‘ವಾರಿಯರ್ ಆಫ್ ದಿ ಡೇ’ ಆಗಿ ಬಸವರಾಜ್ ಪಾಟೀಲ್ ಆಯ್ಕೆ

ಮಂಗಳೂರು, ಎ.18: ಕೊರೋನ ಹಿನ್ನೆಲೆಯಲ್ಲಿ ನಗರದಲ್ಲಿ ಲಾಕ್‌ಡೌನ್ ಜಾರಿಯಲ್ಲಿರುವ ಸಂದರ್ಭ ಉತ್ತಮವಾಗಿ ಕಾರ್ಯನಿರ್ವಹಿಸಿದ ಓರ್ವ ಪೊಲೀಸ್ ಸಿಬ್ಬಂದಿಯನ್ನು ನಗರ ಪೊಲೀಸ್ ಆಯುಕ್ತರು ದಿನದ ಕೊವಿಡ್ ವಾರಿಯರ್ ಎಂದು ಗೌರವಿಸಲಿದ್ದಾರೆ. ಅದರಂತೆ ಶನಿವಾರ ‘ವಾರಿಯರ್ ಆಫ್ ದಿ ಡೇ’ ಆಗಿ ಮೂಡುಬಿದಿರೆ ಠಾಣೆಯ ಪಿಸಿ ಬಸವರಾಜ್ ಪಾಟೀಲ್ ಆಯ್ಕೆಯಾಗಿದ್ದಾರೆ.
ಎ.17ರಂದು ಮೂಡುಬಿದಿರೆಯ ಆಳ್ವಾಸ್ ಆಸ್ಪತ್ರೆಯಲ್ಲಿ ಮಹಿಳೆಯೋರ್ವಳಿಗೆ ತುರ್ತು ಶಸ್ತ್ರ ಚಿಕಿತ್ಸೆಯ ಸಂದರ್ಭ ರಕ್ತದ ಅಗತ್ಯತೆಯನ್ನು ಮೂಡುಬಿದಿರೆ ಬ್ಲಡ್ ಡೋನರ್ಸ್ ಹೆಲ್ಪಲೈನ್ ಮೂಲಕ ತಿಳಿದುಕೊಂಡು ಸ್ವಇಚ್ಛೆಯಿಂದ ಮೂಡುಬಿದಿರೆ ಆಳ್ವಾಸ್ ಆಸ್ಪತ್ರೆಗೆ ತೆರಳಿ ರಕ್ತವನ್ನು ನೀಡಿ ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರರಾಗಿರುತ್ತಾರೆ ಎಂದು ಪ್ರಕಟನೆ ತಿಳಿಸಿದೆ.
Next Story





