯಾವುದೇ ಅಂಘಟಿಕ ಕಾರ್ಮಿಕರು,  ಬೇರೆ ಸ್ಥಳಗಳಿಂದ ಬಂದವರು ಆಶ್ರಯ ಬೇಕಾದರೆ ಅಥವಾ ಯಾವುದೇ ತೊಂದರೆಗಳಿದ್ದರೂ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರನ್ನು ಸಂಪರ್ಕಿಸಿದರೆ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗುವುದು ಎಂದರು.

ವಸತಿ ನಿಲಯಗಳ   ಆಶ್ರಯದಲ್ಲಿರುವವರಿಗೆ  ಪ್ರತಿನಿತ್ಯ ತಿಂಡಿ, ಊಟೋಪಚಾರ ನೀಡಿ, ಆರೈಕೆ ಮಾಡಲಾಗುತ್ತಿದೆ.   ಸೂಕ್ತ ವಸತಿ, ಸ್ನಾನಗೃಹ ಸೌಲಭ್ಯ ಒದಗಿಸಿ, ಸಾಬೂನು ಸೇರಿದಂತೆ ಮೂಲಭೂತಸೌಕರ್ಯಗಳನ್ನು ನೀಡಲಾಗಿದೆ. ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಮೇಲ್ವಿಚಾರಣೆಯಲ್ಲಿ  ತಾಲೂಕು ವೈದ್ಯಾಧಿಕಾರಿಯೊಂದಿಗೆ ಸೂಕ್ತ ಸಮನ್ವಯ ಸಾಧಿಸಿಕೊಂಡು ವೈದ್ಯಕೀಯ ತಂಡವು  ಇವರ ಆರೋಗ್ಯ ತಪಾಸಣೆ ಕೈಗೊಳ್ಳುವಂತೆ ಕ್ರಮಕೈಗೊಳ್ಳಲಾಗಿದೆ.  ಈ ವಸತಿ ನಿಲಯ ಹಾಗೂ ವಸತಿ ಶಾಲೆಗಳಲ್ಲಿರುವವರು   ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ವ್ಯವಸ್ಥೆ ಮಾಡಲಾಗಿದೆ. ವಸತಿ ನಿಲಯಗಳ ಸಿಬ್ಬಂದಿ ವರ್ಗದವರು ಶ್ರಮಿಸುತ್ತಿದ್ದಾರೆ. ಈ ವಿದ್ಯಾರ್ಥಿ ನಿಲಯಗಳ ಆಶ್ರಯದಲ್ಲಿರುವವರು  ಯಾವುದೇ ಆತಂಕಕ್ಕೊಳಗಾಗಬಾರದು. ಸರ್ಕಾರದ ನಿರ್ದೇಶನಗಳನ್ನು ಪಾಲಿಸಬೇಕು ಎಂದು ಅವರು   ಮನವಿ ಮಾಡಿದ್ದಾರೆ. 

ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ್, ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X