ಉಡುಪಿ: ಕೋವಿಡ್-19 ನಿಯಂತ್ರಣ ಕುರಿತ ಸಭೆ
ಉಡುಪಿ, ಎ.17: ನೋವೆಲ್ ಕೊರೋನ ವೈರಸ್ (ಕೋವಿಡ್-19) ಸೋಂಕು ಹರಡುವುದನ್ನು ತಡೆಗಟ್ಟಲು ಹಾಗೂ ನಿಯಂತ್ರಣಕ್ಕಾಗಿ ಕುಂದಾಪುರ ಮತ್ತು ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೈಗೊಂಡ ಕ್ರಮಗಳು ಮತ್ತು ಕೈಗೊಳ್ಳಬೇಕಾದ ಮುಂದಿನ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲಿ ಸಲು, ರಾಜ್ಯ ಮೀನುಗಾರಿಕೆ, ಬಂದರು, ಮುಜರಾಯಿ ಹಾಗೂ ಒಳನಾಡು ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ಎ.18ರ ಬೆಳಗ್ಗೆ 10 ಗಂಟೆಗೆ ಕುಂದಾಪುರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಯಲಿದೆ ಎಂದು ಕುಂದಾಪುರ ಉಪಭಾಗಾಧಿಕಾರಿ ಗಳ ಪ್ರಕಟಣೆ ತಿಳಿಸಿದೆ.
Next Story





