ಬಂಟ್ವಾಳ: ಕೇರಳದಿಂದ ಬಂದು ಮಾಹಿತಿ ನೀಡದ ಆರೋಪ; ವ್ಯಕ್ತಿಯ ವಿರುದ್ಧ ದೂರು ದಾಖಲು
ಬಂಟ್ವಾಳ, ಎ.16: ಲಾಕ್ ಡೌನ್ ನಡುವೆಯೂ ಕೇರಳದಿಂದ ಬಂದು ಸ್ಥಳೀಯ ಆರೋಗ್ಯ ಇಲಾಖೆಗೆ ಯಾವುದೇ ಮಾಹಿತಿ ನೀಡದ ವ್ಯಕ್ತಿಯೊಬ್ಬರ ಮೇಲೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಜಿಪ ಮೂಡ ಗ್ರಾಮದ ಬೊಳ್ಳಾಯಿ ನಿವಾಸಿ ಅಶ್ರಫ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.
ಕೇರಳದಲ್ಲಿ ಕೆಲಸ ಮಾಡುತ್ತಿದ್ದ ಅಶ್ರಫ್ ಕೆಲವು ದಿನಗಳ ಹಿಂದೆ ಊರಿಗೆ ಆಗಮಿಸಿದ್ದರೂ ಸ್ಥಳೀಯ ಆರೋಗ್ಯ ಇಲಾಖೆಗೆ ಯಾವುದೇ ಮಾಹಿತಿ ನೀಡಿರಲಿಲ್ಲ. ಈ ಬಗ್ಗೆ ಮಾಹಿತಿ ದೊರೆತ ಆರೋಗ್ಯ ಇಲಾಖೆಯ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು ಅದರಂತೆ ಪೊಲೀಸರು ಬುಧವಾರ ಮಧ್ಯಾಹ್ನ ಆತನ ಮನೆಗೆ ತೆರಳಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಕ್ವಾರಂಟೈನ್ ಗೆ ಕಳುಹಿಸಿದ್ದಾರೆ. ಅಲ್ಲದೆ ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Next Story





