Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ದುಡಿಮೆಯಿಲ್ಲದೆ ಸಂಕಷ್ಟಕ್ಕೀಡಾದ ಆಟೊ...

ದುಡಿಮೆಯಿಲ್ಲದೆ ಸಂಕಷ್ಟಕ್ಕೀಡಾದ ಆಟೊ ಚಾಲಕರು

ಕೊರೋನ ಲಾಕ್‌ಡೌನ್

ಬಾಬುರೆಡ್ಡಿ ಚಿಂತಾಮಣಿಬಾಬುರೆಡ್ಡಿ ಚಿಂತಾಮಣಿ17 April 2020 10:31 AM IST
share
ದುಡಿಮೆಯಿಲ್ಲದೆ ಸಂಕಷ್ಟಕ್ಕೀಡಾದ ಆಟೊ ಚಾಲಕರು

ಬೆಂಗಳೂರು, ಎ.16: ಕೊರೋನ ನಿಯಂತ್ರಿಸುವ ಉದ್ದೇಶದಿಂದ ದೇಶ ದಾದ್ಯಂತ ಲಾಕ್‌ಡೌನ್ ಘೋಷಿಸಿರುವ ಪರಿಣಾಮದಿಂದಾಗಿ ರಾಜಧಾನಿಯಲ್ಲಿ ಆಟೊಗಳು ರಸ್ತೆಗಳಿಯದ ಹಿನ್ನೆಲೆಯಲ್ಲಿ ಚಾಲಕರು ದುಡಿಮೆಯಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

ನಿತ್ಯ ಜೀವನಕ್ಕೆ ಆಟೊವನ್ನೇ ಅವಲಂ ಬಿಸಿದ್ದ ಬಹುತೇಕ ಆಟೊಚಾಲಕರು ಹಾಗೂ ಅವರ ಕುಟುಂಬದವರು ಒಂದು ಹೊತ್ತಿನ ಊಟಕ್ಕೂ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಅಧಿಕವಾಗುತ್ತಲೇ ಇದೆ. ಹೀಗಾಗಿ, ಇಲ್ಲಿ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಬೀದಿಯಲ್ಲಿ ಯಾರೂ ಓಡಾಡದಂತೆ ಕಟ್ಟೆಚ್ಚರ ವಹಿಸಲಾಗಿದೆ. ಅದರ ಪರಿಣಾಮ ಆಟೊ ಚಾಲಕರ ಮೇಲೆಯೂ ಬೀರಿದೆ.

ಆಟೊ ಓಡದೇ ಇರುವುದರಿಂದ ನಮ್ಮ ಗಳಿಕೆ ಶೂನ್ಯವಾಗಿದೆ. ಕೈಯಲ್ಲಿ ದುಡ್ಡಿಲ್ಲ. ಮನೆಯಲ್ಲಿದ್ದ ದಿನಸಿ, ತರಕಾರಿ ಎಲ್ಲವೂ ಖಾಲಿಯಾಗಿದೆ. ಈ ಹಿಂದೆ ಉಳಿಸಿಕೊಂಡಿದ್ದ ಅಲ್ಪಸ್ವಲ್ಪ ದಿನಸಿಯೂ ಖಾಲಿಯಾಗಿದೆ. ಈಗ ನಮ್ಮ ಬಳಿ ಹಾಲು, ಮೊಸರು, ಹಣ್ಣು, ತರಕಾರಿ, ದಿನಸಿಗಳನ್ನು ಖರೀದಿ ಮಾಡಲು ಸಹ ದುಡ್ಡಿಲ್ಲ. ಮನೆಯಲ್ಲಿ ಹೆಂಡತಿ, ಮಕ್ಕಳ ಕಷ್ಟ ನೋಡೋಕಾಗುತ್ತಿಲ್ಲ. ಯಾರೂ ಸಾಲವನ್ನೂ ನೀಡುತ್ತಿಲ್ಲ. ಬದುಕು ನಡೆಸುವುದು ಕಷ್ಟವಾಗುತ್ತಿದೆ ಎಂದು ಆಟೊ ಚಾಲಕ ನಾರಾಯಣಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

  ಮನೆಯಲ್ಲಿ ನಮಗೆ ಮೂರು ಜನ ಹೆಣ್ಣು ಮಕ್ಕಳು, ಒಬ್ಬ ಗಂಡು ಮಗುವಿದ್ದಾನೆ. ಮೂರು ಜನರು ಶಾಲೆಗೆ ಹೋಗುತ್ತಿದ್ದರು. ನಾನು ಆಟೊ ಓಡಿಸಿಕೊಂಡು ಮನೆಯನ್ನು ನೋಡಿಕೊಳ್ಳುತ್ತಿದ್ದೆ. ಹೆಂಡತಿಯು ಅನಾರೋಗ್ಯದಿಂದ ನರಳುತ್ತಿದ್ದಾಳೆ. ಇಂತಹ ಸಂದರ್ಭದಲ್ಲಿ ಲಾಕ್‌ಡೌನ್ ಘೋಷಣೆಯಾಗಿದೆ. ಆದರೆ, ಇದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಾದರೂ, ನಮ್ಮ ಬದುಕಿನ ಮೇಲೆ ವಿಪರೀತ ಪರಿಣಾಮ ಬೀರಿದೆ ಎಂದು ಮತ್ತೊಬ್ಬ ಆಟೊ ಚಾಲಕ ನವಾಜ್ ಹೇಳಿದ್ದಾರೆ.

ನನಗೆ ಅನೇಕ ಆಟೊ ಚಾಲಕರು ಕರೆ ಮಾಡಿ, ವಾಟ್ಸ್‌ಆಪ್ ಮೂಲಕ ಸಂದೇಶ ಕಳುಹಿಸಿ ಸಾರ್ ನಮಗೆ ತುಂಬಾ ಕಷ್ಟವಾಗುತ್ತಿದೆ. ಏನಾದರೂ ಸಹಾಯ ಮಾಡಿ ಎನ್ನುತ್ತಿದ್ದಾರೆ. ಆದರೆ, ನಾವೇ ಅಸಹಾಯಕರಾಗಿದ್ದೇವೆ. ಇಂತಹ ಸಂದರ್ಭದಲ್ಲಿ ಏನು ಮಾಡೋದು ತಿಳಿಯುತ್ತಿಲ್ಲ.

-ಸಿ.ಎನ್.ಶ್ರೀನಿವಾಸ್, ಎಆರ್‌ಡಿಯು ಪ್ರಧಾನ ಕಾರ್ಯದರ್ಶಿ

ಸರಕಾರಕ್ಕೆ ಚಾಲಕರ ಬೇಡಿಕೆಗಳು

► ಪ್ರತಿಯೊಬ್ಬ ಆಟೊ ಚಾಲಕರಿಗೂ ಸರಕಾರದಿಂದ 50 ರೂ. ಸಾವಿರ ಸಾಲ ನೀಡಬೇಕು.

► ಎ.20 ಬಳಿಕ ಆಟೊ ಓಡಿಸಲು ಅವಕಾಶ ನೀಡಬೇಕು ಅಥವಾ ಸರಕಾರದಿಂದ ಬದುಕಲು ನೆರವು ನೀಡಬೇಕು.

► ವಿದ್ಯುತ್ ಹಾಗೂ ನೀರಿನ ಶುಲ್ಕವನ್ನು ಮೂರು ತಿಂಗಳವರೆಗೆ ಮನ್ನಾ ಮಾಡಬೇಕು.

► ಶಾಲೆಗಳಲ್ಲಿ ಹೆಚ್ಚುವರಿ ಡೊನೇಶನ್ ಪಡೆಯದಂತೆ ಸೂಚಿಸಬೇಕು.

► ವಾಹನ ಸಾಲ ಬಡ್ಡಿ ಪಡೆಯದಂತೆ ಕಾನೂನು ರೂಪಿಸಬೇಕು ಹಾಗೂ ಇಎಂಐ ನೀಡುವಂತೆ ದಕ್ಕೆ ಕಡಿವಾಣ ಹಾಕಬೇಕು.

share
ಬಾಬುರೆಡ್ಡಿ ಚಿಂತಾಮಣಿ
ಬಾಬುರೆಡ್ಡಿ ಚಿಂತಾಮಣಿ
Next Story
X