ಗ್ರಾಮಾಂತರ ಪ್ರದೇಶಗಳಲ್ಲಿ ಗಂಜಿ ಕೇಂದ್ರ ಸ್ಥಾಪಿಸಲು ಐವನ್ ಡಿಸೋಜ ಆಗ್ರಹ
ಮಂಗಳೂರು, ಎ.18: ಗ್ರಾಮಾಂತರ ಪ್ರದೇಶಗಳಲ್ಲಿ ಗಂಜಿ ಕೇಂದ್ರ ಸ್ಥಾಪಿಸಲು ಮತ್ತು ಆಹಾರ ಧಾನ್ಯಗಳನ್ನು ಕೂಡಲೇ ಬಿಡುಗಡೆ ಮಾಡಲು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಆಗ್ರಹಿಸಿದ್ದಾರೆ.
ಗ್ರಾಮಾಂತರ ಪ್ರದೇಶಗಳಲ್ಲಿ ಕೂಲಿ ಕಾರ್ಮಿಕರು, ದಿನಗೂಲಿ ಕೆಲಸಗಾರರು, ಚಾಲಕರು, ಅಸಂಘಟಿತ ಕಾರ್ಮಿಕರಿಗೆ ದಿನ ನಿತ್ಯದ ಆಹಾರಕ್ಕೆ ತೊಂದರೆಯಾಗುತ್ತಿದೆ. ಪ್ರತಿಯೊಂದು ಗ್ರಾಮಗಳಲ್ಲಿ ಗಂಜಿ ಕೇಂದ್ರಗಳು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕೆಂದು ಐವನ್ ಒತ್ತಾಯಿಸಿದ್ದಾರೆ.
ಗ್ರಾಮಾಂತರ ಪ್ರದೇಶಗಳಲ್ಲಿ ಕೃಷಿ ಚಟುವಟಿಕೆಗಳನ್ನು ನಡೆಸಲು ಮತ್ತು ನರೇಗಾದ ಕೆಲಸಗಳನ್ನು ಪ್ರಾರಂಭಿಸಿ ಅವರಿಗೆ ದಿನಗೂಲಿ ಪಾವತಿಸುವ ಕೆಲಸ ಕೈಗೊಳ್ಳಬೇಕು ಎಂದು ಐವನ್ ಮನವಿ ಮಾಡಿದ್ದಾರೆ.
Next Story





