Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಎ.20ರ ಬಳಿಕ ಜಿಲ್ಲೆಯಲ್ಲಿ...

ಚಿಕ್ಕಮಗಳೂರು: ಎ.20ರ ಬಳಿಕ ಜಿಲ್ಲೆಯಲ್ಲಿ ಲಾಕ್‍ಡೌನ್ ನಿರ್ಬಂಧ ಸಡಿಲಕ್ಕೆ ಸಿಎಂ ಬಳಿ ಚರ್ಚೆ; ಸಚಿವ ಸಿ.ಟಿ.ರವಿ

ವಾರ್ತಾಭಾರತಿವಾರ್ತಾಭಾರತಿ16 April 2020 5:51 PM IST
share
ಚಿಕ್ಕಮಗಳೂರು: ಎ.20ರ ಬಳಿಕ ಜಿಲ್ಲೆಯಲ್ಲಿ ಲಾಕ್‍ಡೌನ್ ನಿರ್ಬಂಧ ಸಡಿಲಕ್ಕೆ ಸಿಎಂ ಬಳಿ ಚರ್ಚೆ; ಸಚಿವ ಸಿ.ಟಿ.ರವಿ

ಚಿಕ್ಕಮಗಳೂರು, ಎ.15: ಜಿಲ್ಲೆಯಲ್ಲಿ ಇದುವರೆಗೂ ಕೋವಿಡ್-19 ಸಂಬಂಧಿತ ಯಾವುದೇ ಪಾಸಿಟಿವ್ ಪ್ರಕರಣಗಳು ದಾಖಲಾಗಿಲ್ಲ. ಇದಕ್ಕೆ ಸಾರ್ವಜನಿಕರ ಸಹಕಾರ ಹಾಗೂ ಜಿಲ್ಲಾಡಳಿತ ಕಟ್ಟುನಿಟ್ಟಿನ ಕಾನೂನು ಕ್ರಮಗಳೇ ಕಾರಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಹೇಳಿದರು.

 ನಗರದ ಪಾಂಚಜನ್ಯ ಬಿಜೆಪಿ ಕಾರ್ಯಾಲಯದಲ್ಲಿ ಛಾಯಾಗ್ರ್ರಾಹಕರ ಸಂಘದ ಬಡ ಕುಟುಂಬಗಳಿಗೆ ಉಚಿತ ದಿನಸಿ ಆಹಾರದ ಕಿಟ್‍ಗಳನ್ನು ವಿತರಿಸಿ ಮಾತನಾಡಿದ ಅವರು, ದೇಶಾದ್ಯಂತ ಲಾಕ್‍ಡೌನ್‍ನಿಂದಾಗಿ ಕೂಲಿ ಕಾರ್ಮಿಕರಿಂದ ಹಿಡಿದು ದೊಡ್ದ ಉದ್ದಿಮೆದಾರವರೆಗೂ ಆರ್ಥಿಕವಾಗಿ ಪೆಟ್ಟು ನೀಡಿದೆ. ಕೊರೋನಾ ಸೋಂಕು ಅನಿರೀಕ್ಷಿತವಾಗಿ ಹರಡುವ ಮೂಲಕ ಮುನುಕುಲದ ಮೇಲೆ ಪರಿಣಾಮ ಬೀರಿ ಸಾವಿರಾರು ಜನರನ್ನು ಬಲಿಪಡೆದಿದೆ. ಅಮೇರಿಕಾದಂತಹ ಮುಂದುವರಿದ ರಾಷ್ಟ್ರಗಳಲ್ಲಿ ಉತ್ಕøಷ್ಟ ಮಟ್ಟದ ಆಸ್ಪತ್ರೆಗಳಿದ್ದರೂ ಸಾವಿನ ಸಂಖ್ಯೆ ಹೆಚ್ಚಾಗಿದೆ. ಅದಕ್ಕೆ ಅಲ್ಲಿನ ಜನರಲ್ಲಿ ಜಾಗರೂಕತೆ ಇಲ್ಲದಿರುವುದು ಕಾರಣವಾಗಿದೆ. ದೇಶದಲ್ಲೂ ಜನತೆ ಸೋಂಕಿನ ಕುರಿತು ಎಚ್ಚರಿಕೆ ವಹಿಸುವುದು ಒಳಿತು ಎಂದರು.

ಅತ್ಯಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುವ ಜಿಲ್ಲೆ ನಮ್ಮದಾಗಿದೆ. ಆದರೆ ಜಿಲ್ಲೆಯಲ್ಲಿ ಸೋಂಕಿತರ ಪ್ರಕರಣ ಪತ್ತೆಯಾಗಿಲ್ಲ. ಜನತೆ ಸೋಂಕು ತಡೆಯಲು ಸಹಕರಿಸಿದ್ದಾರೆ. ಹಾಗಾಗಿ ಜಿಲ್ಲೆ ಹಸಿರು ವಲಯದಲ್ಲಿದ್ದು, ಇದುವರೆಗೂ ಯಾವುದೇ ಪಾಸಿಟಿವ್ ಪ್ರಕರಣ ದಾಖಲಾಗಿಲ್ಲ. ಇದು ಹೀಗೆಯೇ ಮುಂದುವರಿದರೆ ಇದೇ ತಿಂಗಳ 20ರ ಬಳಿಕ ಲಾಕ್‍ಡೌನ್ ನಿರ್ಬಂಧವನ್ನು ಸ್ವಲ್ಪ್ಪ ಪ್ರಮಾಣದಲ್ಲಿ ಸಡಿಲಿಕೆ ಮಾಡುವ ಬಗ್ಗೆ ಸರಕಾರ ಕ್ರಮವಹಿಸಲಿದೆ. ಜಿಲ್ಲೆಯ ಈ ಪರಿಸ್ಥಿತಿ ಕಾಯ್ದುಕೊಳ್ಳಲು ಸಾರ್ವಜನಿಕರು ಸಹಕಾರ ನೀಡಬೇಕೆಂದು ಸಚಿವ ರವಿ ಮನವಿ ಮಾಡಿದರು.

ಕೊರೋನಾ ಸೋಂಕಿನ ಬಗ್ಗೆ ಜನರಲ್ಲಿ ಭಯ ಹೆಚ್ಚಾಗಿದೆ. ಆದರೆ ಭಯ ಪಡದೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕಾಲಕಾಲಕ್ಕೆ ಹೊರಡಿಸುವ ನಿರ್ದೇಶನಗಳನ್ನು ಪಾಲಿಸಬೇಕು. ಪ್ರಧಾನಮಂತ್ರಿ ಮೋದಿ ದೇಶದ ಸಾಮಾಜಿಕ ಕಳಕಳಿಯಿಂದಾಗಿ ಲಾಕ್‍ಡೌನ್ ಘೋಷಿಸಿದ್ದಾರೆ. ಲಾಕ್‍ಡೌನ್ ಪರಿಣಾಮ ನಿಯಂತ್ರಿಸಲು ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಇದಕ್ಕೆ ಪ್ರತಿಯೊಬ್ಬ ಸಾರ್ವಜನಿಕರು ಸಹಕರಿಸಬೇಕು ಎಂದು ಕೇಳಿಕೊಂಡರು.

ಲಾಕ್‍ಡೌನ್ ಹಿನ್ನೆಲೆ ಸಾಕಷ್ಟು ಸ್ಥಳೀಯ ಮುಖಂಡರು, ಸಂಘ-ಸಂಸ್ಥೆಗಳು ಸ್ವಯಂ ಸೇವೆಯನ್ನು ಕೈಗೊಂಡು ನಗರದಲ್ಲಿ 15 ಸಾವಿರಕ್ಕೂ ಹೆಚ್ಚು ಉಚಿತವಾಗಿ ಆಹಾರ ಕಿಟ್ ನೀಡುವ ಮೂಲಕ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿವೆ. ಉಳ್ಳವರು ಕೂಡ ನೆರೆಹೊರೆಯ ಬಡಕುಟುಂಬಗಳಿಗೆ ಕೈಲಾದ ನೆರವು ನೀಡಲು ಮುಂದಾಗಬೇಕೆಂದು ಇದೇ ವೇಳೆ ಅವರು ಮನವಿ ಮಾಡಿದರು.

 ಜಿಲ್ಲಾ ಛಾಯಾಗ್ರಾಹಕ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಕಿಶೋರ್‍ಕುಮಾರ್ ಮಾತನಾಡಿ ಛಾಯಾಗ್ರಾಹಕರು ಸದಾ ಕ್ರಿಯಾಶೀಲರಾಗಿ ತಾವು ನಗುತ್ತಾ ಸದಾ ಇನ್ನೋಬ್ಬರನ್ನು ನಗಿಸುತ್ತಲೇ ಅವರ ಸುಂದರ ಕ್ಷಣಗಳನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯುತ್ತಾರೆ. ಆದರೆ ಛಾಯಾಗ್ರಾಹಕರು ಲಾಕ್‍ಡೌನಿಂದ ನಗಲಾರದ ಸ್ಥಿತಿಗೆ ತಲುಪಿದ್ದಾರೆ ಛಾಯಾಗ್ರಾಹಕ ವೃತ್ತಿಯನ್ನೆ ಜೀವನಾಧಾರ ಮಾಡಿಕೊಂಡು ಸಾವಿರಾರು ಮಂದಿಗೆ ದಿಕ್ಕು ತೋಚದಂತಾಗಿದೆ. ಇಂತಹ ಸಂದರ್ಭದಲ್ಲಿ ಛಾಯಾಗ್ರಾಹಕರ ನೆರೆವಿಗೆ ಬಂದಿರುವುದು ಅತ್ಯಂತ ಸಂತೋಷದ ವಿಷಯವಾಗಿದೆ ಎಂದ ಅವರು,  ಸಂಘಕ್ಕೆ ಸ್ವಂತ ನಿವೇಶನ ಮತ್ತು ಛಾಯಾಗ್ರಾಹಕರ ಅಭಿವೃದ್ಧಿ ನಿಗಮ ಸ್ಥಾಪನೆ ಸರಕಾರದ ಮಟ್ಟದಲ್ಲಿ ಚರ್ಚಿಸಿ ಕ್ರಮವಹಿಸಬೇಕೆಂದು ಸಚಿವ ರವಿ ಅವರಿಗೆ ಮನವಿ ಮಾಡಿದರು. 

ನಗರಸಭೆ ಮಾಜಿ ಅಧ್ಯಕ್ಷ ತಮ್ಮಯ್ಯ ಮಾತನಾಡಿದರು. ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಮಧುಕುಮಾರ್ ರಾಜ್ ಅರಸ್ ಜಿಲ್ಲಾ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಜಯಚಂದ್ರ, ಮಾಜಿ ಅಧ್ಯಕ್ಷರಾದ ಗಿರಿ ಸ್ಟುಡಿಯೋ ಪ್ರಕಾಶ್, ಜೀವನ್.ಕೆ.ಶೆಟ್ಟಿ, ಗಿರಿಧರ್‍ಯತೀಶ್, ತಾಲ್ಲೂಕು ಸಂಘದ ಅಧ್ಯಕ್ಷ ರಮೇಶ, ಕಾರ್ಯದರ್ಶಿ ಎಸ್.ಕೆ.ರವಿ, ಖಜಾಂಚಿ ಶಿವು, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X