ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ
ಮಣಿಪಾಲ, ಎ.18: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅಲೆವೂರು ಜೋಡುರಸ್ತೆಯ ನಿವಾಸಿ ಅಪ್ಪಯ್ಯ ಪ್ರಭು(86) ಎಂಬವರು ಎ.17ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ: ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಶ್ರೀನಿವಾಸ ಪೈ(46) ಎಂಬವರು ಎ.14ರಿಂದ ಎ.18ರ ಮಧ್ಯಾವಧಿಯಲ್ಲಿ ಕಾಡೂರು ಬಾಯರ ಬೆಟ್ಟು ಹಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





