ಕೋವಿಡ್-19: ಜಿಲ್ಲೆಯ ಬಡ ಕಲಾವಿದರಿಗೆ ಸಂಘ-ಸಂಸ್ಥೆಗಳ ನೆರವು
ಚಿಕ್ಕಮಗಳೂರು, ಎ.16: ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಮೇ 3ರವರೆಗೆ ರಾಷ್ಟ್ರಾದ್ಯಂತ ಲಾಕ್‍ಡೌನ್ ಘೋಷಣೆ ಮಾಡಲಾಗಿದೆ. ಲಾಕ್‍ಡೌನಿಂದಾಗಿ ಸಂಕಷ್ಟದಲ್ಲಿರುವ ಅಶಕ್ತ ಕಲಾವಿದರಿಗೆ ವಿವಿಧ ಸಂಘ-ಸಂಸ್ಥೆಗಳು ನೆರವು ನೀಡಲು ಮುಂದೆ ಬಂದಿವೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ.
ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಬಡ ಹಾಗೂ ನಿರ್ಗತಿಕ ಕಲಾವಿದರು, ಸಾಹಿತಿಗಳು ತಮ್ಮ ಹೆಸರು, ಅಂಚೆ ವಿಳಾಸ ಮತ್ತು ದೂರವಾಣಿ ಸಂಖ್ಯೆ ಸೇರಿದಂತೆ ತಮ್ಮ ಕಲಾ ಸೇವೆಯ ಸಂಪೂರ್ಣವಾದ ವಿವರಗಳನ್ನು ಕನ್ನಡ ಮತ್ತು ಸಂಸ್ಕೃತಿಕ ಇಲಾಖೆಯ ಇ-ಮೇಲ್ ವಿಳಾಸ kannadac@gmail.com ಗೆ ಕಳುಹಿಸಿಕೊಡಬಹುದಾಗಿದೆ. ಅಥವಾ ತಮ್ಮ ತಾಲೂಕಿನ ತಹಶೀಲ್ದಾರ್ ಕಚೇರಿಗಳಲ್ಲಿ ಆಹಾರ ಸಾಮಗ್ರಿಗಳು ಸೇರಿದಂತೆ ತುರ್ತು ಸೇವೆಗಳ ಪರಿಹಾರ ಕೋರಿ ಮನವಿ ಸಲ್ಲಿಸಬಹುದಾಗಿ ಎಂದು ಚಿಕ್ಕಮಗಳೂರಿನ ಕನ್ನಡ ಸಂಸೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸಿ.ರಮೇಶ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.





