ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ವೇತನ, ರೇಷನ್ ಸೌಲಭ್ಯದ ಭರವಸೆ ನೀಡಿದ ಸುರೇಶ್ ಕುಮಾರ್
ಬೆಂಗಳೂರು, ಎ.17: ಬೆಂಗಳೂರಿನಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಅವರ ಕಂಪೆನಿಯವರು ಹಲವು ತಿಂಗಳುಗಳಿಂದ ವೇತನ ನೀಡಿಲ್ಲ. ಈ ಬಗ್ಗೆ ಸ್ವರಾಜ್ ಅಭಿಯಾನದ ಕಾರ್ಯಕರ್ತ ಕಲೀಮುಲ್ಲಾ ರಾಜ್ಯ ಸರಕಾರದ ಗಮನ ಸೆಳೆದಿದ್ದಾರೆ.
ಸಚಿವ ಎಸ್.ಸುರೇಶ್ ಕುಮಾರ್ ಸ್ವತಃ ಸ್ಥಳಕ್ಕೆ ಭೇಟಿ ನೀಡಿ ಕಾರ್ಮಿಕರಿಗೆ ಬರಬೇಕಿರುವ ಬಾಕಿಯನ್ನು ಪಾವತಿಸುವುದು ಹಾಗೂ ಎರಡು ದಿನಗಳಲ್ಲಿ ರೇಷನ್ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಯೋಗೇಂದ್ರ ಯಾದವ್ ಟ್ವೀಟ್ ಮಾಡಿದ್ದಾರೆ.
ಎಚ್‍ಎಎಲ್ ಸಮೀಪ ವಾಸವಿರುವ ಕಟ್ಟಡ ನಿರ್ಮಾಣ ಕಾರ್ಮಿಕರ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಸುರೇಶ್ ಕುಮಾರ್, ಕಾರ್ಮಿಕರ ಅಹವಾಲುಗಳನ್ನು ಆಲಿಸಿ, ಅವರಿಗೆ ಸಂಬಂಧಪಟ್ಟ ಕಂಪೆನಿಗಳಿಂದ ಬರಬೇಕಿರುವ ಬಾಕಿ ವೇತನ ಕೊಡಿಸುವುದು ಹಾಗೂ ದಿನನಿತ್ಯದ ಅಗತ್ಯಕ್ಕೆ ಬೇಕಿರುವ ರೇಷನ್ ಸೌಲಭ್ಯವನ್ನು ಕಲ್ಪಿಸುವುದಾಗಿ ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ಯೋಗೇಂದ್ರ ಯಾದವ್ ಟ್ವೀಟ್ ಮಾಡಿದ್ದರು.
Next Story





