Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತೀವ್ರ ಉಸಿರಾಟ ತೊಂದರೆ ಇರುವ...

ತೀವ್ರ ಉಸಿರಾಟ ತೊಂದರೆ ಇರುವ ರೋಗಿಗಳಿದ್ದಲ್ಲಿ ಮಾಹಿತಿ ನೀಡಿ: ಜಿಲ್ಲಾಧಿಕಾರಿ ಜಿ.ಜಗದೀಶ್

ವಾರ್ತಾಭಾರತಿವಾರ್ತಾಭಾರತಿ18 April 2020 8:35 PM IST
share
ತೀವ್ರ ಉಸಿರಾಟ ತೊಂದರೆ ಇರುವ ರೋಗಿಗಳಿದ್ದಲ್ಲಿ ಮಾಹಿತಿ ನೀಡಿ: ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ, ಎ.18: ಜಿಲ್ಲೆಯ ಯಾವುದೇ ಖಾಸಗಿ ಕ್ಲಿನಿಕ್ ಮತ್ತು ಆಸ್ಪತ್ರೆಗಳಿಗೆ ತೀವ್ರ ಉಸಿರಾಟ ತೊಂದರೆ, ಜ್ವರ ಮತ್ತು ಶೀತ ಕೆಮ್ಮು ಇರುವ ರೋಗಿಗಳು ಕಂಡುಬಂದಲ್ಲಿ ಅವರ ವಿವರಗಳನ್ನು ಜಿಲ್ಲಾಡಳಿತಕ್ಕೆ ನೀಡುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್‌ಗಳ ವೈದ್ಯರುಗಳಿಗೆ ಸೂಚನೆ ನೀಡಿದ್ದಾರೆ.

ಶನಿವಾರ, ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನೋವೆಲ್ ಕೊರೋನ ವೈರಸ್ (ಕೋವಿಡ್ -19) ನಿಯಂತ್ರಣ ಕುರಿತಂತೆ ರಚಿಸಲಾಗಿರುವ ಜಿಲ್ಲಾ ತಜ್ಞರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತಿದ್ದರು.

ಪ್ರಸ್ತುತ ಜಿಲ್ಲೆಯಲ್ಲಿ ದಾಖಲಾಗಿದ್ದ ಮೂವರು ಕೊರೋನಾ ರೋಗಿಗಳು ಆಸ್ಪತ್ರೆಯಿಂದ ಗುಣಮುಖರಾಗಿ ತೆರಳಿದ್ದು, ಜಿಲ್ಲೆಯ ಒಳಗೆ ಇನ್ನು ಕೊರೋನ ಕಾಣಿಸಿಕೊಳ್ಳುವ ಸಾಧ್ಯತೆ ಕಡಿಮೆ ಇದೆ. ಆದ್ದರಿಂದ ಜಿಲ್ಲೆಯ ಗಡಿಗಳನ್ನು ಈಗಾಗಲೇ ಸೀಲ್ ಮಾಡಿದ್ದು, ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ. ತುರ್ತು ವೈದ್ಯಕೀಯ ಪ್ರಕರಣಗಳಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ ಎಂದರು.

ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಖಾಸಗಿ ಕ್ಲಿನಿಕ್ ಮತ್ತು ಆಸ್ಪತ್ರೆಗಳಿಗೆ ತೀವ್ರ ಉಸಿರಾಟ ತೊಂದರೆ ಮತ್ತು ಶೀತ ಕೆಮ್ಮು ಇರುವ ರೋಗಿಗಳು ಚಿಕಿತ್ಸೆಗಾಗಿ ಬಂದಲ್ಲಿ, ಅವರ ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ದಾಖಲಿಸಿಕೊಂಡು ಜಿಲ್ಲಾಡಳಿತಕ್ಕೆ ನೀಡುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಜಿಲ್ಲೆಯಲ್ಲಿ ಒಂದು ವೇಳೆ ಪಾಸಿಟಿವ್ ಪ್ರಕರಣ ಕಂಡುಬಂದಲ್ಲಿ, ರೋಗಿ ಯನ್ನು ಸಾವಿನಿಂದ ಪಾರು ಮಾಡುವುದು ತಜ್ಞರ ಸಮಿತಿಯ ಪ್ರಮುಖ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಪಾಸಿಟಿವ್ ಕಂಡುಬಂದ ತಕ್ಷಣದಿಂದ ಎಲ್ಲಾ ಅತ್ಯಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಜಿಲ್ಲೆಯೊಳಗೆ ವೈದ್ಯಕೀಯ ಪ್ರವೇಶ ತುರ್ತು ಚಿಕಿತ್ಸೆಗಾಗಿ ಬರುವ ಹೊರ ಜಿಲ್ಲೆಯ ರೋಗಿಗಳು, ತಮಗೆ ಕೋವಿಡ್-19ನ ಲಕ್ಷಣಗಳು ಇಲ್ಲ ಎಂಬುದರ ಬಗ್ಗೆ ಆಯಾ ಜಿಲ್ಲೆಯ ಡಿಹೆಚ್‌ಓ ಅಥವಾ ಟಿಹೆಚ್‌ಓ ಮೂಲಕ ದೃಢಪತ್ರ ಪಡೆದುಕೊಂಡು ಬರುವ ಕುರಿತಂತೆ ತಜ್ಞರ ಸಮಿತಿ ತೀರ್ಮಾನಿಸಿತು. ಈ ಕುರಿತಂತೆಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯುವುದಾಗಿ ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲೆಗೆ ಆಗಮಿಸುವ ಹೊರ ಜಿಲ್ಲೆಗಳ ರೋಗಿಗಳಿಗೆ ಅನಿವಾರ್ಯವಾಗಿ ತುರ್ತು ಚಿಕಿತ್ಸೆ ಅಗತ್ಯವಿದ್ದರೆ ಮಾತ್ರ ಉಡುಪಿ ಜಿಲ್ಲೆಯ ಸಂಬಂದಪಟ್ಟ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ಆಗಮಿಸಲು ಸೂಚನೆ ನೀಡುವಂತೆ ಹಾಗೂ ತೀವ್ರವಲ್ಲದ ಚಿಕಿತ್ಸೆಗೆ ಜಿಲ್ಲೆಗೆ ಆಗಮಿಸಲು ಅನುಮತಿ ನೀಡದಂತೆ ತಜ್ಞರ ಸಮಿತಿ ತೀರ್ಮಾನಿಸಿತು.

ಮಣಿಪಾಲದದಲ್ಲಿ ಲಾಕ್‌ಡೌನ್ ಆದಾಗಿನಿಂದ 1000 ಮಂದಿ ಹೊರ ಜಿಲ್ಲೆಯ ರೋಗಿಗಳಿಗೆ ಮಾತ್ರ ಚಿಕಿತ್ಸೆಗೆ ಬರಲು ಅನುಮತಿ ನೀಡಿದ್ದು, ಇತರೆ ಸಮಯದಲ್ಲಿ ಮಣಿಪಾಲಕ್ಕೆ ಆಗಮಿಸುವ ರೋಗಿಗಳ ಸಂಖ್ಯೆ ಸುಮಾರು 15 ರಿಂದ 20 ಸಾವಿರ ಇರುತ್ತಿತ್ತು ಎಂದು ಕೆಎಂಸಿ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಮಾಹಿತಿ ನೀಡಿದರು.

ಹೊರ ಜಿಲ್ಲೆಗಳ ರೋಗಿಗಳೊಂದಿಗೆ ಚಿಕಿತ್ಸೆಗೆ ಆಗಮಿಸಲು, ರೋಗಿಯ ಜೊತೆಗೆ ಬರುವ ಸಹಾಯಕರ ಸಂಖ್ಯೆಯನ್ನು ನಿಯಮಿತಗೊಳಿಸುವ ಬಗ್ಗೆ ಚರ್ಚೆ ನಡೆಯಿತು. ರೋಗಿಯು ಚಿಕಿತ್ಸೆಗೆ ಬರಲು ಅನುಮತಿ ನೀಡಿದಲ್ಲಿ ಆತನ ವಿವರಗಳನ್ನು ನೀಡಿದಲ್ಲಿ, ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ಮಾಡಲು ಸಹಾಯ ವಾಗುತ್ತದೆ ಎಂದು ಜಿ.ಜಗದೀಶ್ ತಿಳಿಸಿದರು.

ಸಭೆಯಲ್ಲಿ ಜಿಪಂ ಸಿಇಓ ಪ್ರೀತಿ ಗೆಹ್ಲೋಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಹೆಚ್‌ಓ ಡಾ.ಸುಧೀರ್‌ಚಂದ್ರ ಸೂಡಾ, ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯಕ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ಜಿಲ್ಲಾ ಕೋವಿಡ್ ನೋಡೆಲ್ ಅಧಿಕಾರಿ ಡಾ. ಪ್ರಶಾಂತ್ ಭಟ್, ಆದರ್ಶ ಆಸ್ಪತ್ರೆಯ ನಿರ್ದೇಶಕ ಡಾ. ಚಂದ್ರಶೇಖರ್, ಕೆಎಂಸಿಯ ತಜ್ಞ ವೈದ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X